India vs England 2nd Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವು ವಿಶಾಖಪಟ್ಟಣಂನ ACA-VDCA ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ಶ್ರೇಷ್ಠ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕಾಮೆಂಟ್ ಮಾಡುತ್ತಿದ್ದರು. ಆದರೆ ಈ ಮಧ್ಯೆಯೇ ಅವರ ಅತ್ತೆಯ ನಿಧನದ ಸುದ್ದಿ ಕೇಳಿಬಂದಿದ್ದು, ಅರ್ಧಕ್ಕೆ ಕಾಮೆಂಟರಿ ಬಿಟ್ಟು ವಿಶಾಖಪಟ್ಟಣಂನಿಂದ ಕಾನ್ಪುರಕ್ಕೆ ತೆರಳಿದ್ದಾರೆ.
ಇದನ್ನೂ ಓದಿ: Wi-Fi Router: ರಾತ್ರಿ ಮಲಗುವ ಮುನ್ನ Wi-Fi ರೂಟರ್ ಆಫ್ ಮಾಡಲ್ವಾ? ಇದೆಷ್ಟು ಡೇಂಜರಸ್ ಗೊತ್ತಾ?
ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರ ಅತ್ತೆ ನಿಧನರಾಗಿದ್ದಾರೆ. ಈ ಸುದ್ದಿ ತಿಳಿದ ಸುನಿಲ್ ಗವಾಸ್ಕರ್, ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಕಾಮೆಂಟರಿ ಬಿಟ್ಟು ಕಾನ್ಪುರಕ್ಕೆ ತೆರಳಿದ್ದಾರೆ. ಸುನಿಲ್ ಗವಾಸ್ಕರ್ ಪತ್ನಿ ಮಾರ್ಷ್ನೀಲ್ ಗವಾಸ್ಕರ್ ಕೂಡ ಶುಕ್ರವಾರ ಮಧ್ಯಾಹ್ನ ಕಾನ್ಪುರಕ್ಕೆ ತೆರಳಿದ್ದಾರೆ. ಪಂದ್ಯದ ವೇಳೆಯೇ ಈ ವಿಷಯ ತಿಳಿದುಬಂದಿದ್ದು, ಸುನಿಲ್ ಗವಾಸ್ಕರ್ ತಕ್ಷಣ ಕಾರ್ಯಪ್ರವೃತ್ತರಾಗಿ ಕಾನ್ಪುರಕ್ಕೆ ತೆರಳಿದ್ದಾರೆ.
ಇದನ್ನೂ ಓದಿ: Gold Rate: ವಾರಾಂತ್ಯದಲ್ಲಿ ಚಿನ್ನದ ದರ ಏರಿಕೆ: ಬೆಳ್ಳಿಯ ಬೆಲೆ ಸ್ಥಿರತೆ!
ಸುನಿಲ್ ಗವಾಸ್ಕರ್ ವೃತ್ತಿಜೀವನ
ಸುನಿಲ್ ಗವಾಸ್ಕರ್ 125 ಟೆಸ್ಟ್ ಪಂದ್ಯಗಳಲ್ಲಿ 51.12 ರ ಸರಾಸರಿಯಲ್ಲಿ 34 ಶತಕಗಳು ಮತ್ತು 45 ಅರ್ಧ ಶತಕಗಳನ್ನು ಒಳಗೊಂಡಂತೆ 10,122 ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್’ನಲ್ಲಿ 4 ದ್ವಿಶತಕಗಳನ್ನು ಗಳಿಸಿದ ಗವಾಸ್ಕರ್, ಅತ್ಯುತ್ತಮ ಸ್ಕೋರ್ 236 ರನ್. 108 ODI ಅಂತರಾಷ್ಟ್ರೀಯ ಪಂದ್ಯಗಳಲ್ಲಿ 35.14 ರ ಸರಾಸರಿಯಲ್ಲಿ 3092 ರನ್ ಗಳಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 27 ಅರ್ಧ ಶತಕಗಳು ಸೇರಿವೆ. ಕ್ರಿಕೆಟ್’ನಿಂದ ನಿವೃತ್ತಿಯ ನಂತರ, ಸುನಿಲ್ ಗವಾಸ್ಕರ್ ಅನುಭವಿ ಕಾಮೆಂಟರ್ ಆಗಿದ್ದಾರೆ. ಅಂದಹಾಗೆ ಸುನಿಲ್ ಗವಾಸ್ಕರ್ ಕ್ರಿಕೆಟ್ ಆಡಳಿತದಲ್ಲಿ ಹಲವು ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಹಿಂದೆ ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.