Foods For Diabetes : ಪ್ರಸ್ತುತ ಕಾಲದಲ್ಲಿ, ಮಧುಮೇಹವು ಒಂದು ದೊಡ್ಡ ಸಮಸ್ಯೆಯಾಗಿದೆ. ಈ ಸಮಸ್ಯೆಯು ಆನುವಂಶಿಕವಾಗಿರಬಹುದು. ಆದರೆ ಹೆಚ್ಚಿನ ಸಂದರ್ಭಗಳಲ್ಲಿ ಇದು ಕಳಪೆ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಗಳ ಕಾರಣದಿಂದಲೇ ಬರುತ್ತದೆ. ಮಧುಮೇಹವು ಮೂತ್ರಪಿಂಡದ ಕಾಯಿಲೆ, ಹೃದ್ರೋಗ, ಅಧಿಕ ಬಿಪಿ ಮತ್ತು ಪಾರ್ಶ್ವವಾಯು ಸೇರಿದಂತೆ ಅನೇಕ ಇತರ ಸಮಸ್ಯೆಗಳಿಗೆ ಕಾರಣವಾಗುತ್ತದೆ.ಈ ವೈದ್ಯಕೀಯ ಸ್ಥಿತಿಯಲ್ಲಿ, ಇನ್ಸುಲಿನ್ ಸ್ರವಿಸುವುದಿಲ್ಲ ಅಥವಾ ಸರಿಯಾಗಿ ಬಳಸಲಾಗುವುದಿಲ್ಲ.ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವ ಆಹಾರವನ್ನು ಸೇವಿಸುವುದರಿಂದ ಅಧಿಕ ರಕ್ತದ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಮಧುಮೇಹಿಗಳು ಈ 4 ಆಹಾರಗಳನ್ನು ಸೇವಿಸಬೇಕು :
1. ಬ್ರೊಕೊಲಿ:
ಪ್ರತಿ ಹಸಿರು ತರಕಾರಿ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಆದರೆ ಬ್ರೊಕೊಲಿ ಸೂಪರ್ಫುಡ್ ನಂತೆ ಕೆಲಸ ಮಾಡುತ್ತದೆ. ಇದನ್ನು ನಿಯಮಿತವಾಗಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆ ಮತ್ತು ಬಿಪಿ ನಿಯಂತ್ರಣದಲ್ಲಿ ಉಳಿಯುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಕೂಡಾ ಇದು ಹೆಚ್ಚಿಸುತ್ತದೆ.
ಇದನ್ನೂ ಓದಿ : Bones Health: ನಿಮ್ಮ ಮೂಳೆಗಳನ್ನು ಸದೃಡವಾಗಿಟ್ಟುಕೊಳ್ಳಲು ಹೀಗೆ ಮಾಡಿ...!
2. ಧಾನ್ಯಗಳು:
ನಮ್ಮ ದೈನಂದಿನ ಆಹಾರದಲ್ಲಿ ಧಾನ್ಯಗಳಿಂದ ಮಾಡಿದ ವಸ್ತುಗಳನ್ನು ಸೇರಿಸಿಕೊಳ್ಳಬೇಕು. ಅವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಮಧುಮೇಹ ರೋಗಿಗಳು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಬಯಸುವುದಾದರೆ ಪಾಲಿಶ್ ಮಾಡಿದ ಅಕ್ಕಿಯ ಬದಲಿಗೆ ಬ್ರೌನ್ ರೈಸ್ ಮತ್ತು ಸಾಮಾನ್ಯ ಗೋಧಿ ಹಿಟ್ಟಿನ ಬದಲಿಗೆ ಬಹುಧಾನ್ಯದ ಹಿಟ್ಟಿನ ಚಪಾತಿ ತಿನ್ನಬೇಕು.
3. ಮೊಟ್ಟೆ:
ಸಾಮಾನ್ಯವಾಗಿ ಬೆಳಗಿನ ಉಪಾಹಾರದಲ್ಲಿ ಕನಿಷ್ಠ ಒಂದು ಮೊಟ್ಟೆಯನ್ನಾದರೂ ತಿಂದರೆ ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಾಗತೊಡಗುತ್ತ. ಇದು ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವನ್ನು ನಿಯಂತ್ರಿಸುತ್ತದೆ. ಮೊಟ್ಟೆಯಲ್ಲಿ ಉತ್ತಮ ಪ್ರಮಾಣದ ಪ್ರೊಟೀನ್ ಇದ್ದು ಇದು ಮಧುಮೇಹ ರೋಗಿಗಳಿಗೆ ಅತ್ಯಗತ್ಯ.
ಇದನ್ನೂ ಓದಿ : Health Benefits of Leaves: ಔಷಧದ ಪರಿಣಾಮವನ್ನು ಹೊಂದಿರುವ ಈ ಐದು ಎಲೆಗಳ ಬಗ್ಗೆ ನಿಮಗೆಷ್ಟು ಗೊತ್ತು?
4. ಬೇಳೆಕಾಳುಗಳು:
ಬೇಳೆಕಾಳುಗಳು ನಮ್ಮ ದೈನಂದಿನ ಜೀವನದ ಪ್ರಮುಖ ಭಾಗವಾಗಿರುವ ಆಹಾರವಾಗಿದೆ. ಅದರ ಸಂಯೋಜನೆಯು ಅನ್ನ ಮತ್ತು ಚಪಾತಿಗೆ ಸರಿಹೊಂದುತ್ತದೆ. ಮಧುಮೇಹ ರೋಗಿಗಳಿಗೆ ಇದು ಬಹಳಷ್ಟು ಪ್ರಯೋಜನಕಾರಿಯಾಗಿದೆ. ಬೇಳೆಕಾಳುಗಳು ಪ್ರೋಟೀನ್ ಮತ್ತು ಫೈಬರ್ನ ಸಮೃದ್ಧ ಮೂಲವಾಗಿದ್ದು ಅದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.
(ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. )
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.