ಬೆಂಗಳೂರು: ಫೆ.17ರಂದು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ರೈತ ವಿರೋಧಿ ಕಾನೂನು ರದ್ದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ದೆಹಲಿಯಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಇದರ ಬೆನ್ನಲ್ಲೇ ರಾಜ್ಯದಲ್ಲಿಯೂ ಕೂಡ ರೈತ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಫೆಬ್ರವರಿ 17ರಂದು ಅಂದರೆ ನಾಡಿದ್ದು ಬೆಂಗಳೂರು ಚಲೋ ಗೆ ಕರೆ ನೀಡಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: "ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಸತ್ಯವನ್ನು ಹುದುಗಿಸಿಡಲು ಯತ್ನಿಸುತ್ತದೆ"
ಬೆಂಗಳೂರು ಚಲೋ ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆ, ತಾಲೂಕು, ಪಟ್ಟಣ ಹಾಗೂ ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಲಾಗಿದೆ.
ಫೆ.17ರಂದು ರೈತರು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ನೀಡಲಿದ್ದಾರೆ. ಬೃಹತ್ ಸಮಾವೇಶದಲ್ಲಿ ರಾಜ್ಯಾದ್ಯಂತ ಸುಮಾರು 15 ಸಂಘಟನೆಗಳ ರೈತ ಮುಖಂಡರು, ರೈತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗಿಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: ಕರ್ನಾಟಕ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.