ಶಿವಮೊಗ್ಗದ ಕಾರ್‌ ಶೋರೂಮ್‌ನಲ್ಲಿ ಭೀಕರ ಅಗ್ನಿ ಅವಘಡ.. ಸುಟ್ಟು ಕರಕಲಾದ ಕಾರುಗಳು

Shivamogga Car Fire: ಕಾರ್‌ ಶೋರೂಮ್‌ ಒಳಗಿದ್ದ ಮೂರು ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪ್ರವೇಶ ದ್ವಾರದಲ್ಲಿ ನಿಲ್ಲಿಸಿದ್ದ ನಾಲ್ಕು ಕಾರುಗಳು ಭಾಗಶಃ ಬೆಂಕಿಗೆ ಆಹುತಿಯಾಗಿವೆ. 

Written by - Chetana Devarmani | Last Updated : Feb 17, 2024, 08:56 AM IST
  • ಶಿವಮೊಗ್ಗದಲ್ಲಿ ಭೀಕರ ಅಗ್ನಿ ಅವಘಡ
  • ಏಳು ಕಾರುಗಳು ಸುಟ್ಟು ಕರಕಲು
  • ಹ್ಯುಂಡೈ ಶೋರೂಮ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಶಿವಮೊಗ್ಗದ ಕಾರ್‌ ಶೋರೂಮ್‌ನಲ್ಲಿ ಭೀಕರ ಅಗ್ನಿ ಅವಘಡ.. ಸುಟ್ಟು ಕರಕಲಾದ ಕಾರುಗಳು title=

ಶಿವಮೊಗ್ಗ: ನಗರದ ಶೇಷಾದ್ರಿಪುರಂನ ಶಂಕರ ಮಠದ ರಸ್ತೆಯಲ್ಲಿರುವ ಡೀಲರ್‌ಶಿಪ್ ಔಟ್‌ಲೆಟ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹ್ಯುಂಡೈ ಮೋಟಾರ್ ಕಂಪನಿಯ ಸುಮಾರು ಏಳು ಕಾರುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.

ಕಾರ್‌ ಶೋರೂಮ್‌ ಒಳಗಿದ್ದ ಮೂರು ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪ್ರವೇಶ ದ್ವಾರದಲ್ಲಿ ನಿಲ್ಲಿಸಿದ್ದ ನಾಲ್ಕು ಕಾರುಗಳು ಭಾಗಶಃ ಬೆಂಕಿಗೆ ಆಹುತಿಯಾಗಿವೆ. ಅಪಘಾತದಲ್ಲಿ ಬಿಡಿಭಾಗಗಳು, ಟೈರ್‌ಗಳು ಮತ್ತು ಸರಕುಗಳು ಬೂದಿಯಾಗಿವೆ. ಸತತ ಮೂರು ಗಂಟೆಗಳಿಗೂ ಹೆಚ್ಚು ಕಾಲ 30ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದರು. 10 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಂದಿಸಲಾಗಿದೆ. 

ಇದನ್ನೂ ಓದಿ: ಸುದೀರ್ಘ ವರ್ಷಗಳ‌ ಬೇಡಿಕೆ : ಬಸವ ಜನ್ಮಭೂಮಿ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ 

ಭದ್ರಾವತಿ ಮತ್ತು ತರೀಕೆರೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮಧ್ಯರಾತ್ರಿಯ ಹೊತ್ತಿಗೆ ಬೆಂಕಿಯನ್ನು ನಂದಿಸಿದರು. ಔಟ್ಲೆಟ್‌ನ ಛಾವಣಿಯ ಮೇಲೆ ಬೆಂಕಿ ಕಾಣಿಸಿಕೊಂಡಿತು. ಈ ದುರ್ಘಟನೆಯನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ಸಿಬ್ಬಂದಿ ಮನೆಗೆ ತೆರಳಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಬೆಂಕಿಯನ್ನು ಬಹುತೇಕ ನಂದಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಜಿಲ್ಲಾ ಅಧಿಕಾರಿ ಜಿ ಮಹಾಲಿಂಗಪ್ಪ ತಿಳಿಸಿದ್ದಾರೆ. 

ಇದನ್ನೂ ಓದಿ: "ಕೇಂದ್ರದಿಂದ ನಿರಂತರ ಅನ್ಯಾಯ, ನಮ್ಮ ಪಾಲಿನ ನ್ಯಾಯಯುತ ಪಾಲು ಬರದಿದ್ದರೂ ರಾಜ್ಯ ಆರ್ಥಿಕವಾಗಿ ಸುಭದ್ರ" 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News