Health benefits of drinking warm water : ದೇಹವನ್ನು ರೋಗಗಳಿಂದ ರಕ್ಷಿಸಲು, ಸರಿಯಾದ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಹೊಂದಿರುವುದು ಬಹಳ ಮುಖ್ಯ. ಆದರೂ ಸಮಯಕ್ಕೆ ಸರಿಯಾಗಿ ತಿನ್ನುವುದು ಮತ್ತು ನಿಯಮಿತ ವ್ಯಾಯಾಮ ಕ್ರಮಗಳನ್ನು ಮಾತ್ರ ಅನುಸರಿಸುವುದರಿಂದಲೇ ಆರೋಗ್ಯ ಕಾಪಾಡಿಕೊಳ್ಳಬಹುದು ಎನ್ನುವುದು ಕೂಡಾ ಸರಿಯಲ್ಲ. ಇದರ ಜೊತೆಗೆ ಇನ್ನೂ ಅನೇಕ ವಿಷಯಗಳ ಕಾಳಜಿ ವಹಿಸಬೇಕಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕೆಲವು ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕು. ಬೆಳಿಗ್ಗೆ ಎದ್ದ ಕೂಡಲೇ ಅಂದರೆ ಖಾಲಿ ಹೊಟ್ಟೆಗೆ ಬಿಸಿ ನೀರು ಸೇವಿಸುವುದು ಈ ಹವ್ಯಾಸದಲ್ಲಿ ಒಂದು. ಬೇಸಿಗೆ, ಮಳೆ, ಚಳಿ ಹೀಗೆ ಯಾವ ಋತುವೇ ಆಗಿರಲಿ ಮುಂಜಾನೆ ಖಾಲಿ ಹೊಟ್ಟೆಗೆ ಉಗುರು ಬೆಚ್ಚಗಿರುವ ನೀರು ಸೇವಿಸುವುದು ಬಹಳ ಮುಖ್ಯ.
ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು :
ದೇಹ ನಿರ್ವಿಷಗೊಳ್ಳುವುದು :
ದೇಹದಿಂದ ಕೊಳೆಯನ್ನು ತೆಗೆದುಹಾಕುವುದು ಅವಶ್ಯಕ. ನಮ್ಮ ದೇಹದೊಳಗೆ ಸೇರಿಕೊಂಡಿರುವ ಕೊಳಕು ದೇಹದಿಂದ ಹೊರಬರುವುದನ್ನು ನಿಲ್ಲಿಸಿದಾಗ, ನಾವು ಅನಾರೋಗ್ಯಕ್ಕೆ ಒಳಗಾಗುತ್ತೇವೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯುವುದರಿಂದ, ದೇಹದಿಂದ ಕೊಳಕು ಅಥವಾ ವಿಷ ಹೊರಹಾಕಲ್ಪಡುತ್ತವೆ. ಹೀಗಾದಾಗ ಉತ್ತಮ ಆರೋಗ್ಯ ಹೊಂದುವುದು ಸಾಧ್ಯವಾಗುತ್ತದೆ.
ಇದನ್ನೂ ಓದಿ : Beetroot Benefits: ಇದೇ ಕಾರಣಕ್ಕೆ ವೈದ್ಯರು ಕೂಡಾ ಬೀಟ್ ರೂಟ್ ತಿನ್ನಲು ಸಲಹೆ ನೀಡುತ್ತಾರೆ !
ಚಯಾಪಚಯವನ್ನು ವೇಗಗೊಳಿಸುತ್ತದೆ :
ಚಯಾಪಚಯ ಪ್ರಕ್ರಿಯೆಯು ನಮ್ಮ ದೇಹಕ್ಕೆ ಬಹಳ ಮುಖ್ಯವಾಗಿದೆ. ಇದು ನಾವು ಸೇವಿಸುವ ಆಹಾರದಿಂದ ಪಡೆದ ಪೋಷಕಾಂಶಗಳನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ. ಕಳಪೆ ಆಹಾರ ಪದ್ಧತಿ ಮತ್ತು ಅನಾರೋಗ್ಯಕರ ಜೀವನಶೈಲಿಯು ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಇದರಿಂದಾಗಿ ಜನರು ದಿನವಿಡೀ ದುರ್ಬಲ ಮತ್ತು ಆಲಸ್ಯದಿಂದ ದಿನ ಕಳೆಯುವಂತೆ ಆಗುತ್ತದೆ. ಪ್ರತಿದಿನ ಬಿಸಿನೀರನ್ನು ಸೇವಿಸುವುದರಿಂದ ಈ ಸಮಸ್ಯೆ ಪರಿಹಾರವಾಗುತ್ತದೆ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ :
ಉತ್ತಮ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯೊಂದಿಗೆ, ಜೀರ್ಣಕ್ರಿಯೆಯು ಸರಿಯಾಗಿರುವುದು ಸಹ ಮುಖ್ಯವಾಗಿದೆ.ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕೆಲಸ ಮಾಡದಿದ್ದರೆ, ಸೇವಿಸುವ ಆಹಾರ ನಮ್ಮನ್ನು ಕಾಡಬಹುದು.ಆದ್ದರಿಂದ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿಯುವ ಮೂಲಕ ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿರಿಸಿಕೊಳ್ಳಬಹುದು.
ಇದನ್ನೂ ಓದಿ : Cholesterol Control Tips: ಮನೆಯ ತರಕಾರಿಯಲ್ಲಿ ಸಾಮಾನ್ಯವಾಗಿ ಕಂಡು ಬರುವ ಈ ಪದಾರ್ಥಗಳಿಂದ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಿಸಬಹುದು!
ಚರ್ಮವನ್ನು ಆರೋಗ್ಯವಾಗಿರಿಸಿಕೊಳ್ಳಿ :
ಚರ್ಮವನ್ನು ಆರೋಗ್ಯವಾಗಿಡಲು, ಪ್ರತಿದಿನ ಸಾಕಷ್ಟು ಪ್ರಮಾಣದ ನೀರನ್ನು ಕುಡಿಯುವುದು ಮುಖ್ಯ. ಆದರೆ, ಪ್ರತಿ ದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸ ಚರ್ಮವನ್ನು ಆರೋಗ್ಯಕರವಾಗಿಡಲು ಹೆಚ್ಚು ಸಹಾಯ ಮಾಡುತ್ತದೆ. ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಬಿಸಿನೀರನ್ನು ಸೇವಿಸುತ್ತಾ ಬಂದರೆ, ನೈಸರ್ಗಿಕವಾಗಿ ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ. ಇತರ ಚರ್ಮ ರೋಗಗಳ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡುತ್ತದೆ.
(ಸೂಚನೆ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.