ರಂಗಾಯಣ ರಘು ನಾಯಕನಟರಾಗಿ ನಟಿಸಿರುವ ಶಾಖಾಹಾರಿ ಚಿತ್ರದ ಟ್ರೇಲರ್ ರಿಲೀಸ್!

Shakhahari: ಸ್ಯಾಂಡಲ್‌ವುಡ್‌ನ ಅದ್ಭುತ ಹಿರಿಯ ಕಲಾವಿದ ರಂಗಾಯಣ ರಘು ನಟಿಸಿದ, ಮಲೆನಾಡಿನ  ಹಳ್ಳಿಯಲ್ಲಿ ನಡೆಯುವ  ಘಟನೆಗಳ ಸುತ್ತ ಹೆಣೆದಿರುವ ಕಾಲ್ಪನಿಕ ಕಥೆ ಶಾಖಾಹಾರಿ ಚಿತ್ರದ ಟ್ರೇಲರ್ ರಿಲೀಸ್ ಫೆಬ್ರವರಿ 2 ರಂದು ಬೆಳಗ್ಗೆ ರಿಲೀಸ್‌ ಆಗಿದೆ.  

Written by - Zee Kannada News Desk | Last Updated : Feb 3, 2024, 10:48 AM IST
  • ಮಲೆನಾಡಿನ ಸಣ್ಣ ಹಳ್ಳಿಯೊಂದರಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆದಿರುವ ಕಾಲ್ಪನಿಕ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು ಹೋಟಲ್ ಭಟ್ಟ ಸುಬ್ಬಣ್ಣನಾಗಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
  • ಶಾಖಾಹಾರಿ ಚಿತ್ರದ ಕಥೆ, ಸಂಭಾಷಣೆ ನಿರ್ದೇಶನದ ಜವಾಬ್ದಾರಿ ಹೊತ್ತಿರುವ ಸಂದೀಪ್ ಸುಂಕದ್ ಅವರ ಸೂಕ್ಷ್ಮತೆ, ವಿಶ್ವಜಿತ್ ರಾವ್ ಅವರ ಕ್ಯಾಮೆರ ಕೈಚಳಕ ಸಿನೆಮಾಗೆ ಶಕ್ತಿಯಾಗಿರುವುದಲ್ಲದೇ, ಶಶಾಂಕ್ ನಾರಾಯಣ್ ಅವರ ಸಂಕಲನ, ಮಯೂರ್ ಅಂಬೇಕಲ್ಲು ಅವರ ಸಂಗೀತ ಸಿನೆಮಾಗೆ ಪುಷ್ಟಿ ನೀಡಿದೆ.
  • ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನರವರು ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈ.ಲಿ. ನ ಅಡಿಯಲ್ಲಿ ಶಾಖಾಹಾರಿ ಸಿನಿಮಾವನ್ನು ನಿರ್ಮಿಸಿದ್ದಾರೆ.
ರಂಗಾಯಣ ರಘು ನಾಯಕನಟರಾಗಿ ನಟಿಸಿರುವ ಶಾಖಾಹಾರಿ ಚಿತ್ರದ ಟ್ರೇಲರ್ ರಿಲೀಸ್! title=

Shakhahari Trailer Release: ಚಂದನವನದ ನಟ ರಂಗಾಯಣ ರಘು ನಾಯಕನಟನಾಗಿ ಅಭಿನಯಿಸಿರುವ ಶಾಖಹಾರಿ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ಮಲೆನಾಡಿನ ಸಣ್ಣ ಹಳ್ಳಿಯೊಂದರಲ್ಲಿ ನಡೆಯುವ  ಘಟನೆಗಳ ಸುತ್ತ ಹೆಣೆದಿರುವ ಕಾಲ್ಪನಿಕ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು ಹೋಟಲ್ ಭಟ್ಟ ಸುಬ್ಬಣ್ಣನಾಗಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..ತನ್ನ ಸರಳ ಜೀವನಕ್ಕೆ ಅನಿರೀಕ್ಷಿತವಾಗಿ ಬಂದೊಗುವ ಕಷ್ಟ,ತೊಂದರೆಗಳಿಂದ ಮುಕ್ತನಾಗಲೂ ಸುಬ್ಬಣ ಭಟ್ಟ ಎದುರಿಸುವ ಸವಾಲುಗಳು ಹಾಗೂ ಶಾಖಹಾರಿ ಹೋಟೆಲ್  ಶಾಖಾಹಾರಿಯಾಗುವ ಬಗೆಯನ್ನು ಇಲ್ಲಿ‌ಕಾಣಬಹುದು.

ಶಾಖಾಹಾರಿ ಚಿತ್ರದಲ್ಲಿ ಎಸ್ ಐ ಮಲ್ಲಿಕಾರ್ಜುನ್ ಆಗಿ ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ, ವಿನಯ್ ಯು ಜೆ, ನಿಧಿ ಹೆಗಡೆ, ಹರಿಣಿ ಶ್ರೀಕಾಂತ್, ಸುಜಯ್ ಶಾಸ್ತ್ರಿ, ಪ್ರಶಾಂತ್ ನಟನ, ಶ್ರೀಹರ್ಷ ಗೋಭಟ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಮಲೆನಾಡಿನ ತಪ್ಪಲಿನಲ್ಲೇ ಚಿತ್ರೀಕರಣಗೊಂಡ ಈ ಸಿನಿಮಾದಲ್ಲಿ ಮಲೆನಾಡಿನ ಅನೇಕ ಕಲಾವಿದರು ನಟಿಸಿದ್ದಾರೆ. ಶಾಖಾಹಾರಿ ಚಿತ್ರದ ಕಥೆ, ಸಂಭಾಷಣೆ ನಿರ್ದೇಶನದ ಜವಾಬ್ದಾರಿ ಹೊತ್ತಿರುವ ಸಂದೀಪ್ ಸುಂಕದ್ ಅವರ ಸೂಕ್ಷ್ಮತೆ, ವಿಶ್ವಜಿತ್ ರಾವ್ ಅವರ ಕ್ಯಾಮೆರ ಕೈಚಳಕ ಸಿನೆಮಾಗೆ  ಶಕ್ತಿಯಾಗಿರುವುದಲ್ಲದೇ, ಶಶಾಂಕ್ ನಾರಾಯಣ್ ಅವರ ಸಂಕಲನ, ಮಯೂರ್ ಅಂಬೇಕಲ್ಲು ಅವರ ಸಂಗೀತ ಸಿನೆಮಾಗೆ ಪುಷ್ಟಿ ನೀಡಿದೆ.

ಇದನ್ನೂ ಓದಿ: ಡೆವಿಲ್‌ ದಿ ಹೀರೋ ಚಿತ್ರಕ್ಕೆ ಕರಾವಳಿ ಬೆಡಗಿ ಆಯ್ಕೆ: ಚಾಲೆಂಜಿಂಗ್‌ ಸ್ಟಾರ್‌ಗೆ ನಾಯಕಿ ಯಾರು?

ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನರವರು ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈ.ಲಿ. ನ ಅಡಿಯಲ್ಲಿ ಶಾಖಾಹಾರಿ ಸಿನಿಮಾವನ್ನು ನಿರ್ಮಿಸಿದ್ದಾರೆ. ಶಾಖಾಹಾರಿ ಚಿತ್ರದ  ಕಂಟೆಂಟ್ ಮೆಚ್ಚಿ ಈ ಸಿನಿಮಾದ ಟ್ರೇಲರ್‌ ಅನ್ನು  ಫೆಬ್ರವರಿ 2 ರಂದು ಬೆಳಿಗ್ಗೆ 10:10ಕ್ಕೆ  ನಟರಾಕ್ಷಸ ಡಾಲಿ‌ ಧನಂಜಯ್ ರವರು ಬಿಡುಗಡೆ ಮಾಡಿದ್ದಾರೆ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಾಖಾಹಾರಿ ಸಿನಿಮಾದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ರಂಗಾಯಣ ರಘು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಹೊಸತನದ ಈ ಹೊಸಬರ ಚಿತ್ರಕ್ಕೆ ಚಿತ್ರಕಥೆಯೇ ಜೀವಾಳವಾಗಿದೆ, ಮರ್ಡರ್ ಮಿಸ್ಟರಿ ಸಿನೆಮಾ ಇದಾಗಿದ್ದು ಪ್ರೇಕ್ಷಕರ ಮನಸ್ಸು ಗೆಲ್ಲುತ್ತದೆ  ಎಂಬ ಆತ್ಮವಿಶ್ವಾಸ ಚಿತ್ರತಂಡವಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News