ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಮಾಜಿ ಮುಖ್ಯ ಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ “ಕೃತಿಕಾ ನಿವಾಸ" ದಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಕೊಡುಗೆಗಳನ್ನು ಸ್ಮರಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು ಮೌಲ್ಯಾಧಾರಿತ ರಾಜಕಾರಣಿ ಆಗಿದ್ದ ಹೆಗಡೆಯವರ ಬದುಕು ಹಾಗೂ ಸಾರ್ವಜನಿಕ ಸೇವೆ ಇಂದಿಗೂ ಜನ ಮಾನಸದಲ್ಲಿ ಹಚ್ಚಹಸಿರಾಗಿದೆ ಎಂದು ಹೇಳಿದರು.
ಇದನ್ನೂ ಓದಿ: Good News: UGCಯಿಂದ ವಿದ್ಯಾರ್ಥಿಗಳಿಗೆ ಸಂಶೋಧನಾ ಇಂಟರ್ನ್ಶಿಪ್ ಜೊತೆಗೆ ಸ್ಟೈಫಂಡ್ ಮತ್ತು ವಿಮೆ!
ರಾಜ್ಯದ ಬಡಜನತೆಯ ಬದುಕು ಹಸನಗೊಳಿಸಲು ಅವರು ಜಾರಿಗೆ ತಂದಿದ್ದ ವಿಧವಾ ವೇತನ, ವೃದ್ಯಾಪ ವೇತನ, ಬಸ್ ಪಾಸು ಸೌಲಭ್ಯ, ಪಂಚಾಯತ್ ರಾಜ್ ವ್ಯವಸ್ಥೆ, ಲೋಕಾಯುಕ್ತ ಸೇರಿದಂತೆ ಹತ್ತು ಹಲವು ಜನಪರ ಯೋಜನೆಗಳ ಮೂಲಕ ರಾಜ್ಯದ ಮನೆ ಮಾತಾಗಿದ್ದ ರಾಮಕೃಷ್ಣ ಹೆಗಡೆಯವರು ಕಲುಷಿತ ರಾಜಕಾರಣದ ಶುದ್ಧತೆಗೆಗಾಗಿ ಪಣತೊಟ್ಟು ಹೊಸ ರಾಜಕೀಯ ಸಂಸ್ಕೃತಿಯನ್ನು ಹುಟ್ಟು ಹಾಕಿದ ಧೀಮಂತ ನಾಯಕ ಎಂದು ತಿಳಿಸಿದರು.
ಇದನ್ನೂ ಓದಿ: Daily GK Quiz: ಭಾರತದಲ್ಲಿ ಪ್ರಥಮವಾಗಿ ನಿರ್ಮಾಣಗೊಂಡ ಅಣುಶಕ್ತಿ ಸ್ಥಾವರದ ಹೆಸರೇನು?
ರಾಜಕಾರಣದಲ್ಲಿ ಸಂಸ್ಕಾರ, ಪದಬಳಕೆ ಹಾಗೂ ಪರಸ್ಪರ ಗೌರವದಂತಹ ಸಾರ್ವಕಾಲಿಕ ಮೌಲ್ಯಗಳುಳ್ಳ ವಿಚಾರಗಳನ್ನು ಹೆಗಡೆಯವರು ಪ್ರತಿಪಾದಿಸಿದ್ದನ್ನು ಬಸವರಾಜ ಹೊರಟ್ಟಿ ಈ ಸಂದರ್ಭದಲ್ಲಿ ಮೆಲುಕು ಹಾಕಿದರು. ರಾಮಕೃಷ್ಣ ಹೆಗಡೆಯವರ ಜಾತ್ಯಾತೀತ ಮನೋಭಾವ, ಮೌಲ್ಯ ಸಿದ್ದಾಂತಗಳ ಅನುಷ್ಠಾನ, ಜನಪರ ಕಾಳಜಿ, ಸರಳತೆ, ಇನ್ನು ಮುಂತಾದ ಉದಾತ್ತ ಗುಣಗಳು ಇಂದಿನ ಯುವ ರಾಜಕಾರಣಿಗಳಿಗೆ ಅನುಕರಣೀಯ ಆದರ್ಶಗಳಾಗಿವೆ ಎಂದು ಬಸವರಾಜ ಹೊರಟ್ಟಿಯವರು ಬಣ್ಣಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.