IND vs AFG, 1st T20: ಕ್ಯಾಪ್ಟನ್ ರೋಹಿತ್ ನಿರ್ಧಾರದಿಂದ ಈ ಆಟಗಾರನ ಭವಿಷ್ಯವೇ ಬದಲಾಗಬಹುದು!

IND vs AFG: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ  ಪ್ಲೇಯಿಂಗ್ XI ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಅಷ್ಟು ಸುಲಭದ ಮಾತಲ್ಲ. ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯ ನಾಳೆ  ಮೊಹಾಲಿಯ ಐ‌ಎಸ್ ಬಿಂದ್ರಾ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದ್ದು ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಪೈಕಿ ಯಾರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲವಿದೆ. 

Written by - Yashaswini V | Last Updated : Jan 10, 2024, 07:51 AM IST
  • ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಜೋಡಿ ಅತ್ಯಂತ ಅಪಾಯಕಾರಿ ಎಂದು ಸಾಬೀತುಪಡಿಸಲಿದೆ.

    ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಪವರ್ ಪ್ಲೇನಲ್ಲಿ ರನ್ ಗಳಿಸುವಲ್ಲಿ ಪರಿಣತರು.
  • ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಪಂದ್ಯವನ್ನು ಕ್ಷಣಮಾತ್ರದಲ್ಲಿ ಬದಲಾಯಿಸುವುದರಲ್ಲಿ ನಿಪುಣರು.
IND vs AFG, 1st T20: ಕ್ಯಾಪ್ಟನ್ ರೋಹಿತ್ ನಿರ್ಧಾರದಿಂದ ಈ ಆಟಗಾರನ ಭವಿಷ್ಯವೇ ಬದಲಾಗಬಹುದು!  title=

IND vs AFG, 1st T20: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ  ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿ ನಾಳೆಯಿಂದ (ಜನವರಿ 11) ಆರಂಭವಾಗಲಿದೆ. ಟಿ20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯ ನಾಳೆ ಸಂಜೆ 7:00 ಗಂಟೆಗೆ  ಮೊಹಾಲಿಯ ಐ‌ಎಸ್ ಬಿಂದ್ರಾ ಬಿ ಡಿಯಂನಲ್ಲಿ ನಡೆಯಲಿದೆ.   ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ದಿಟ್ಟ ಪ್ರದರ್ಶನ ನೀಡಿ ಮರಳಿದ ಭಾರತ ತಂಡದ ನೈತಿಕ ಸ್ಥೈರ್ಯ ಸಂಪೂರ್ಣ ಹೆಚ್ಚಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಒಂದೂವರೆ ವರ್ಷಗಳ ನಂತರ ಕ್ರಿಕೆಟ್‌ನ ಕಡಿಮೆ ಸ್ವರೂಪದಲ್ಲಿ ತಮ್ಮ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಇದೇ ವೇಳೆ  ಅಫ್ಘಾನಿಸ್ತಾನ ಕೂಡ ಈ ಸರಣಿಯಲ್ಲಿ ಟೀಂ ಇಂಡಿಯಾಗೆ ಕಠಿಣ ಪೈಪೋಟಿ ನೀಡಲು ಯೋಜಿಸುತ್ತಿದೆ. 

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಬ್ಯಾಟ್ಸ್‌ಮನ್‌ಗಳು ಅನೇಕ ದೊಡ್ಡ ದಾಖಲೆಗಳನ್ನು ಮಾಡುವ ಅವಕಾಶವನ್ನು ಹೊಂದಿದ್ದಾರೆ. ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಂ ಇಂಡಿಯಾದ ಪ್ಲೇಯಿಂಗ್ XI ಹೇಗಿರಲಿದೆ ಎಂದು ನೋಡೋಣ... 

ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಪ್ಲೇಯಿಂಗ್ XI ಆಯ್ಕೆ ನಾಯಕ ರೋಹಿತ್ ಶರ್ಮಾಗೆ ಅಷ್ಟು ಸುಲಭದ ಮಾತಲ್ಲ. ಮೊಹಾಲಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಶುಭ್‌ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್‌ರ ಪೈಕಿ ಯಾರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದು ಕೂಡ ಕುತೂಹಲ ಮೂಡಿಸಿದೆ. ಯಶಸ್ವಿ ಜೈಸ್ವಾಲ್ ಅವರು ರೋಹಿತ್ ಅವರೊಂದಿಗೆ ಇನ್ನಿಂಗ್ಸ್ ತೆರೆಯಲು ಹೆಚ್ಚಿನ ಅವಕಾಶಗಳನ್ನು ಹೊಂದಿದ್ದಾರೆ. ಆದಾಗ್ಯೂ, ಶುಬ್‌ಮನ್ ಗಿಲ್ ಅವರ ತವರು ಮೈದಾನವನ್ನು ಪರಿಗಣಿಸಿ, ತಂಡದ ಮ್ಯಾನೇಜ್‌ಮೆಂಟ್ ಅವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ನೀಡಬಹುದು ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ- ಟಿ20 ವಿಶ್ವಕಪ್‌ನಲ್ಲಿ ರೋಹಿತ್ - ಕೊಹ್ಲಿ ಇರಲೇಬೇಕು, ಟೀಂ ಇಂಡಿಯಾ ಬಗ್ಗೆ ಈ ಅನುಭವಿ ಆಟಗಾರ ಹೇಳಿದ್ದೇನು?

ಕ್ಯಾಪ್ಟನ್ ರೋಹಿತ್  ಶರ್ಮಾ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಈ ಆಟಗಾರನಿಗೆ ಅವಕಾಶ ನೀಡಿದರೆ ಭವಿಷ್ಯವೇ ಬದಲಾಗಬಹುದು!
ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್  ರೋಹಿತ್ ಶರ್ಮಾ ತಮ್ಮೊಂದಿಗೆ  ಎಡಗೈ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅವರಿಗೆ ಓಪನಿಂಗ್ ಬ್ಯಾಟ್ಸ್‌ಮನ್ ಆಗಿ ಅವಕಾಶ ನೀಡಿದರೆ ಈ ಆಟಗಾರನ ಭವಿಷ್ಯವೇ ಬದಲಾಗಬಹುದು ಎಂದು ಹೇಳಲಾಗುತ್ತಿದೆ. 

ಕ್ರಿಕೆಟ್ ಅಭಿಮಾನಿಗಳ ಪ್ರಕಾರ, ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಜೋಡಿ ಅತ್ಯಂತ ಅಪಾಯಕಾರಿ ಎಂದು ಸಾಬೀತುಪಡಿಸಲಿದೆ. ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಪವರ್ ಪ್ಲೇನಲ್ಲಿ ರನ್ ಗಳಿಸುವಲ್ಲಿ ಪರಿಣತರು. ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಪಂದ್ಯವನ್ನು ಕ್ಷಣಮಾತ್ರದಲ್ಲಿ ಬದಲಾಯಿಸುವುದರಲ್ಲಿ ನಿಪುಣರು. ಹೀಗಾಗಿ, ಆರಂಭಿಕ ಆಟಗಾರರಾಗಿ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಅವರಿಗೆ ಅವಕಾಶ ದೊರೆತರೆ ಅಂತಹ ಪರಿಸ್ಥಿತಿಯಲ್ಲಿ, ಶುಭಮನ್ ಗಿಲ್ ಪ್ಲೇಯಿಂಗ್ XIರಿಂದ ಹೊರಗುಳಿಯಬೇಕಾಗುತ್ತದೆ. 

ಮಾಧ್ಯಮ ಕ್ರಮಾಂಕದಲ್ಲಿ ಆಡುವ ಆಟಗಾರರು: 
ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 3ನೇ ಸ್ಥಾನದಲ್ಲಿದ್ದಾರೆ. ಟೀಮ್ ಮ್ಯಾನೇಜ್‌ಮೆಂಟ್ ತಿಲಕ್ ವರ್ಮಾ ಅವರಿಗೆ ಪ್ಲೇಯಿಂಗ್ ಹನ್ನೊಂದರಲ್ಲಿ 4ನೇ ಬ್ಯಾಟ್ಸ್‌ಮನ್ ಆಗಿ ಅವಕಾಶ ನೀಡಬಹುದು. ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಬಹುದು. ಫಿನಿಶರ್ ರಿಂಕು ಸಿಂಗ್ 6ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಖಚಿತ ಎಂದು ಪರಿಗಣಿಸಲಾಗಿದೆ.

ಇದನ್ನೂ ಓದಿ- T20 World Cup 2024 ವೇಳಾಪಟ್ಟಿ ಬಿಡುಗಡೆ, ಭಾರತ-ಪಾಕ್ ಪಂದ್ಯದ ದಿನಾಂಕ ಪ್ರಕಟ!

ಆಲ್‌ರೌಂಡರ್: 
ಇನ್ನೂ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಲ್‌ರೌಂಡರ್ ಅಕ್ಷರ್ ಪಟೇಲ್‌ಗೆ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಕ್ಷರ್ ಪಟೇಲ್ ಸ್ಪಿನ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ನಲ್ಲಿ ಟೀಂ ಇಂಡಿಯಾವನ್ನು ಬಲಿಷ್ಠಗೊಳಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. 

ಬೌಲಿಂಗ್ ದಾಳಿ ಹೇಗಿರುತ್ತದೆ?
ಅಫ್ಘಾನಿಸ್ತಾನದ ವಿರುದ್ಧ ಭಾರತ ತಂಡವು ಮೂವರು ವೇಗದ ಬೌಲರ್‌ಗಳೊಂದಿಗೆ ಕಣಕ್ಕಿಳಿಯಬಹುದು. ಅರ್ಷದೀಪ್ ಸಿಂಗ್ ವೇಗದ ಬೌಲಿಂಗ್ ಅನ್ನು ಮುನ್ನಡೆಸುವ ನಿರೀಕ್ಷೆಯಿದೆ. ಇದೇ ವೇಳೆ ಅವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಅರ್ಷದೀಪ್ ಅವರನ್ನು ಬೆಂಬಲಿಸುತ್ತಾರೆ. ಸ್ಪಿನ್ ವಿಭಾಗದಲ್ಲಿ ಕುಲದೀಪ್ ಯಾದವ್ ಅಥವಾ ರವಿ ಬಿಷ್ಣೋಯ್ ಅವರಿಗೆ ಅವಕಾಶ ಸಿಗಬಹುದು. ಅದೇ ಸಮಯದಲ್ಲಿ, ಎರಡನೇ ಸ್ಪಿನ್ನರ್ ಪಾತ್ರದಲ್ಲಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI:
ರೋಹಿತ್ ಶರ್ಮಾ(ನಾಯಕ),  ಯಶಸ್ವಿ ಜೈಸ್ವಾಲ್/ಶುಬ್ಮನ್ ಗಿಲ್,  ವಿರಾಟ್ ಕೊಹ್ಲಿ, ತಿಲಕ್ ವರ್ಮಾ,  ರಿಂಕು ಸಿಂಗ್,  ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್),  ಅಕ್ಷರ್ ಪಟೇಲ್,  ಕುಲದೀಪ್ ಯಾದವ್/ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಷದೀಪ್ ಸಿಂಗ್.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News