ಬೆಂಗಳೂರು: ಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ (ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಮರುಕಲ್ಪನೆ ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್) ಬಸ್ಸುಗಳನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದರು.
ಇದನ್ನೂ ಓದಿ: 5G Smartphone ಬೆಲೆ ಇಳಿಸಿದ Samsung ! ಈಗ Samsung Galaxy M14 ಸಿಗುತ್ತದೆ ಈ ದರದಲ್ಲಿ !
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈ ವರ್ಷ ಒಂದು ಸಾವಿರ ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು ಇಂದು ನೂರು ಬಸ್ಸುಗಳ ಬಿಡುಗಡೆಯಾಗಿದೆ. ರಾಜ್ಯದ ಜನರಿಗೆ 4 ಕಾರ್ಪೋರೇಷನ್‍ಗಳು ಬಸ್ಸುಗಳ ಸೇವೆಯನ್ನು ಒದಗಿಸುತ್ತಿದೆ. ನಾಲ್ಕು ವರ್ಷಗಳಿಂದ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕೂಡ ಕೆಲವು 3800 ಬಸ್ಸುಗಳನ್ನು ಸ್ಥಗಿತಗೊಳಿಸಲಾಗಿತ್ತು. ನಾವು ಅಧಿಕಾರಕ್ಕೆ ಬಂದ ನಂತರ ಸಂಸ್ಥೆಗೆ 5800 ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ. ಈ ರಾಜ್ಯದ ಜನರಿಗೆ ಸುರಕ್ಷಿತ ಮತ್ತು ಸರಾಗ ಪ್ರಯಾಣ ಮಾಡಲು ಅಗತ್ಯ ಅನುಕೂಲಗಳನ್ನು ಮಾಡಿಕೊಡಲಿದೆ ಎಂದರು..
ಸಿಬ್ಬಂದಿಗೆ ವಿಮಾ ಸೌಲಭ್ಯ:
KSRTC ಸಿಬ್ಬಂದಿಗಳಿಗೆ ವಿಮಾ ಸೌಲಭ್ಯವನ್ನು 1 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಕರ್ತವ್ಯದ ವೇಳೆ ಮೃತಪಡುವ ಸಿಬ್ಬಂದಿಗಳಿಗೆ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.
ಚುನಾವಣಾ ಪೂರ್ವದ ಭರವಸೆ ಈಡೇರಿಸಲಾಗಿದೆ:
ಚುನಾವಣಾ ಪೂರ್ವದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಕ.ರ.ಸಾ.ಸಂ ಮತ್ತು ಇತರೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸುತ್ತೇವೆ ಎಂದು ಹೇಳಿದ್ದೆವು. ಬೆಲೆಯೇರಿಕೆ, ಹಣದುಬ್ಬರು, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವ ಪರಿಸ್ಥಿತಿಯಲ್ಲಿ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಿದ್ದೇವೆ ಎಂದರು.
ಇದನ್ನೂ ಓದಿ: ಈ ಜನ್ಮರಾಶಿಗಳಿಗೆ ಮುಂಬರುವ ದಿನಗಳೆಲ್ಲಾ ಹಬ್ಬವೋ ಹಬ್ಬ: ಅದೃಷ್ಟಮಯ ಬಾಳಲ್ಲಿ ಸಾಲು ಸಾಲು ವಿಜಯಗಳೇ ಬೆನ್ನೇರುವುದು!
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕ.ರ.ಸಾ.ಸಂ ಅಧ್ಯಕ್ಷ ಗುಬ್ಬಿ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಮೊದಲಾದವರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ