ಬೆಂಗಳೂರು: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ, ಮಹಿಳಾ ಚಳವಳಿಗಳ ಮುಖಂಡರುಗಳ ನಿಯೋಗದ ಜತೆ ಚರ್ಚಿಸಿದ ಬಳಿಕ ಮಾತನಾಡಿದರು.
ಇದನ್ನೂ ಓದಿ: ಸವದತ್ತಿ ಯಲ್ಲಮ್ಮ ಸುಕ್ಷೇತ್ರ ಅಭಿವೃದ್ಧಿಗೆ ಮಾಸ್ಟರ್ ಫ್ಲ್ಯಾನ್
ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನಿಸಲಾಗುವುದು ಎಂದರು.
ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ಇದ್ದರು.
ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ನಿಯೋಗದ ಜತೆಗಿದ್ದರು.
ಇದನ್ನೂ ಓದಿ:
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.