ಅನ್ಯಭಾಗ್ಯ ಯೋಜನೆ: ಫಲಾನುಭವಿಗಳು ಪರಿಶೀಲಿಸಬೇಕಾದ ದಾಖಲೆಗಳ ಪಟ್ಟಿ ಇಲ್ಲಿದೆ..!

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಬದಲು ರೂ.34 ರಂತೆ ನೇರ ನಗದು ಪಾವತಿಯಾಗದ ಫಲಾನುಭವಿಗಳು ಹಣ ಬರಲು ಪೂರಕ ಪರಿಶೀಲಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.

Written by - Manjunath N | Last Updated : Jan 13, 2024, 04:01 PM IST
  • ಬ್ಯಾಂಕ್ ಖಾತೆ ಸರಿಯಿಲ್ಲದಿದ್ದರೆ ಹೊಸದಾಗಿ ಅಂಚೆ ಕಚೇರಿಯಲ್ಲಿ (ಪೋಸ್ಟ್ ಆಫೀಸ್) ಹೊಸ ಐ.ಬಿ.ಪಿ.ಬಿ ಖಾತೆ ತೆರೆಯಬೇಕು.
  • ಮೇಲ್ಕಂಡ ಎಲ್ಲಾ ಅಂಶಗಳು ಸರಿಯಾಗಿದ್ದಲ್ಲಿ ತಮ್ಮ ಖಾತೆಗೆ ಹಣ ಜಮೆಯಾಗಲಿದೆ.
  • ಅರ್ಹರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.
 ಅನ್ಯಭಾಗ್ಯ ಯೋಜನೆ: ಫಲಾನುಭವಿಗಳು ಪರಿಶೀಲಿಸಬೇಕಾದ ದಾಖಲೆಗಳ ಪಟ್ಟಿ ಇಲ್ಲಿದೆ..! title=
file photo

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಬದಲು ರೂ.34 ರಂತೆ ನೇರ ನಗದು ಪಾವತಿಯಾಗದ ಫಲಾನುಭವಿಗಳು ಹಣ ಬರಲು ಪೂರಕ ಪರಿಶೀಲಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಪ್ರಿಯಕರನೊಂದಿಗೆ‌ ಬೆಡ್‌ ರೂಮ್‌ನಲ್ಲಿದ್ದಾಗ ಬಂದ ಪತಿಯ ಕೊಂದ ಪತ್ನಿ.. ಹೃದಯಾಘಾತ ಎಂದು ಹೈಡ್ರಾಮಾ!

ಫಲಾನುಭವಿಗಳು ಪರಿಶೀಲಿಸಬೇಕಾದ ದಾಖಲೆಗಳು:

ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರು ಮತ್ತು ಅವರ ಆಧಾರ್ ಕಾರ್ಡ್‍ನಲ್ಲಿ ಹೆಸರು ಸರಿಯಾಗಿದೆಯೇ ಪರೀಕ್ಷಿಸಿಕೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಬೇಕು. ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸಬೇಕು.

ಇದನ್ನೂ ಓದಿ: ಟ್ರಾಫಿಕ್ ಕಂಟ್ರೋಲ್‌ಗೆ ಸಹಕಾರಿ ಈ ರಿಂಗ್‌ರೈಲ್ ಯೋಜನೆ

ಬ್ಯಾಂಕ್ ಖಾತೆ ಸರಿಯಿಲ್ಲದಿದ್ದರೆ ಹೊಸದಾಗಿ ಅಂಚೆ ಕಚೇರಿಯಲ್ಲಿ (ಪೋಸ್ಟ್ ಆಫೀಸ್) ಹೊಸ ಐ.ಬಿ.ಪಿ.ಬಿ ಖಾತೆ ತೆರೆಯಬೇಕು. ಮೇಲ್ಕಂಡ ಎಲ್ಲಾ ಅಂಶಗಳು ಸರಿಯಾಗಿದ್ದಲ್ಲಿ ತಮ್ಮ ಖಾತೆಗೆ ಹಣ ಜಮೆಯಾಗಲಿದೆ. ಅರ್ಹರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕಿನ ಆಹಾರ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂ.08392-272557 ಗೆ ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News