India vs England 2nd Test: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ವೇಳೆ ಜೇಮ್ಸ್ ಆಂಡರ್ಸನ್ ಬೌಲಿಂಗ್’ನಲ್ಲಿ ಶುಭ್ಮನ್ ಗಿಲ್ (34) ಔಟಾದರು. ಇದಾದ ನಂತರ ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಶುಭ್ಮನ್’ಗೆ ಎಚ್ಚರಿಕೆ ನೀಡಿದ್ದಾರೆ. ಕಾಮೆಂಟರಿ ವೇಳೆ ರವಿಶಾಸ್ತ್ರಿ, 'ಇದೊಂದು ಹೊಸ ತಂಡ, ಯುವ ತಂಡ. ಈ ಯುವಕರು ತಮ್ಮನ್ನು ತಾವು ಸಾಬೀತುಪಡಿಸಬೇಕು. ಮರೆಯಬೇಡಿ, ಪೂಜಾರ ಕಾಯುತ್ತಿದ್ದಾರೆ. ಅವರು ರಣಜಿ ಟ್ರೋಫಿಯಲ್ಲಿ ಶ್ರಮಿಸುತ್ತಿದ್ದಾರೆ” ಎಂದಿದ್ದಾರೆ.
ಇದನ್ನೂ ಓದಿ: ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ರೆ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಲಿ: ಡಿಸಿಎಂ
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್’ನಲ್ಲಿ ಶುಭಮನ್ ಗಿಲ್ ಉತ್ತಮ ಆರಂಭ ನೀಡಿ 46 ಎಸೆತಗಳಲ್ಲಿ 34 ರನ್ ಗಳಿಸಿದರು. ಅದೇನೇ ಇದ್ದರೂ, ಈ ಇನ್ನಿಂಗ್ಸ್ ಅನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ವಿಫಲವಾದ ಕಾರಣ, ತಂಡದಲ್ಲಿ ಶುಬ್ಮನ್ ಗಿಲ್ ಸ್ಥಾನದ ಮೇಲೆ ಪ್ರಶ್ನಾರ್ಥಕ ಚಿಹ್ನೆ ಮೂಡಿದೆ.
ರಣಜಿಯಲ್ಲಿ ಚೇತೇಶ್ವರ ಪೂಜಾರ ಶಕ್ತಿ ಪ್ರದರ್ಶನ
ಚೇತೇಶ್ವರ ಪೂಜಾರ ಈ ಬಾರಿಯ ರಣಜಿ ಟ್ರೋಫಿ ಋತುವಿನಲ್ಲಿ ರನ್ಗಳ ಮೂಲಕ ಸಂಚಲನ ಮೂಡಿಸಿದ್ದಾರೆ. ಈ ರಣಜಿ ಟ್ರೋಫಿ ಋತುವಿನಲ್ಲಿ, ಏಳು ಇನ್ನಿಂಗ್ಸ್ಗಳಲ್ಲಿ 89.66 ಸರಾಸರಿಯಲ್ಲಿ 538 ರನ್ ಗಳಿಸಿದ್ದಾರೆ. ಜೂನ್ 2023 ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಿಂದ, ಶುಭಮನ್ ಗಿಲ್ ಟೆಸ್ಟ್ ಸ್ವರೂಪದಲ್ಲಿ ರನ್ ಗಳಿಸುವುದನ್ನು ನಿಲ್ಲಿಸಿದ್ದಾರೆ. ಶುಭಮನ್ ಗಿಲ್ ಕಳೆದ 12 ಟೆಸ್ಟ್ ಇನ್ನಿಂಗ್ಸ್ಗಳಲ್ಲಿ 13, 18, 6, 10, 29*, 2, 26, 36, 10, 23, 0 ಮತ್ತು 34 ರನ್ ಗಳಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನ ನಂತರ, ಟೆಸ್ಟ್ನಲ್ಲಿ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ನ ಜವಾಬ್ದಾರಿಯನ್ನು ಶುಭಮನ್ ಗಿಲ್ ಅವರಿಗೆ ನೀಡಲಾಯಿತು. ಆದರೆ ಅದರಲ್ಲಿಯೂ ಅವರು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.
ಇದನ್ನೂ ಓದಿ: IND vs ENG: ಟೆಸ್ಟ್ ಕ್ರಿಕೆಟ್’ನಲ್ಲಿ ಶ್ರೇಷ್ಠ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಶುಭ್ಮನ್ ಗಿಲ್ ಭಾರತ ಪರ ಇದುವರೆಗೆ 22 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 29.65 ಸರಾಸರಿಯಲ್ಲಿ 1097 ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕ ಮತ್ತು 4 ಅರ್ಧ ಶತಕ ಸೇರಿವೆ. ಇನ್ನು ಇವರ ಅತ್ಯುತ್ತಮ ಸ್ಕೋರ್ 128 ರನ್. ಇನ್ನೊಂದೆಡೆ ಚೇತೇಶ್ವರ ಪೂಜಾರ ಇದುವರೆಗೆ ಭಾರತ ಪರ 103 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 43.61ರ ಸರಾಸರಿಯಲ್ಲಿ 7195 ರನ್ ಗಳಿಸಿದ್ದಾರೆ. ಇದರಲ್ಲಿ 19 ಶತಕ ಮತ್ತು 35 ಅರ್ಧ ಶತಕಗಳು ಸೇರಿವೆ. ಅತ್ಯುತ್ತಮ ಸ್ಕೋರ್ 206 ರನ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.