ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Written by - Prashobh Devanahalli | Edited by - Manjunath N | Last Updated : Jan 22, 2024, 07:16 PM IST
  • ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಎಂಬ ಅಪಪ್ರಚಾರವನ್ನು ಖಂಡಿಸುತ್ತೇನೆ
  • ಮಹಾತ್ಮಾಗಾಂಧಿಜಿ ರಘುಪತಿ ರಾಘವ ರಾಜಾರಾಮ್ ಎಂದು ಭಜಿಸುತ್ತಿದ್ದು, ಸಾಯುವಾಗಲೂ ಹೇ ರಾಮ್ ಎಂದೇ ಜೀವ ಬಿಟ್ಟರು.
  • ಕಾಂಗ್ರೆಸ್ ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತದೆ. ಬಿಜೆಪಿ ಹೇಳಿದ ರಾಮನನ್ನು ಅಲ್ಲ ಎಂದರು.
ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ title=

ಬೆಂಗಳೂರು: ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀ ರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶ್ರೀ ಸೀತಾ, ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಳಾ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಮಮಂದಿರವನ್ನು ರಾಜಕೀಯಗೊಳಿಸಬಾರದು.ಶ್ರೀರಾಮಚಂದ್ರ ಎಲ್ಲರ ದೇವರು . ಕೇವಲ ಬಿಜೆಪಿಯವರ ದೇವರಲ್ಲ. ಎಲ್ಲಾ ಹಿಂದೂಗಳ ದೇವರು. ನಾವೂ ಶ್ರೀರಾಮಚಂದ್ರನ ಭಕ್ತರೇ. ಶ್ರೀರಾಮಚಂದ್ರನಿಗೆ ವಿರುದ್ಧವಾಗಿದ್ದೇವೆ ಎಂದು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ  ಮಾಡುತ್ತಿದೆ.ಈ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು.

ಇದನ್ನೂ ಓದಿ: ಹಳಸಿದ ಬಾಯಲ್ಲಿ ದಾಲ್ಚಿನ್ನಿ ನೀರು ಕುಡಿಯಿರಿ: ಈ ಕಾಯಿಲೆಗಳಿಗೆ ಪರ್ಮನೆಂಟ್ ರಿಲೀಫ್ ಸಿಗುತ್ತೆ!

ದೇವಸ್ಥಾನ ಉದ್ಘಾಟನೆ: ರಾಜಕೀಯ ಇಲ್ಲ

ಇಂದು ಶ್ರೀ ರಾಮ ಟೆಂಪಲ್ ಟ್ರಸ್ಟ್  ವತಿಯಿಂದ ಆಯೋಜಿಸಿದ್ದ  ಶ್ರೀರಾಮ ದೇವಸ್ಥಾನವನ್ನು ಇದರೊಂದಿಗೆ ಆಂಜನೇಯ ವಿಗ್ರಹವನ್ನೂ ಉದ್ಘಾಟಿಸಿದ್ದೇನೆ.ಇದನ್ನು ನಾವು  ರಾಜಕಾರಣಕ್ಕಾಗಿ ಮಾಡಿರುವುದಲ್ಲ.ಕರ್ನಾಟಕ ರಾಜ್ಯದಲ್ಲಿ ಶ್ರೀರಾಮಚಂದ್ರನ ಬಹಳಷ್ಟು ದೇವಸ್ಥಾನಗಳಿವೆ.ನಮ್ಮೂರಿನಲ್ಲಿಯೂ ನಾನೇ ಶ್ರೀರಾಮಚಂದ್ರನ ದೇವಸ್ಥಾನವನ್ನು ಕಟ್ಟಿಸಿದ್ದೇನೆ. ಇದರಲ್ಲಿ ರಾಜಕೀಯ ಇಲ್ಲ. ಸಮಯ ದೊರೆತಾಗ ಅಯೋಧ್ಯೆಗೆ ನಾನು ಹೋಗುತ್ತೇನೆ.ಶ್ರೀರಾಮಚಂದ್ರನ ಮೂರ್ತಿ ಎಲ್ಲೆಡೆ ಒಂದೇ. ಅಯೋಧ್ಯೆಯಲ್ಲಿ  ಮಾಡಿದರೂ ಒಂದೇ, ನಮ್ಮೂರಿನಲ್ಲಿ ಪೂಜೆ ಮಾಡಿದರೂ ಒಂದೇ. ಬಿಜೆಪಿಯವರು ಅಯೋಧ್ಯೆಯಲ್ಲಿ. ರಾಮನನ್ನು ಮಾತ್ರ ಪ್ರತಿಷ್ಠಾಪಿಸಿದ್ದಾರೆ. ರಾಮ,ಆಂಜನೇಯ, ಸೀತೆ ಲಕ್ಷ್ಮಣನನ್ನು ಬೇರ್ಪಡಿಸಲಾಗುವುದಿಲ್ಲ. ಶ್ರೀರಾಮಚಂದ್ರ ಒಬ್ಬನೇ ಇರದೇ ಸೀತಾದೇವಿ, ಲಕ್ಷ್ಮಣ, ಆಂಜನೇಯ ಇದ್ದಾಗ ಮಾತ್ರ ಪರಿಪೂರ್ಣವಾಗುತ್ತದೆ. ಇವರು ಶ್ರೀರಾಮಚಂದ್ರನನ್ನೇ ಬೇರ್ಪಡೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಸರಿ ಇಲ್ಲ ಎಂದು ಅಭಿಪ್ರಾಯಪಟ್ಟರು.

ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ

ಮಹಾತ್ಮಾಗಾಂಧಿಜಿ ರಘುಪತಿ ರಾಘವ ರಾಜಾರಾಮ್ ಎಂದು ಭಜಿಸುತ್ತಿದ್ದು, ಸಾಯುವಾಗಲೂ ಹೇ ರಾಮ್ ಎಂದೇ ಜೀವ ಬಿಟ್ಟರು. ಕಾಂಗ್ರೆಸ್ ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತದೆ. ಬಿಜೆಪಿ ಹೇಳಿದ ರಾಮನನ್ನು ಅಲ್ಲ ಎಂದರು.  

ಅನೇಕ ರಾಜ್ಯಗಳು ರಜೆ ಘೋಷಿಸಿಲ್ಲ

ಕರ್ನಾಟಕದಲ್ಲಿ ಕಾರ್ಯಕ್ರಮದ ಅಂಗವಾಗಿ ರಜೆ ಗೋಷಣೆ ಮಾಡಿಲ್ಲ ಎಂಬಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕೇಂದ್ರ ಸರ್ಕಾರ ಅರ್ಧ ದಿನ ರಜೆ ಕೊಟ್ಟಿದ್ದಾರೆ. ದೆಹಲಿ, ಪಂಜಾಬ್, ತೆಲಂಗಾಣ, ಪಶ್ಚಿಮ ಬಂಗಾಲ, ತಮಿಳುನಾಡು,ಕೇರಳದಲ್ಲಿಯೂ ರಜೆ ಕೊಟ್ಟಿಲ್ಲ ಎಂದರು.

ಇದನ್ನೂ ಓದಿ: ಹಳಸಿದ ಬಾಯಲ್ಲಿ ದಾಲ್ಚಿನ್ನಿ ನೀರು ಕುಡಿಯಿರಿ: ಈ ಕಾಯಿಲೆಗಳಿಗೆ ಪರ್ಮನೆಂಟ್ ರಿಲೀಫ್ ಸಿಗುತ್ತೆ!

ಪಿ ಎಸ್ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪನವರ ಅಧ್ಯಕ್ಷತೆಯ ಏಕಸದಸ್ಯ ಆಯೋಗ ತನಿಖೆ ಮಾಡಿ ಇಂದು ವರದಿಯನ್ನು ಸಲ್ಲಿಸಿದ್ದಾರೆ, ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News