ʻವಿಷ್ಣುಪ್ರಿಯʼನ ರೊಮ್ಯಾಂಟಿಕ್ ಹಾಡಿಗೆ ಪ್ರೇಕ್ಷಕರು ಫಿದಾ!

Vishnupriya Movie: ಕೇಳಿದಾಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಛಾತಿ ಹೊಂದಿರುವ ಆ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಾ, ಮೆಚ್ಚುಗೆ ಗಳಿಸುತ್ತಾ ಮುಂದುವರೆಯುತ್ತಿದೆ.

Written by - YASHODHA POOJARI | Last Updated : Feb 8, 2024, 04:31 PM IST
  • ತೊಂಬತ್ತರ ದಶಕದ ಸಮ್ಮೋಹಕ ಪ್ರೇಮ ಕಥಾನಕ ಹೊಂದಿರುವ ಚಿತ್ರ
  • ಈ ಹಿಂದೆ ಪಡ್ಡೆಹುಲಿಯಾಗಿ ಭರವಸೆ ಮೂಡಿಸಿದ್ದ ಶ್ರೇಯಸ್ ಮಂಜು
  • ಈ ಚಿತ್ರದ ಚೆಂದದ ಹಾಡೊಂದು ವಾರಗಳ ಹಿಂದೆ ಬಿಡುಗಡೆಗೊಂಡಿತ್ತು
ʻವಿಷ್ಣುಪ್ರಿಯʼನ ರೊಮ್ಯಾಂಟಿಕ್ ಹಾಡಿಗೆ ಪ್ರೇಕ್ಷಕರು ಫಿದಾ! title=

Vishnupriya Movie: ತೊಂಬತ್ತರ ದಶಕದ ಸಮ್ಮೋಹಕ ಪ್ರೇಮ ಕಥಾನಕ ಹೊಂದಿರುವ ಚಿತ್ರ `ವಿಷ್ಣುಪ್ರಿಯ’. ಈ ಹಿಂದೆ ಪಡ್ಡೆಹುಲಿಯಾಗಿ ಭರವಸೆ ಮೂಡಿಸಿದ್ದ ಶ್ರೇಯಸ್ ಮಂಜು ವಿಷ್ಣುಪ್ರಿಯನಾಗಿ, ವಿಶಿಷ್ಟವಾದ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಈ ಚಿತ್ರದ ಚೆಂದದ ಹಾಡೊಂದು ವಾರಗಳ ಹಿಂದೆ ಬಿಡುಗಡೆಗೊಂಡಿತ್ತು.

ಇದೀಗ ದಿನದಿಂದ ದಿನಕ್ಕೆ ಆ ಹಾಡು ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಕೇಳಿದಾಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಛಾತಿ ಹೊಂದಿರುವ ಆ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಾ, ಮೆಚ್ಚುಗೆ ಗಳಿಸುತ್ತಾ ಮುಂದುವರೆಯುತ್ತಿದೆ.

ಚಿಗುರು ಚಿಗುರು ಸಮಯ ಹಿತವಾದ ಒಂದು ಮೌನ, ಒಲವು ಚಿಗುರೊ ಸಮಯ ಎದೆ ಬೇರಿನಲ್ಲಿ ಮೌನ... ಎಂಬ ಈ ಹಾಡು ಸಂಗೀತ, ಸಾಹಿತ್ಯ ಹಾಗೂ ದೃಷ್ಯ ಸೇರಿದಂತೆ ಎಲ್ಲ ಕೋನಗಳಲ್ಲಿಯೂ ಸಮ್ಮೋಹಕವಾಗಿದೆ. ಇದಕ್ಕೆ ಸಾಹಿತ್ಯ ಒದಗಿಸಿರುವವರು ಡಾ. ವಿ ನಾಗೇಂದ್ರ ಪ್ರಸಾದ್. ಬಹುಶಃ ಈ ಮೂಲಕ ವರ್ಷಾರಂಭದಲ್ಲಿಯೇ ನವಿರು ಭಾವವೊಂದನ್ನು ನಾಗೇಂದ್ರ ಪ್ರಸಾದ್ ಕೇಳುಗರ ಬೊಗಸೆ ತುಂಬಿಸಿದ್ದಾರೆ. ನಜೀನ್ ಅರ್ಷಾದ್ ಕಂಠಸಿರಿಯಲ್ಲಿ ಈ ಹಾಡು ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಈ ಮೂಲಕ ಕೇರಳದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಕನ್ನಡದಲ್ಲಿಯೂ ಕಮಾಲ್ ಮಾಡಿದ್ದಾರೆ.

ಇದನ್ನೂ ಓದಿ: ಮತ್ಸ್ಯಗಂಧದ ಕಡಲ ಒಡಲ ಮೇಲೆ ಹಾಡು ರಿಲೀಸ್ : ಕರಾವಳಿ ಸೊಗಡು ಸಾರುವ ಬಹುನೀರಿಕ್ಷಿತ ಚಿತ್ರ 23ಕ್ಕೆ ಬಿಡುಗಡೆ 

ಮತ್ತೆ ಮತ್ತೆ ಕೇಳಿಸಿಕೊಳ್ಳುವ ಗುಣ ಹೊಂದಿರುವ ಈ ಪ್ರೇಮ ಗೀತೆಯ ಪ್ರಭೆಯಲ್ಲಿ ವಿಷ್ಣುಪ್ರಿಯನ ಕ್ರೇಜ್ ಮತ್ತಷ್ಟು ಮಿರುಗುತ್ತಿದೆ. ಈ ವರ್ಷದ ಮೆಲೋಡಿಯಸ್ ಹಾಡೆಂದು ಗುರುತಿಸಿಕೊಳ್ಳುವ ಎಲ್ಲ ಗುಣಗಳೂ ಈ ಚಿಗುರು ಚಿಗುರು ಹಾಡಿಗಿದೆ. ಅಂದಹಾಗೆ, ಇದು ವಿ.ಕೆ ಪ್ರಕಾಶ್ ನಿರ್ದೇಶನದ ಚಿತ್ರ. ತೊಂಬತ್ತರ ದಶಕದಲ್ಲಿ ಘಟಿಸುವ ಈ ಕಥನದಲ್ಲಿ ಶ್ರೇಯಸ್ ಮಂಜು ನಾಯಕನಾಗಿ ನಟಿಸಿದ್ದರೆ, ಒರು ಅಡಾರ್ ಲವ್ ಖ್ಯಾತಿಯ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಈ ಪ್ರೇಮಕಥೆ ಅದೆಷ್ಟು ತಾಜಾತನದಿಂದ ನಳನಳಿಸುತ್ತಿದೆ ಎಂಬುದರ ಸ್ಪಷ್ಟ ಸೂಚನೆಯೊಂದು ಈ ಹಾಡಿನ ಮೂಲಕವೇ ಪ್ರೇಕ್ಷಕರನ್ನು ತಲುಪಿಕೊಂಡಿದೆ.

ಗಂಡುಗಲಿ ಕೆ.ಮಂಜು ನಿರ್ಮಾಣದ ವಿಷ್ಣುಪ್ರಿಯ ಚಿತ್ರದಲ್ಲಿ ಸುಚೇಂದ್ರಪ್ರಸಾದ್, ಅಚ್ಯುತ್ ಕುಮಾರ್ ಮುಂತಾದವರು ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು ಪ್ರೇಮಕಥೆ ಮಾತ್ರವಲ್ಲ; ತೊಂಬತ್ತರ ದಶಕದಲ್ಲಿ ನಡೆದಿದ್ದ ನೈಜ ಕಥನವೂ ಹೌದು. ಈ ಹಿಂದೆ ಮೊದಲ ಚಿತ್ರ ಪಡ್ಡೆಹುಲಿಯಲ್ಲಿ ಮೈದುಂಬಿ ನಟಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದವರು ಶ್ರೇಯಸ್ ಮಂಜು. ಅವರ ಪಾತ್ರದ ಚಹರೆಗಳು ಈ ಹಾಡಿನ ಮೂಲಕ ಜಾಹೀರಾಗಿದೆ. ಈ ಹಾಡು ಕೇಳಿದವರು, ನೋಡಿದವರೆಲ್ಲ ವಿಷ್ಣುಪ್ರಿಯನನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

ಇದನ್ನೂ ಓದಿ: ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಗೊಂಡು ಸಿನಿಪ್ರಿಯರ ಮನರಂಜಿಸುತ್ತಿರುವ ಜಲಪಾತ ಸಿನಿಮಾ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News