Coconut Husk benefits: ಕಲ್ಪವೃಕ್ಷದಲ್ಲಿ ಯಾವುದೂ ಕೂಡ ಬೇಡ ಎನ್ನುವಂತಹದ್ದಿಲ್ಲ. ತೆಂಗಿನಗರಿ, ತೆಂಗಿನಕಾಯಿ ಹೀಗೆ ಅನೇಕ ವಿಧಗಳಲ್ಲಿ ಕಲ್ಪವೃಕ್ಷವನ್ನು ಬಳಕೆ ಮಾಡಲಾಗುತ್ತದೆ. ಇದೀಗ ತೆಂಗಿನ ನಾರುಗಳ ಉಪಯೋಗಗಳ ಬಗ್ಗೆಯೂ ನಿಮಗೆ ಮಾಹಿತಿಯನ್ನು ನೀಡಲಿದ್ದೇವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ತೆಂಗಿನಕಾಯಿಯ ಪ್ರಯೋಜನಕಾರಿ ಗುಣಗಳ ಬಗ್ಗೆ ಬಹುತೇಕ ಎಲ್ಲರಿಗೂ ತಿಳಿದಿರುತ್ತದೆ. ಆದರೆ ತೆಂಗಿನ ಸಿಪ್ಪೆಯ ಗುಣಲಕ್ಷಣಗಳ ಬಗ್ಗೆ ನಿಮಗೆ ತಿಳಿದಿದೆಯೇ? ತೆಂಗಿನ ಸಿಪ್ಪೆಯನ್ನು ಎಸೆಯುವುದು ಸಾಮಾನ್ಯ. ಆದರೆ ಆ ಸಿಪ್ಪೆಯಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ನಿವಾರಿಸಬಹುದು.
ಯಾರಾದರೂ ಗಾಯಗೊಂಡರೆ ತೆಂಗಿನ ಎಣ್ಣೆಯನ್ನು ಊದಿಕೊಂಡ ಜಾಗಕ್ಕೆ ಹಚ್ಚುತ್ತೇವೆ. ಅದರೆ ಅದರ ಬದಲಿಗೆ ತೆಂಗಿನ ಸಿಪ್ಪೆಯನ್ನು ಪುಡಿ ಮಾಡಿ ಅದಕ್ಕೆ ಅರಿಶಿನ ಬೆರೆಸಿ ಊತವಿರುವ ಜಾಗಕ್ಕೆ ಹಚ್ಚಿದರೆ ಊತ ಶೀಘ್ರದಲ್ಲೇ ಕಡಿಮೆಯಾಗುತ್ತದೆ.
ಹಲ್ಲುಗಳ ಹಳದಿ ಸಮಸ್ಯೆಯಿಂದ ಜನರು ಹೆಚ್ಚಾಗಿ ತೊಂದರೆಗೊಳಗಾಗುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ತೆಂಗಿನ ಸಿಪ್ಪೆಯನ್ನು ಬಳಸಿಕೊಂಡು ಹಲ್ಲುಗಳ ಹಳದಿ ಬಣ್ಣವನ್ನು ತೆಗೆದುಹಾಕಬಹುದು. ಇದಕ್ಕಾಗಿ ತೆಂಗಿನ ಸಿಪ್ಪೆಯನ್ನು ಸುಟ್ಟು, ಅದಕ್ಕೆ ಸೋಡಾ ಬೆರೆಸಿ ಹಲ್ಲುಗಳ ಮೇಲೆ ಮೃದುವಾಗಿ ಮಸಾಜ್ ಮಾಡಬೇಕು.
ಬಿಳಿ ಕೂದಲನ್ನು ಕಪ್ಪಾಗಿಸಲು ತೆಂಗಿನ ಸಿಪ್ಪೆಯನ್ನು ಸಹ ಬಳಸಲಾಗುತ್ತದೆ. ತೆಂಗಿನ ಸಿಪ್ಪೆಯನ್ನು ಬಾಣಲೆಯಲ್ಲಿ ಬಿಸಿ ಮಾಡಿ ಪುಡಿ ಮಾಡಿ. ಈ ಪುಡಿಯನ್ನು ತೆಂಗಿನ ಎಣ್ಣೆಯಲ್ಲಿ ಮಿಶ್ರಣ ಮಾಡಿ ಕೂದಲಿಗೆ ಹಚ್ಚಿ. ಹೀಗೆ ಮಾಡಿದರೆ ನೈಸರ್ಗಿಕವಾಗಿ ಬಿಳಿಕೂದಲು ಕಪ್ಪಾಗುತ್ತವೆ.
ತೆಂಗಿನ ಸಿಪ್ಪೆಯನ್ನು ಪೈಲ್ಸ್ ಸಮಸ್ಯೆಯಿಂದ ಮುಕ್ತಿ ಪಡೆಯಲು ಸಹ ಬಳಸಬಹುದು. ತೆಂಗಿನ ಸಿಪ್ಪೆಯನ್ನು ಸುಟ್ಟು ಪುಡಿ ಮಾಡಿ ಖಾಲಿ ಹೊಟ್ಟೆಯಲ್ಲಿ ನೀರಿನೊಂದಿಗೆ ಸೇವಿಸಿ. ಇದರಿಂದ ಪೈಲ್ಸ್ ಸಮಸ್ಯೆ ದೂರವಾಗುತ್ತದೆ. ತೆಂಗಿನ ಸಿಪ್ಪೆಯಲ್ಲಿರುವ ನಾರಿನಂಶವು ದೇಹದ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)