Trigrahi Yog: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಒಂದು ರಾಶಿಚಕ್ರ ಚಿಹ್ನೆಯಲ್ಲಿ ಮೂರು ಗ್ರಹಗಳು ಒಟ್ಟಿಗೆ ಸೇರಿದಾಗ ತ್ರಿಗ್ರಾಹಿ ಯೋಗ ನಿರ್ಮಾಣವಾಗುತ್ತದೆ. ಇದೀಗ ಕುಂಭ ರಾಶಿಯಲ್ಲಿ ಶೀಘ್ರದಲ್ಲೇ ತ್ರಿಗ್ರಾಹಿ ಯೋಗ ನಿರ್ಮಾಣವಾಗುತ್ತಿದ್ದು, ಇದು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಒಂದು ರಾಶಿಯಲ್ಲಿ ಮೂರು ಗ್ರಹಗಳು ಒಟ್ಟಿಗೆ ಸೇರಿದಾಗ ತ್ರಿಗ್ರಾಹಿ ಯೋಗ ನಿರ್ಮಾಣವಾಗುತ್ತದೆ.
ಪ್ರಸ್ತುತ ಶನಿ ತನ್ನ ಮೂಲ ತ್ರಿಕೋನ ರಾಶಿಚಕ್ರ ಚಿಹ್ನೆಯಾದ ಕುಂಭ ರಾಶಿಯಲ್ಲಿ ಉಪಸ್ಥಿತನಿದ್ದು 2025ರವರೆಗೆ ಕುಂಭ ರಾಶಿಯಲ್ಲೇ ಸಂಚರಿಸಲಿದ್ದಾನೆ.
ಈ ತಿಂಗಳಾಂತ್ಯದಲ್ಲಿ ಬುಧ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. ಮಾರ್ಚ್ ತಿಂಗಳ ಆರಂಭದಲ್ಲಿ ಶುಕ್ರನು ಕೂಡ ಶನಿ ರಾಶಿಚಕ್ರ ಚಿಹ್ನೆ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ.
ಈ ರೀತಿಯಾಗಿ ಕರ್ಮಕಾರಕನಾದ ಶನಿಯು ಕುಂಭ ರಾಶಿಯಲ್ಲಿ ಇರುವಾಗ ಇದೇ ರಾಶಿಯಲ್ಲಿ ಶುಕ್ರ ಮತ್ತು ಬುಧ ಪ್ರವೇಶದಿಂದ ಈ ತ್ರಿಗ್ರಾಹಿ ಯೋಗವು ರೂಪುಗೊಳ್ಳುತ್ತದೆ.
ತ್ರಿಗ್ರಾಹಿ ಯೋಗದ ಶುಭ-ಅಶುಭ ಪರಿಣಾಮಗಳು ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಮೂರು ರಾಶಿಯವರ ದೃಷ್ಟಿಯಿಂದ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವೆಂದರೆ...
ವೃಷಭ ರಾಶಿಯ ಜನರಿಗೆ ತ್ರಿಗ್ರಾಹಿ ಯೋಗವು ಅತ್ಯಂತ ಅದೃಷ್ಟದ ಸಮಯ ಎಂದು ಸಾಬೀತುಪಡಿಸಲಿದೆ. ಈ ಸಮಯದಲ್ಲಿ ವ್ಯಾಪಾರಸ್ತರು ಬಂಪರ್ ಲಾಭವನ್ನು ನಿರೀಕ್ಷಿಸಬಹುದು. ಉದ್ಯಮಿಗಳಿಗೆ ಹೂಡಿಕೆಯಿಂದ ಲಾಭವಾಗಲಿದೆ.
ತ್ರಿಗ್ರಾಹಿ ಯೋಗದ ಶುಭ ಪರಿಣಾಮದಿಂದಾಗಿ ಮಿಥುನ ರಾಶಿಯ ಜನರು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯಲಿದ್ದಾರೆ. ಈ ಸಮಯದಲ್ಲಿ ನೀವು ಕೈ ಹಾಕುವ ಕೆಲಸದಲ್ಲೆಲ್ಲ ಭಾರೀ ಯಶಸ್ಸು, ಪ್ರಗತಿಯನ್ನು ಕಾಣುವಿರಿ. ಆರ್ಥಿಕ ಲಾಭದ ಸಾಧ್ಯತೆಯೂ ಇದೆ.
ಸ್ವ ರಾಶಿಯಲ್ಲಿ ನಿರ್ಮಾಣವಾಗುತ್ತಿರುವ ತ್ರಿಗ್ರಾಹಿ ಯೋಗವು ಕುಂಭ ರಾಶಿ ಜನರ ಜೀವನದಲ್ಲಿ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದೆ. ಈ ಸಮಯದಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಕೆಲಸಗಳಲ್ಲಿ ಯಶಸ್ಸು, ಕೀರ್ತಿಯನ್ನು ಪಡೆಯುವಿರಿ. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.