/kannada/photo-gallery/shikanji-buttermilk-is-helpful-in-dissolving-stubborn-obesity-around-the-waist-249358 ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! 249358

VIDEO: ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ

 ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಂಗಳವಾರ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು. 

Last Updated : Aug 13, 2019, 02:32 PM IST
VIDEO: ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ title=

ಶಿವಮೊಗ್ಗ: ಪ್ರವಾಹಪೀಡಿತ ಪ್ರದೇಶಗಳ ಪರಿಶೀಲನೆಗಾಗಿ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಂಗಳವಾರ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುತ್ರ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಸಾಥ್ ನೀಡಿದರು.

ಇದೇ ವೇಳೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ನಿರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಶಿಕಾರಿಪುರ ಕ್ಷೇತ್ರದಲ್ಲಿ 1,300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರಾವರಿ ಯೋಜನೆಗೆ ಟೆಂಡರ್ ಕರೆಯಲಾಗಿದೆ. ಅಲ್ಲದೆ, ಈ ಯೋಜನೆಯಡಿ ಹಲವು ಕೆರೆಗಳಿಗೆ ನಿರು ತುಂಬಿಸಲಾಗುವುದು ಎಂದು ಹೇಳಿದರು. 

ಜಿಲ್ಲೆಯಲ್ಲಿರುವ ಜೋಗ ಜಲಪಾದ ವಿಶ್ವ ಪ್ರಸಿದ್ಧಿ. ಸದ್ಯ ಈ ಪ್ರವಾಸಿಕೆನ್ದ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಈಗಾಗಲೇ ಕಾಮಗಾರಿ ಆರಂಭವಾಗಿ ಅರ್ಧಕ್ಕೆ ನಿಂತಿರುವ ವಿಮಾನ ನಿಲ್ದಾಣ ಕಾಮಗಾರಿ ಪುನರಾರಂಭಕ್ಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ. ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ಮುಂದಿನ ಕೆಲವು ತಿಂಗಳಲ್ಲಿ ರಾಜ್ಯದ ಜನತೆ ಬದಲಾವಣೆ ಕಾಣಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.