ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್: ಸೋನಿಯಾ ಗಾಂಧಿ ಸೇರಿ 4 ಮಂದಿ ಹೆಸರು ಘೋಷಣೆ

List of Congress Rajya Sabha Candidates: ರಾಜಸ್ಥಾನದಿಂದ ಸೋನಿಯಾ ಗಾಂಧಿ, ಬಿಹಾರದಿಂದ ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ ಮತ್ತು ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಅವರನ್ನು ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಮಾಡಿದೆ.

Written by - Bhavishya Shetty | Last Updated : Feb 14, 2024, 01:06 PM IST
    • ರಾಜ್ಯಸಭಾ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಕಾಂಗ್ರೆಸ್
    • 6 ರಾಜ್ಯಸಭಾ ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಬೇಕಿದೆ
    • ಉಳಿದ ಹೆಸರನ್ನು ಇಂದು ಸಂಜೆಯೊಳಗೆ ಕಾಂಗ್ರೆಸ್ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ
ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್: ಸೋನಿಯಾ ಗಾಂಧಿ ಸೇರಿ 4 ಮಂದಿ ಹೆಸರು ಘೋಷಣೆ title=
List of Congress Rajya Sabha Candidates

Rajya Sabha candidates List: ರಾಜ್ಯಸಭಾ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದ್ದು, ಈ ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಅಖಿಲೇಶ್ ಪ್ರಸಾದ್ ಸಿಂಗ್, ಅಭಿಷೇಕ್ ಮನು ಸಿಂಘ್ವಿ ಮತ್ತು ಚಂದ್ರಕಾಂತ್ ಹಂದೋರೆ ಅವರ ಹೆಸರುಗಳು ಸೇರಿವೆ.

 ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಗೆ ಈ 3 ಹಾಡುಗಳೆಂದರೆ ಪಂಚಪ್ರಾಣ: ಕಿವಿಗೆ ಬಿದ್ದರೆ ಸಾಕು ನಿಂತಲ್ಲೇ ಕುಣಿತಾರಂತೆ…!

ಯಾರು ಎಲ್ಲಿಂದ ಅಭ್ಯರ್ಥಿ?

ರಾಜಸ್ಥಾನದಿಂದ ಸೋನಿಯಾ ಗಾಂಧಿ, ಬಿಹಾರದಿಂದ ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ ಮತ್ತು ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಅವರನ್ನು ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಮಾಡಿದೆ.

ಸದ್ಯಕ್ಕೆ 6 ರಾಜ್ಯಸಭಾ ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಬೇಕಿದೆ. ಇವುಗಳಲ್ಲಿ ಮಧ್ಯಪ್ರದೇಶದಿಂದ ಒಂದು ರಾಜ್ಯಸಭಾ ಸ್ಥಾನ, ತೆಲಂಗಾಣದಿಂದ ಎರಡು ಮತ್ತು ಕರ್ನಾಟಕದಿಂದ ಮೂರು ಸ್ಥಾನಗಳು ಸೇರಿವೆ. ಈ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಇಂದು ಸಂಜೆಯೊಳಗೆ ಕಾಂಗ್ರೆಸ್ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ.

ಸೋನಿಯಾ ಗಾಂಧಿ ರಾಜ್ಯಸಭೆಗೆ ಹೋಗುವುದು ಖಚಿತ ಎನ್ನಲಾಗಿದೆ. ಸೋನಿಯಾ ರಾಜ್ಯಸಭೆಗೆ ಹೋದರೆ, ಅವರ ಪುತ್ರಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

 ಇದನ್ನೂ ಓದಿ: “ಇದೇ ಕಾರಣಕ್ಕೆ ರೋಹಿತ್ ಬದಲು ಹಾರ್ದಿಕ್’ಗೆ ಮುಂಬೈ ನಾಯಕತ್ವ ನೀಡಿದ್ದು”- ಸುನಿಲ್ ಗವಾಸ್ಕರ್

ನಾಳೆ ಅಂದರೆ ಫೆಬ್ರವರಿ 15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇದಾದ ಬಳಿಕ 15ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಫೆಬ್ರವರಿ 27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ಮತದಾನ ನಡೆಯಲಿದೆ ಎಂಬುದು ಗಮನಾರ್ಹ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News