ಕೊಪ್ಪಳ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿದ್ಯುತ್ ಮೋಟಾರ್ ದುರಸ್ತಿ ಮತ್ತು ಸರ್ವಿಸ್, ಬ್ಯೂಟಿ ಪಾರ್ಲರ್, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ, ಕುರಿ ಸಾಕಾಣಿಕೆ ಕುರಿತು ಉಚಿತ ತರಬೇಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
30 ದಿನಗಳ ವಿದ್ಯುತ್ ಮೋಟಾರ್ ದುರಸ್ತಿ ಮತ್ತು ಸರ್ವಿಸ್ ತರಬೇತಿ, 30 ದಿನಗಳ ಬ್ಯೂಟಿ ಪಾರ್ಲರ್ ತರಬೇತಿ, 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ, 10 ದಿನಗಳ ಕುರಿ ಸಾಕಾಣಿಕೆ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುವುದು.
ಇದನ್ನೂ ಓದಿ: ಬುಡಕಟ್ಟು ಸಂಸ್ಕೃತಿಯ ಸಾಂಪ್ರದಾಯಿಕ ಮಹುವಾ ಬಗ್ಗೆ ನಿಮಗೆ ತಿಳಿದಿದೆಯೇ..?
ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾದ 18 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಫೆಬ್ರವರಿ 05 ರಂದು ಸಂದರ್ಶನ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆ.07 ರಿಂದ ತರಬೇತಿ ಆರಂಭಿಸಲಾಗುವುದು.
ಆಸಕ್ತರು ಆಧಾರ್ ಕಾರ್ಡ, ರೇಷನ್ ಕಾರ್ಡ್, ಮಾರ್ಕ್ಸ್ ಕಾರ್ಡ್ಗಳ ಜೆರಾಕ್ಸ್ ಪ್ರತಿಗಳು ಹಾಗೂ 03 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08539-231038, 9483618178, 9481085217, 7259073827, 9448941414 ಗೆ ಸಂಪರ್ಕಿಸಬಹುದು ಎಂದು ಎಸ್ಬಿಐ ಆರ್ಸೆಟಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.