ಬೆಂಗಳೂರು: 439 ಕೋಟಿ ರೂ. ಸಾಲವನ್ನು ಮರುಪಾವತಿ ಮಾಡದೆ ವಂಚಿಸಿದ್ದಾರೆ ಎಂದು ಬೆಂಗಳೂರಿನ ಚಾಮರಾಜಪೇಟೆಯ ಸಹಕಾರಿ ಬ್ಯಾಂಕ್ನ ಜನರಲ್ ಮ್ಯಾನೇಜರ್ ಆರೋಪಿಸಿದ ಹಿನ್ನೆಲೆ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ಪ್ರಧಾನ ವ್ಯವಸ್ಥಾಪಕ (ಬ್ಯಾಂಕಿಂಗ್) ರಾಜಣ್ಣ, ಬೆಳಗಾವಿಯ ಗೋಕಾಕ್ನಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್ನ ಆಗಿನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್ ಜಾರಕಿಹೊಳಿ ಮತ್ತು ವಸಂತ ವಿ ಪಾಟೀಲ್ ಮತ್ತು ಶಂಕರ ಎ ಪೊವಾಡೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇವರೆಲ್ಲರೂ ಕಾರ್ಖಾನೆಯನ್ನು ಸ್ಥಾಪಿಸಲು ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದರು ಎಂದು ಉಲ್ಲೇಖಿಸಲಾಗಿದೆ.
2013ರ ಜುಲೈ 12 ಮತ್ತು 2017ರ ಮಾರ್ಚ್ 31ರ ನಡುವೆ ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಮತ್ತು ಅದರ ಇತರ ಶಾಖೆಗಳಿಂದ 232.88 ಕೋಟಿ ರೂ. ಸಾಲವನ್ನು ಕಂತುಗಳಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಸಾಲ ಮರುಪಾವತಿಯಾಗಿಲ್ಲವೆಂದು ರಾಜಣ್ಣ ಆರೋಪಿಸಿದ್ದು, 2023ರ ಆಗಸ್ಟ್ 31ರ ಹೊತ್ತಿಗೆ ಈ ಸಾಲವು 439.07 ಕೋಟಿ ರೂ. ತಲುಪಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಆನೇಕಲ್ನಲ್ಲಿ ಮಾದಕ ವಸ್ತುಗಳು ಬೇಡ ಜಾಗೃತಿ ಅಭಿಯಾನ
ನಿರ್ದೇಶಕರ ಬದಲಾವಣೆ
ಸಾಲ ಮರುಪಾವತಿಗೆ ಮುನ್ನ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಅಥವಾ ನಿರ್ದೇಶಕರನ್ನು ಬ್ಯಾಂಕ್ಗೆ ತಿಳಿಸದೆ ಬದಲಾವಣೆ ಮಾಡುವಂತಿಲ್ಲವೆಂಬ ಷರತ್ತು ಉಲ್ಲಂಘಿಸಲಾಗಿದೆ ಎಂದು ರಾಜಣ್ಣ ದೂರಿನಲ್ಲಿ ತಿಳಿಸಿದ್ದಾರೆ.
ವಂಚನೆ ಮತ್ತು ಸಾಲ ಮರುಪಾವತಿ ತಪ್ಪಿಸುವ ಉದ್ದೇಶದಿಂದ, ಬ್ಯಾಂಕ್ಗೆ ತಿಳಿಸದೆ ಮೂವರು ತಮ್ಮ ಹುದ್ದೆಯನ್ನು ತ್ಯಜಿಸಿ ಬೇರೆಯವರನ್ನು ನಿರ್ದೇಶಕರನ್ನಾಗಿ ನೇಮಿಸಿ ಬ್ಯಾಂಕ್ಗೆ ವಂಚಿಸಿದ್ದಾರೆ ಎಂದು ರಾಜಣ್ಣ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾರೆ. ರಾಜಣ್ಣ ಜನವರಿ 5ರಂದು ವಿವಿ ಪುರಂ ಪೊಲೀಸರನ್ನು ಸಂಪರ್ಕಿಸಿ ಈ ದೂರು ನೀಡಿದ್ದಾರೆ.
ವಿವಿ ಪುರಂ ಪೊಲೀಸರು ಜಾರಕಿಹೊಳಿ, ಪಾಟೀಲ್ ಮತ್ತು ಪೊವಡೆ ವಿರುದ್ಧ ಐಪಿಸಿ ಸೆಕ್ಷನ್ 406 (ಕ್ರಿಮಿನಲ್ ನಂಬಿಕೆ ಉಲ್ಲಂಘನೆಗೆ ಶಿಕ್ಷೆ), 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆಗೆ ಪ್ರೇರೇಪಿಸುವುದು) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮೆಣಸಿನಕಾಯಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.