ರಾಗಿಣಿ ದ್ವಿವೇದಿ ಅಭಿನಯದ "ಬಿಂಗೊ" ಚಿತ್ರೀಕರಣ ಮುಕ್ತಾಯ

Ragini Dwivedi: ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ.      

Written by - YASHODHA POOJARI | Last Updated : Jan 11, 2024, 03:39 PM IST
ರಾಗಿಣಿ ದ್ವಿವೇದಿ ಅಭಿನಯದ "ಬಿಂಗೊ" ಚಿತ್ರೀಕರಣ ಮುಕ್ತಾಯ  title=

Ragini Dwivedi: ಈ ಹಿಂದೆ "ಶಂಭೋ ಶಿವ ಶಂಕರ" ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ - ನಾಯಕಿಯಾಗಿ ನಟಿಸಿರುವ "ಬಿಂಗೊ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ.             

ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆರ್ ಕೆ ಚಂದನ್ ,  ರಾಗಿಣಿ ದ್ವಿವೇದಿ, ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. 

ಇದನ್ನೂ ಓದಿ: ಭಾರತದ ಅತ್ಯಂತ ಶ್ರೀಮಂತ ಡಾನ್ಸ್‌ ಕೊರಿಯೋಗ್ರಫರ್‌ ಯಾರು ಗೊತ್ತೆ..! 1 ಸಾಂಗ್‌ಗೆ 50 ಲಕ್ಷ ರೂ..

ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಸುಮಧುರವಾಗಿ ಮೂಡಿಬಂದಿದೆ. ಸದ್ಯದಲ್ಲೇ ಅದ್ದೂರಿ ಸಮಾರಂಭ ಆಯೋಜಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ udv ಸಂಕಲನ "ಬಿಂಗೊ" ಚಿತ್ರಕ್ಕಿದೆ.

ಇದನ್ನೂ ಓದಿ: ನಟಿ ಸೌಂದರ್ಯ ಅವರ ಪತಿ ಯಾರು.. ಈಗ ಹೇಗಿದ್ದಾರೆ ಗೊತ್ತಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News