Union Budget 2024: ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ʼಆಯುಷ್ಮಾನ್ ಭಾರತ್ʼ ಸೌಲಭ್ಯ

Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ(ಫೆಬ್ರವರಿ ೧) ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್‌ ಮಂಡಿಸಿದ 6ನೇ ಬಜೆಟ್ ಇದಾಗಿತ್ತು.

Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ(ಫೆಬ್ರವರಿ ೧) ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್‌ ಮಂಡಿಸಿದ 6ನೇ ಬಜೆಟ್ ಇದಾಗಿತ್ತು. ಇದಲ್ಲದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್‌ ಸಹ ಇದಾಗಿತ್ತು. ಈ ಬಜೆಟ್‌ನಲ್ಲಿ ಯಾವುದೇ ಮಹತ್ವದ ಹೊಸ ಘೋಷಣೆಗಳನ್ನು ಮಾಡದಿದ್ದರೂ ವಿತ್ತ ಸಚಿವೆ, ಹಲವಾರು ಹೊಸ ಹೊಸ ಯೋಜನೆಗಳ ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ದೇಶದ ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನಗಳ ವಿಸ್ತರಿಸಣೆ ಮಾಡಲಾಗುತ್ತದೆ. ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. 

2 /5

ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ ಅಂತಾ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. 

3 /5

ಬಡವರ ಶ್ರೇಯೋಭಿವೃದ್ಧಿಯಲ್ಲಿ ನಾವು ನಂಬಿಕೆ ಇಟ್ಟಿದ್ದೇವೆ. ʼಸಬ್​ ಕಾ ಸಾಥ್ʼ ಧ್ಯೇಯದೊಂದಿಗೆ ಸರ್ಕಾರವು 25 ಕೋಟಿ ಜನರಿಗೆ ಬಡತನದಿಂದ ಹೊರಬರುವಂತೆ ಮಾಡಲು ನೆರವಾಗಿದೆ. ನೇರ ನಗದು ವರ್ಗಾವಣೆ ಮೂಲಕ 34 ಲಕ್ಷ ಕೋಟಿ ರೂ.ವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಅಂತಾ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಾಹಿತಿ ನೀಡಿದ್ದಾರೆ. 

4 /5

ಸೋಲಾರ್ ಸಂಪರ್ಕ (Rooftop solarisation) ಯೋಜನೆಯು 1 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಖಾತರಿಪಡಿಸುತ್ತದೆ. ಇದು ವಾರ್ಷಿಕ 15,000 - 18,000 ರೂ.ನಷ್ಟು ಉಳಿತಾಯ ಮಾಡಲು ಕುಟುಂಬಗಳಿಗೆ ನೆರವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. 

5 /5

24ನೇ ಹಣಕಾಸು ವರ್ಷದ ಅಂದಾಜು ವೆಚ್ಚವನ್ನು 44.90 ಲಕ್ಷ ಕೋಟಿ ರೂ.ಗೆ ಪರಿಷ್ಕರಿಸಲಾಗಿದೆ. ಪೂರೈಕೆ ಸರಪಳಿಗಳು, ಪ್ರಾಥಮಿಕ ಮತ್ತು ಮಾಧ್ಯಮಿಕ ಸಂಸ್ಕರಣೆ, ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್ ಸೇರಿದಂತೆ ಸುಗ್ಗಿಯ ನಂತರದ ಚಟುವಟಿಕೆಗಳಲ್ಲಿ ಖಾಸಗಿ ಮತ್ತು ಸಾರ್ವಜನಿಕ ಹೂಡಿಕೆಯನ್ನು ಸರ್ಕಾರವು ಮತ್ತಷ್ಟು ಉತ್ತೇಜಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.