ಬೆಂಗಳೂರು: ಮರಗಳು ಮತ್ತು ಸಸ್ಯಗಳು ಎಷ್ಟು ಮುಖ್ಯವೆಂದು ಎಲ್ಲರಿಗೂ ತಿಳಿದಿದೆ. ಹಿಂದೂ ಧರ್ಮದಲ್ಲಿ ಕೆಲವು ಸಸ್ಯಗಳಿಗೆ ವಿಶೇಷ ಮಹತ್ವ ಕಲ್ಪಿಸಲಾಗಿದೆ. ಕೆಲ ಮರಗಳು ಮನೆಯಲ್ಲಿ ಸಕಾರಾತ್ಮಕತೆಯನ್ನು ಉಂಟುಮಾಡುತ್ತವೆ ಮತ್ತು ಅನೇಕ ರೋಗಗಳನ್ನು ಸಹ ನಿವಾರಿಸುತ್ತವೆ ಎಂದು ಹೇಳಲಾಗುತ್ತದೆ. ಮನೆಯಲ್ಲಿ ಸುಖ, ಸಂತೋಷ, ಶಾಂತಿ ಮತ್ತು ಸಮೃದ್ಧಿ ನೆಲೆಸಲು ಜನರು ತುಳಸಿ ಗಿಡ, ಮನಿ ಪ್ಲಾಂಟ್‌ನಂತಹ ಹಲವಾರು ಗಿಡಗಳನ್ನು ನೆಡುತ್ತಾರೆ. ಆದರೆ ಮನೆಯಲ್ಲಿ ನೆಡುವ ಮತ್ತು ತಾಯಿ ಲಕ್ಷ್ಮಿಯನ್ನು ಮೆಚ್ಚಿಸುವ ಮತ್ತು ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಸ್ಥಾಪಿಸುವ ಹಣ್ಣಿನ ಮರವೊಂದಿದೆ ಎಂಬುದು ನಿಮಗೆ ತಿಳಿದಿದೆಯಾ? ಬನ್ನಿ ಆ ಮರ ಯಾವುದು ಮತ್ತು ಅದನ್ನು ನೆಡುವ ಸರಿಯಾದ ನಿಯಮ-ವಿಧಾನ ತಿಳಿದುಕೊಳ್ಳೋಣ ಬನ್ನಿ, (Spiritual News In Kannada)
ದಾಳಿಂಬೆ ಮರ
ವಾಸ್ತು ಶಾಸ್ತ್ರದ ಪ್ರಕಾರ, ದಾಳಿಂಬೆ ಮರದಲ್ಲಿ ವಿಷ್ಣು ಮತ್ತು ತಾಯಿ ಲಕ್ಷ್ಮಿ ನೆಲೆಸಿದ್ದಾರೆ ಎಂಬ ನಂಬಿಕೆ ಇದೆ. ಮನೆಯಲ್ಲಿ ದಾಳಿಂಬೆ ಮರವನ್ನು ಹೊಂದಿರುವ ವ್ಯಕ್ತಿಗೆ ಯಾವುದೇ ರೀತಿಯ ಆರ್ಥಿಕ ಸಮಸ್ಯೆ ಬರುವುದಿಲ್ಲ ಮತ್ತು ಆತನ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಇದಲ್ಲದೇ ಗ್ರಹದೋಷ, ವಾಸ್ತು ದೋಷಗಳೂ ಕೂಡ ದೂರಾಗುತ್ತವೆ.
ದಾಳಿಂಬೆ ಮರವನ್ನು ಎಲ್ಲಿ ನೆಡಬೇಕು?
ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮುಂದೆ ದಾಳಿಂಬೆ ಗಿಡವನ್ನು ನೆಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಅಪ್ಪಿತಪ್ಪಿಯೂ ಮನೆಯ ಮಧ್ಯದಲ್ಲಿ ದಾಳಿಂಬೆ ಮರವನ್ನು ನೆಡಬೇಡಿ ಎಂಬುದನ್ನು ನೆನಪಿನಲ್ಲಿಡಿ. ಇದರಿಂದಾಗಿ ನೀವು ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಇದೇ ವೇಳೆ, ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿಮ್ಮನ್ನು ಸುತ್ತುವರೆಯಬಹುದು.
ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಈ ಜಾಗದಲ್ಲಿ ಗಿಡ ನೆಡಿ
ವಿಷ್ಣು ಪ್ರಿಯೆ ಲಕ್ಷ್ಮಿಯನ್ನು ಪ್ರಸನ್ನಗೊಳಿಸಲು, ಮನೆಯ ಮುಖ್ಯ ದ್ವಾರದ ಬಲಭಾಗದಲ್ಲಿ ದಾಳಿಂಬೆ ಮರವನ್ನು ನೆಡಬೇಕು. ಇದರಿಂದ ತಾಯಿ ಲಕ್ಷ್ಮಿಯ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ ಹಾಗೂ ಸಂಪತ್ತು ಮತ್ತು ಸಮೃದ್ಧಿಗೆ ಯಾವುದೇ ಕೊರತೆ ಎದುರಾಗುವುದಿಲ್ಲ.
ಈ ದಿಕ್ಕಿನಲ್ಲಿ ಅಪ್ಪಿತಪ್ಪಿಯೂ ನೆಡಬೇಡಿ
ಅಪ್ಪಿತಪ್ಪಿಯೂ ದಾಳಿಂಬೆ ಮರವನ್ನು ದಕ್ಷಿಣ ದಿಕ್ಕಿನಲ್ಲಿ ನೆಡಬಾರದು. ಈ ದಿಕ್ಕಿನಲ್ಲಿ ಮರಗಳನ್ನು ನೆಡುವುದರಿಂದ ಮನೆಯಲ್ಲಿ ನಕಾರಾತ್ಮಕತೆ ಉಂಟಾಗುತ್ತದೆ ಮತ್ತು ಕುಟುಂಬ ಸದಸ್ಯರಲ್ಲಿ ಅಶಾಂತಿ ಉಂಟಾಗುತ್ತದೆ, ಇದರಿಂದಾಗಿ ಯಾವಾಗಲೂ ಜಗಳಗಳು ನಡೆಯುತ್ತವೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ