Basavaraj Bommai: ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂದು ಕೋರ್ಟ್ ಕೂಡ ಹೇಳುತ್ತಿದೆ..!

Basavaraj Bommai Criticizes Congress: 40% ಕಮಿಷನ್ ಕುರಿತ ತನಿಖೆಯನ್ನು ಅನಗತ್ಯ ವಿಳಂಬ ಮಾಡಿತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿ ಆರು ವಾರದಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರದಲ್ಲಿ ಹಣ ಇಲ್ಲದಿರುವುದಕ್ಕೆ ಈ ರೀತಿಯ ಕಮಿಷನ್ ಮಾಡಿಕೊಂಡು ಕುಳಿತಿದ್ದೀರಿ, ಆರು ವಾರದಲ್ಲಿ ವರದಿ ನೀಡದಿದ್ದರೆ, ಹಣ ಬಿಡುಗಡೆಗೆ ನಾವೇ ನಿರ್ದೇಶನ ನೀಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

Written by - Prashobh Devanahalli | Edited by - Krishna N K | Last Updated : Feb 14, 2024, 04:44 PM IST
  • ಸರ್ಕಾರ ಕಾಲ ಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದೆ
  • ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ
  • ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ
Basavaraj Bommai: ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂದು ಕೋರ್ಟ್ ಕೂಡ ಹೇಳುತ್ತಿದೆ..! title=

ಹಾವೇರಿ: 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲ ಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಕುರಿತ ತನಿಖೆಯನ್ನು ಅನಗತ್ಯ ವಿಳಂಬ ಮಾಡಿತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿ ಆರು ವಾರದಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರದಲ್ಲಿ ಹಣ ಇಲ್ಲದಿರುವುದಕ್ಕೆ ಈ ರೀತಿಯ ಕಮಿಷನ್ ಮಾಡಿಕೊಂಡು ಕುಳಿತಿದ್ದೀರಿ, ಆರು ವಾರದಲ್ಲಿ ವರದಿ ನೀಡದಿದ್ದರೆ, ಹಣ ಬಿಡುಗಡೆಗೆ ನಾವೇ ನಿರ್ದೇಶನ ನೀಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ. ಸರಕಾರ ಈಗಲಾದರೂ ನಾಚಿಕೆ ಬಿಟ್ಟು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ:ಫೆ.25 ರಂದು ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗಾಗಿ ಲಿಖಿತ ಪರೀಕ್ಷೆ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಮೇಲೆ ಒತ್ತಡ ಇದ್ದು, ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಹೀಗಾಗಿ ಅವರು ಸರ್ಕಾರದ ಪರವಾಗಿ ಮಾತನಾಡುತ್ತಿದ್ದಾರೆ. ಆ ರೀತಿ ಮಾತನಾಡುವಂತೆ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ನಿಲ್ಲಿಸಿಬಿಟ್ಟಿದ್ದಾರೆ, ಶೂನ್ಯವಾಗಿದೆ ಅಭಿವೃದ್ಧಿಯಾಗಿದೆ ಎಂದು ಹೇಳಿದರು. 

ಜಂಟಿ ಅಧಿವೇಶನದಲ್ಲಿ  ರಾಜ್ಯಪಾಲರ ಬಾಯಲ್ಲಿ ಹಸಿ ಸುಳ್ಳನ್ನು ಹೇಳಿಸಿದ್ದಾರೆ. ಹಿಂದಿನ ಸರ್ಕಾರದ ಸಾಧನೆಗಳನ್ನು ತನ್ನ ಸಾಧನೆ ಎಂದು ಸರ್ಕಾರ ಹೇಳಿಕೊಂಡಿದೆ. ಈ ಸರಕಾರ ಯಾವುದೇ ಸಾಧನೆ ಮಾಡಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ಸೇರಿದಂತೆ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

ಇದನ್ನೂ ಓದಿ:ನಮ್ಮ ಭೂಮಿ, ನಮ್ಮ ಭಾಷೆಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಇದೇ ವೇಳೆ, ಲೋಕಸಭೆ ಟಿಕೆಟ್ ಹಂಚಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಫೆ. 17, 18 ರಂದು ದೆಹಲಿಯಲ್ಲಿ ರಾಷ್ಟ್ರೀಯ ಕೌನ್ಸಿಲ್ ಸಬೆ ನಡೆಯಲಿದೆ. ಆ ಸಬೆಯ ಬಳಿಕ ಟಿಕೆಟ್ ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಜೆಡಿಎಸ್ ಜೊತೆಗೆ ಟಿಕೆಟ್ ಹಂಚಿಕೆ ವಿಚಾರವು ಅಂದು ಚರ್ಚೆ ಆಗಲಿದೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News