ರಾಜ್ಯದ ಕೈಗಾರಿಕಾ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ, ತ್ವರಿತ ಕ್ರಮಕ್ಕೆ ಸೂಚನೆ: ಎಂ ಬಿ ಪಾಟೀಲ್

ಕೈಗಾರಿಕೆಗಳಿಗೆ ಕುಡಿಯುವ ನೀರು ಪೂರೈಕೆ ಪ್ರಾಥಮಿಕ ಜವಾಬ್ದಾರಿಯಾಗಿದೆ. ರಾಜ್ಯದ ಉದ್ಯಮಗಳ ಬೆಳವಣಿಗೆಯ ದೃಷ್ಟಿಯಿಂದ ಇದು ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿದೆ. ಇದನ್ನು ವಿವಿಧ ಇಲಾಖೆಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಪಾಟೀಲ್ ಹೇಳಿದರು.  

Written by - Ranjitha R K | Last Updated : Feb 5, 2024, 06:35 PM IST
  • ಪ್ರತಿನಿತ್ಯ 290 ದಶಲಕ್ಷ ಲೀಟರ್ ನೀರಿಗೆ ಬೇಡಿಕೆ
  • ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಇತರ ಅಧಿಕಾರಿಗಳು ಹಾಜರು
  • ಮುಂದಿನ ವಾರ ಮತ್ತೊಂದು ಸಭೆ
ರಾಜ್ಯದ ಕೈಗಾರಿಕಾ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ, ತ್ವರಿತ ಕ್ರಮಕ್ಕೆ ಸೂಚನೆ: ಎಂ ಬಿ ಪಾಟೀಲ್  title=

ಬೆಂಗಳೂರು: ರಾಜ್ಯದ ನಾನಾ ಕೈಗಾರಿಕಾ ಪ್ರದೇಶಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ವಿವಿಧ ಇಲಾಖೆಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಪರಿಹಾರ ಕಾರ್ಯಗಳ ಬಗ್ಗೆ ಚೆಚೆ ನಡೆಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಪಾಟೀಲ್, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳ ಕೈಗಾರಿಕಾ ಪ್ರದೇಶಗಳು ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿವೆ. ಇದಲ್ಲದೆ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಪ್ರತಿದಿನ 45 ಎಂಎಲ್.ಡಿಯಷ್ಟು ಕುಡಿಯುವ ನೀರಿನ ಅಗತ್ಯವಿದೆ.ಇದನ್ನು ಹಿಡಕಲ್ ಜಲಾಶಯದಿಂದ ಪೂರೈಸಬಹುದು. ಹಾಗೆಯೇ, ವಿಜಯಪುರ ಕೈಗಾರಿಕಾ ಪ್ರದೇಶಕ್ಕೆ ಕೂಡಾ ಕೃಷ್ಣಾ ಜಲಾಶಯದಿಂದ ನಿತ್ಯವೂ ಇಷ್ಟೇ ಪ್ರಮಾಣದ ಕುಡಿಯುವ ನೀರು ಪೂರೈಸಬೇಕಾಗಿದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : Arecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ ಸೋಮವಾರದ ಅಡಿಕೆ ಧಾರಣೆ

ಕಲಬುರಗಿ ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ಮತ್ತು ಭೀಮಾ ನದಿಗಳಿಂದ ದಿನವೂ 7 ಎಂಎಲ್ ಡಿ, ಬಳ್ಳಾರಿ ಕೈಗಾರಿಕಾ ಪ್ರದೇಶಕ್ಕೆ ತುಂಗಭದ್ರಾ ಅಣೆಕಟ್ಟೆಯಿಂದ 13 ಎಂಎಲ್ ಡಿ, ರಾಯಚೂರು ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ನದಿಯಿಂದ 13 ಎಂಎಲ್ ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ.  ಒಟ್ಟಾರೆ ಪ್ರತಿನಿತ್ಯ 290 ಎಂ.ಎಲ್.ಡಿ ನೀರು ಈ ಜಿಲ್ಲೆಗಳಿಗೆ ಬೇಕಾಗಿದೆ. ಇದನ್ನು ಬಗೆಹರಿಸದೆ ಹಾಗೆಯೇ ಬಿಟ್ಟರೆ ರಾಜ್ಯದ ಕೈಗಾರಿಕಾ ಬೆಳವಣಿಗೆಯೇ ಹಿನ್ನಡೆ ಕಾಣಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಹಳೆ ಮೈಸೂರು ಭಾಗದಲ್ಲಿರುವ ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಈಗಾಗಲೇ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಅದನ್ನು ಕೈಗಾರಿಕಾ ಉದ್ದೇಶಕ್ಕೆ ಬಳಸಲಾಗುತ್ತಿದೆ. ಆದರೆ, ಇಲ್ಲೆಲ್ಲ ಕುಡಿಯುವ ನೀರಿನ ವಿಪರೀತ ಅಭಾವವಿದೆ. ಆದ್ದರಿಂದ, ಎಲ್ಲೆಲ್ಲಿ ಎಷ್ಟು ನೀರಿನ ಲಭ್ಯತೆ ಇದೆ, ಇಲ್ಲಿಗೆಲ್ಲ ಯಾವ್ಯಾವ ಮೂಲಗಳಿಂದ ಕುಡಿಯುವ ನೀರನ್ನು ಪೂರೈಸಬಹುದು ಎಂದು ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.  ಈ ಸಂಬಂಧವಾಗಿ ಇನ್ನೊಂದು ವಾರದಲ್ಲಿ ಮತ್ತೊಂದು ಸಭೆ ನಡೆಸಲಾಗುವುದು  ಎಂದಿದ್ದಾರೆ. 

ಇದನ್ನೂ ಓದಿ : ಗಡಿಜಿಲ್ಲೆಯಲ್ಲಿ ಬಿಯರ್ ಹೀರುವವರ ಸಂಖ್ಯೆ ಹೆಚ್ಚಳ: ಇದೇ ಮುಖ್ಯ ಕಾರಣ

ಕೈಗಾರಿಕೆಗಳಿಗೆ ಕುಡಿಯುವ ನೀರು ಪೂರೈಕೆ ಪ್ರಾಥಮಿಕ ಜವಾಬ್ದಾರಿಯಾಗಿದೆ. ರಾಜ್ಯದ ಉದ್ಯಮಗಳ ಬೆಳವಣಿಗೆಯ ದೃಷ್ಟಿಯಿಂದ ಇದು ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿದೆ. ಇದನ್ನು ವಿವಿಧ ಇಲಾಖೆಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಪಾಟೀಲ್ ಹೇಳಿದರು.

ಖನಿಜ ಭವನದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ನೀರು ಸರಬರಾಜು ಇಲಾಖೆ, ಬೆಂಗಳೂರು ಜಲ ಮಂಡಲಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News