Ind vs Eng 3rd Test Updates: ವೈಜಾಗ್ ಟೆಸ್ಟ್’ನಲ್ಲಿ ಇಂಗ್ಲೆಂಡ್ ಅನ್ನು ಸೋಲಿಸಿದ ಟೀಂ ಇಂಡಿಯಾ, ಸದ್ಯ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ರ ಸಮಬಲ ಸಾಧಿಸಿದೆ. ಎರಡನೇ ಟೆಸ್ಟ್’ನಲ್ಲಿ ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಮಾಡಿದ್ದಾರೆ. ಎರಡೂ ಇನಿಂಗ್ಸ್’ಗಳಲ್ಲಿ ಒಟ್ಟು 9 ವಿಕೆಟ್ ಕಬಳಿಸಿದ ಬುಮ್ರಾ ‘ಪಂದ್ಯಶ್ರೇಷ್ಠ ಆಟಗಾರ’ ಪ್ರಶಸ್ತಿ ಕೂಡ ಪಡೆದಿದ್ದರು.
ಇದನ್ನೂ ಓದಿ: ಈ ಬೀಜವನ್ನು ಅರೆದು ಹಚ್ವಿದರೆ ಬಿಳಿ ಕೂದಲು ಪರ್ಮನೆಂಟ್ ಆಗಿ ಕಪ್ಪಾಗುವುದಲ್ಲದೆ, ದಷ್ಟಪುಷ್ಟವಾಗಿ ಬೆಳೆಯುತ್ತೆ!
ಅಂದಹಾಗೆ ಮೂರನೇ ಪಂದ್ಯ ಇದೇ 15ರಿಂದ ರಾಜ್ಕೋಟ್’ನಲ್ಲಿ ನಡೆಯಲಿದೆ. ರಾಜ್ ಕೋಟ್ ಟೆಸ್ಟ್’ಗೆ ಇನ್ನೂ ಹತ್ತು ದಿನ ಬಾಕಿ ಇದೆ. ಆದರೆ ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿ, ಮೂರನೇ ಟೆಸ್ಟ್’ನಲ್ಲಿ ಬುಮ್ರಾಗೆ ವಿರಾಮ ನೀಡಿ, ಸಿರಾಜ್’ಗೆ ಸ್ಥಾನ ನೀಡುವ ಸಾಧ್ಯತೆ ಇದೆ. ಈ ವರ್ಷದ ಟಿ20 ವಿಶ್ವಕಪ್ ಮತ್ತು ಕೆಲವು ಪ್ರಮುಖ ಟೂರ್ನಿಗಳನ್ನು ಗಮನದಲ್ಲಿರಿಸಿಕೊಂಡು ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗುತ್ತಿದೆ ಎನ್ನಲಾಗಿದೆ.
ವೈಜಾಗ್ ಟೆಸ್ಟ್’ನಲ್ಲಿ ಬುಮ್ರಾ ಎರಡು ಇನ್ನಿಂಗ್ಸ್’ಗಳಲ್ಲಿ ಒಟ್ಟು 32 ಓವರ್’ಗಳನ್ನು ಬೌಲ್ ಮಾಡಿ ಒಂಬತ್ತು ವಿಕೆಟ್ ಪಡೆದರು. ಮೊದಲ ಇನಿಂಗ್ಸ್’ನಲ್ಲಿ ಆರು ಮತ್ತು ಎರಡನೇ ಇನ್ನಿಂಗ್ಸ್’ನಲ್ಲಿ ಮೂರು ವಿಕೆಟ್ಗಳನ್ನು ಕಬಳಿಸಿದರು.
ಇದನ್ನೂ ಓದಿ: General Knowledge: ವಿಶ್ವದ ಅತ್ಯಂತ ಬಡ ದೇಶಗಳು ಯಾವುವು ಗೊತ್ತಾ?
ಕೊಹ್ಲಿಯೂ ಅನುಮಾನ..
ವೈಯಕ್ತಿಕ ಕಾರಣಗಳಿಂದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿರುವ ಕೊಹ್ಲಿ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ಲಭ್ಯರಾಗುವುದು ಅನುಮಾನವಾಗಿದೆ. ವಿರಾಟ್ ಕೊಹ್ಲಿ ಶೀಘ್ರದಲ್ಲೇ ತಂದೆಯಾಗಲಿದ್ದಾರೆ ಎಂದು ಎಬಿ ಡಿವಿಲಿಯರ್ಸ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ಸಮಯದಲ್ಲಿ ಕೊಹ್ಲಿ ಪತ್ನಿಯೊಂದಿಗೆ ಇರುವುದು ಅತ್ಯಗತ್ಯ. ಈ ಹಿನ್ನಲೆಯಲ್ಲಿ ಶೀಘ್ರವೇ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ವಿರಾಟ್ ಆಡುವ ಬಗ್ಗೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.