ಮುಂಬೈ: ಮುಂಬರುವ ಚುನಾವಣೆಯಲ್ಲಿ ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ 2 ದಿನ ಊಟ ಮಾಡಬೇಡಿ ಅಂತಾ ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಬಣದ ಶಾಸಕ ಸಂತೋಷ್ ಬಂಗಾರ್ ಶಾಲಾ ಮಕ್ಕಳಿಗೆ ಕರೆ ನೀಡಿದ್ದಾರೆ. ಅವರ ಈ ಹೇಳಿಕೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ವಿವಾದ ಸೃಷ್ಟಿಸಿದೆ.
ಕೇಂದ್ರ ಚುನಾವಣಾ ಆಯೋಗವು ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶನಗಳನ್ನು ಹೊರಡಿಸಿದ ಒಂದು ವಾರದ ನಂತರ ಕಳಮ್ನೂರಿ ಶಾಸಕ ಸಂತೋಷ್ ಬಂಗಾರ್ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಕಲಾಮ್ನುರಿ ಕ್ಷೇತ್ರದ ಶಾಸಕ ಸಂತೋಷ್ ಅವರು ಹಿಂಗೋಳಿ ಜಿಲ್ಲೆಯ ಜಿಲ್ಲಾ ಪರಿಷತ್ ಶಾಲೆಗೆ ಭೇಟಿ ನೀಡಿದ್ದಾಗ ಮಾತನಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: ಮಧ್ಯಪ್ರದೇಶದ ಜಬುವಾದಲ್ಲಿ ಪ್ರಧಾನಿ ರೋಡ್ಶೋ : 7550ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ
ಶಾಸಕ ಹೇಳಿದ್ದೇನು..?
आई वडिलांना सांगा संतोष बांगर ला मतदान करा नाहीतर आम्ही उपोषण करू, संतोष बांगर यांचा चिमुकल्यांना अजब गजब सल्ला....#SantoshBangar #ViralVideo #Hingoli pic.twitter.com/ytxQ15h0iu
— Valli S Rajan (@vallir51) February 10, 2024
ಮುಂದಿನ ಚುನಾವಣೆಯಲ್ಲಿ ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ ನೀವು 2 ದಿನ ಊಟ ಮಾಡಬೇಡಿ ಅಂತಾ ಸಂತೋಷ್ ಬಂಗಾರ್ ಹೇಳಿದ್ದಾರೆ. ವೈರಲ್ ವಿಡಿಯೋದಲ್ಲಿ ಶಾಲಾ ಮಕ್ಕಳಿಗೆ ಶಾಸಕ ಸಲಹೆ ನೀಡುತ್ತಿರುವುದನ್ನು ನೀವು ಕಾಣಬಹುದು. ಅವರ ಈ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಹಾಗೂ NCP-SP (ಶರದ್ ಪವಾರ್) ಪಕ್ಷದ ನಾಯಕರು ಕ್ರಮಕ್ಕೆ ಒತ್ತಾಯಿಸಿದ್ದಾರೆ.
NCP-SP ವಕ್ತಾರ ಕ್ಲೈಡ್ ಕ್ರಾಸ್ಟೊ ಈ ಬಗ್ಗೆ ಮಾತನಾಡಿದ್ದು, 'ಶಾಲಾ ಮಕ್ಕಳನ್ನುದ್ದೇಶಿಸಿ ಸಂತೋಷ್ ನೀಡಿರುವ ಹೇಳಿಕೆ ಚುನಾವಣಾ ಆಯೋಗದ ನಿರ್ದೇಶನಕ್ಕೆ ವಿರುದ್ಧವಾಗಿದೆ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅವರು ಮತ್ತೆ ಮತ್ತೆ ಇಂತಹ ತಪ್ಪು ಮಾಡುತ್ತಿದ್ದರೂ ಸಹ ಬಿಜೆಪಿಯ ಮಿತ್ರಪಕ್ಷದಲ್ಲಿರುವುದರಿಂದ ಶಿಕ್ಷೆಯಿಂದ ಪಾರಾಗುತ್ತಿದ್ದಾರೆ. ಚುನಾವಣಾ ಆಯೋಗವು ಅವರ ವಿರುದ್ಧ ನಿಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು ಅಂತಾ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ನವದೆಹಲಿಯಲ್ಲಿ ಇಂದಿನಿಂದ ಫೆ.18 ರವೆರೆಗೆ ನಡೆಯಲಿದೆ 51ನೇ ಆವೃತ್ತಿಯ ವಿಶ್ವ ಪುಸ್ತಕ ಮೇಳ 2024
ತಮ್ಮ ಪಕ್ಷದ ಶಾಸಕರು ಇಂತಹ ವಿವಾದಾತ್ಮಕ ಹೇಳಿಕೆ ನೀಡುತ್ತಿರುವಾಗ. ಶಿಕ್ಷಣ ಸಚಿವರು ನಿದ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ವಿಜಯ್ ನಾಮದೇವರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂತೋಷ್ ಬಂಗಾರ್ ಈ ಹಿಂದೆಯೂ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.