India vs Afghanistan T20 Series: ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಮತ್ತೊಮ್ಮೆ T20 ಸ್ವರೂಪದಲ್ಲಿ ಭಾರತೀಯ ಜರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುಮಾರು 14 ತಿಂಗಳ ನಂತರ ಟಿ20 ಅಂತರಾಷ್ಟ್ರೀಯ ಪಂದ್ಯಕ್ಕೆ ಮರಳಿದ್ದಾರೆ. ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ವಿರಾಟ್ ಅವರನ್ನು ಭಾರತ ಕ್ರಿಕೆಟ್ ತಂಡದ ಭಾಗವಾಗಿ ಮಾಡಲಾಗಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ನಾಯಕತ್ವವನ್ನು ರೋಹಿತ್ ಶರ್ಮಾಗೆ ಹಸ್ತಾಂತರಿಸಲಾಗಿದೆ. ರೋಹಿತ್ ಕೂಡ 14 ತಿಂಗಳ ನಂತರ ಟಿ20 ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ನಲ್ಲಿ ಸ್ಪರ್ಧಿಗಳು ಜೀತದಾಳಿನಂತೆ, ಈ ಶೋ ನಡೆಸೋದು ಆ ಫಾರಿನ್ ಕಂಪನಿ: ಆರ್ಯವರ್ಧನ್ ಆರೋಪ
ಅಫ್ಘಾನಿಸ್ತಾನ ವಿರುದ್ಧ ಹಲವು ದಾಖಲೆಗಳನ್ನು ಮಾಡಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ದಾಖಲೆ ಕೂಡ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಇಷ್ಟೇ ಅಲ್ಲ, ಅಫ್ಘಾನಿಸ್ತಾನ ವಿರುದ್ಧ ಟಿ20ಯಲ್ಲಿ ಶತಕ ಸಿಡಿಸಿದ ಏಕೈಕ ಭಾರತೀಯ ವಿರಾಟ್. ಇದೀಗ ಟಿ20 ವಿಶ್ವಕಪ್ ಕೂಡ ನಡೆಯಲಿದೆ. ಇದೆಲ್ಲವನ್ನೂ ಪರಿಗಣಿಸಿ ಆಯ್ಕೆದಾರರು ಅವರಿಗೆ ಅವಕಾಶ ನೀಡಿದ್ದಾರೆ. ಇದು T20 ವಿಶ್ವಕಪ್ 2024ರ ಮೊದಲು ಸಣ್ಣ ಸ್ವರೂಪದಲ್ಲಿ ಭಾರತಕ್ಕೆ ಕೊನೆಯ ಸರಣಿಯಾಗಿದೆ.
ಭಾರತ ತಂಡವು ಜನವರಿ 11 ರಿಂದ ಅಫ್ಘಾನಿಸ್ತಾನ ವಿರುದ್ಧ (IND vs AFG) 3 ಪಂದ್ಯಗಳ T20 ಸರಣಿಯನ್ನು ಆಡಲಿದೆ. ಈ ಎರಡು ತಂಡಗಳ ನಡುವೆ ಮೊದಲ ಬಾರಿಗೆ ದ್ವಿಪಕ್ಷೀಯ ಟಿ20 ಅಂತಾರಾಷ್ಟ್ರೀಯ ಸರಣಿ ನಡೆಯುತ್ತಿದೆ. ಭಾರತ ಮತ್ತು ಅಫ್ಘಾನಿಸ್ತಾನ ಇದುವರೆಗೆ ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್’ನಲ್ಲಿ ಮಾತ್ರ ಮುಖಾಮುಖಿಯಾಗಿದೆ. ಉಭಯ ತಂಡಗಳ ನಡುವೆ ಇದುವರೆಗೆ 5 ಟಿ20 ಪಂದ್ಯಗಳು ನಡೆದಿದ್ದು, ಅದರಲ್ಲಿ ಭಾರತ 4ರಲ್ಲಿ ಗೆದ್ದು ಒಂದು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಈ ಅವಧಿಯಲ್ಲಿ ಕೊಹ್ಲಿ ಭಾರತದ ಪರ ಗರಿಷ್ಠ ರನ್ ಗಳಿಸಿದ್ದಾರೆ.
35 ವರ್ಷದ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧ ಏಕೈಕ ಟಿ20 ಶತಕ ದಾಖಲಿಸಿದ್ದಾರೆ. ಸೆಪ್ಟೆಂಬರ್ 2022 ರಲ್ಲಿ ದುಬೈನಲ್ಲಿ ನಡೆದ ಏಷ್ಯಾ ಕಪ್ ಸಮಯದಲ್ಲಿ ಅಫ್ಘಾನಿಸ್ತಾನ ವಿರುದ್ಧ T20 ನಲ್ಲಿ 122 ರನ್ಗಳ ಅಜೇಯ ಇನ್ನಿಂಗ್ಸ್ ಅನ್ನು ಆಡಿದರು. ನಂತರ ಅವರು 61 ಎಸೆತಗಳ ಅಜೇಯ ಇನ್ನಿಂಗ್ಸ್ನಲ್ಲಿ 12 ಬೌಂಡರಿ ಮತ್ತು 6 ಸಿಕ್ಸರ್’ಗಳನ್ನು ಹೊಡೆದರು. ಅಫ್ಘಾನಿಸ್ತಾನ ವಿರುದ್ಧದ ಟಿ20ಯಲ್ಲಿ ಭಾರತೀಯನೊಬ್ಬ ದಾಖಲಿಸಿದ ಅತಿ ದೊಡ್ಡ ಸ್ಕೋರ್ ಇದಾಗಿದೆ.
ಇದನ್ನೂ ಓದಿ: ಆರೋಗ್ಯಕ್ಕೆ ವರದಾನ ಸೇಬು… ಈ ಸಮಯದಲ್ಲಿ ತಿಂದರೆ ಇಂತಹ ಕಾಯಿಲೆಗಳು ಮದ್ದಿಲ್ಲದೆ ಗುಣವಾಗುತ್ತೆ!
ಅಫ್ಘಾನಿಸ್ತಾನ ವಿರುದ್ಧದ ಟಿ20ಯಲ್ಲಿ ವಿರಾಟ್ ಕೊಹ್ಲಿ ಒಟ್ಟು 172 ರನ್ ಗಳಿಸಿದ್ದಾರೆ. ಇದರಲ್ಲಿ 2 ಪಂದ್ಯಗಳು ಯುಎಇಯಲ್ಲಿ ನಡೆದರೆ ಒಂದು ಪಂದ್ಯ ಶ್ರೀಲಂಕಾದಲ್ಲಿ ನಡೆದಿತ್ತು. ಟಿ20ಯಲ್ಲಿ ಈ ತಂಡದ ವಿರುದ್ಧ ಅವರ ಬ್ಯಾಟಿಂಗ್ ಸರಾಸರಿ 172 ಆಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ