ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಮಂಡಿಸಿರುವ ನಿರ್ಣಯದ ವಿರುದ್ಧ ಇಂದು ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ದ ನಿರ್ಣಯ ಮಂಡಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ದ ನಿರ್ಣಯ ಮಂಡಿಸಿ ವಿಧಾನಸಭೆಯ ಪಾವಿತ್ರ್ಯತೆಯನ್ನು ಹಾಳು ಮಾಡಿ ಸುಳ್ಳು ಹೇಳುವ ದಾಷ್ಟ್ಯ ತೋರಿದೆ. ಕೇಂದ್ರದಿಂದ ಅನ್ಯಾಯವಾಗಿದೆ ಅಂತ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದ ತೆರಿಗೆ ಕಾಂಗ್ರೆಸ್ ಆಡಳಿತದಲ್ಲಿ 20% ರಷ್ಟು ಮಾತ್ರ ಇತ್ತು. ಆಗ ರಾಮಕೃಷ್ಣ ಹೆಗಡೆ ನೇತೃತ್ವದಲ್ಲಿ ದಕ್ಷಿಣ ಭಾರತದ ಅನೇಕ ನಾಯಕರು ಸೇರಿ ರಾಜ್ಯಗಳ ತೆರಿಗೆ ಹೆಚ್ಚಳ ಮಾಡುವಂತೆ ಹೋರಾಟ ಮಾಡಲಾಯಿತು. ಆದರೆ, ಯುಪಿಎ ಅವಧಿಯಲ್ಲಿ ರಾಜ್ಯಗಳ ತೆರಿಗೆ ಅನುದಾನ ಹೆಚ್ಚಳ ಮಾಡಲು ನಿರಾಕರಿಸಿದ್ದರು. ನರೇಂದ್ರ ಮೋದಿಯವರು ಬಂದು ಕೆಲವೇ ವರ್ಷದಲ್ಲಿ ರಾಜ್ಯಗಳ ತೆರಿಗೆ ಪಾಲನ್ನು ಶೇ 32% ರಿಂದ ಶೇ 42% ಕ್ಕೆ ಹೆಚ್ಚಳಮಾಡಿದ್ದಾರೆ ಎಂದು ವಿವರಿಸಿದರು.
ಇದನ್ನೂ ಓದಿ-ರಾಷ್ಟ್ರಮಟ್ಟದ ಇಬ್ಬರು ನಾಯಕರಿಗೆ ಸಾವಿನ ಕಂಟಕ, ಓರ್ವ ಧಾರ್ಮಿಕ ಪ್ರಮುಖನ ಸಾವು: ಕೋಡಿಶ್ರೀ ಭವಿಷ್ಯ
ಕೇಂದ್ರದಿಂದ ರಾಜ್ಯಕ್ಕೆ ಕೇವಲ ಜಿಎಸ್ ಟಿ ಪರಿಹಾರ, ಅನುದಾನ ಅಷ್ಟೇ ಅಲ್ಲದೇ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ಬರಲಿದೆ ಅಲ್ಲದೇ, ಫಲಾನುಭವಿಗಳ ಅಕೌಂಟ್ ಗೆ ನೇರವಾಗಿ ಹಣ ಹಾಕುತ್ತದೆ. ರಾಜ್ಯ ಸರ್ಕಾರ ಅದೆಲ್ಲವನ್ನು ಮುಚ್ಚಿಟ್ಟು ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸುಳ್ಳು ಹೇಳುತ್ತಿದೆ. ಬೆಂಗಳೂರಿನ ಫೆರಿಪೆರಲ್ ರಿಂಗ್ ರೊಡ್ ಗೆ ಕೇಂದ್ರದಿಂದ ಈಗಲೂ ಹಣ ಬರುತ್ತದೆ. ಆದರೆ, ರಾಜ್ಯ ಸರ್ಕಾರ ಯೋಜನೆ ಆರಂಭಿಸಬೇಕು. ರಾಷ್ಟ್ರೀಯ ಹೆದ್ದಾರಿಗೆ ಸುಮಾರು 13 ಸಾವಿರ ಕೋಟಿ ರೂ. ಕೇಂದ್ರ ಸರ್ಕಾರ ನೀಡಿದೆ. ರೈಲ್ವೆ ಯೋಜನೆಗಳಿಗೆ ಕೇಂದ್ದದ ಅನುದಾನ ಬಂದಿದೆ. ಪ್ರಧಾನಮಂತ್ರಿ ಅವಾಸ್ ಯೋಜನೆ, ಸ್ವಚ್ಚ ಭಾರತ, ಆಯುಷ್ಮಾನ್ ಭಾರತ, ಅಮೃತ ನಗರ ಯೊಜನೆ ಅಡಿಯಲ್ಲಿ ರಾಜ್ಯಕ್ಕೆ ಹಣ ಬಂದಿದೆ ಎಂದು ಹೇಳಿದರು.
ಕಳೆದ ಐದು ವರ್ಷದಲ್ಲಿ ಕೇಂದ್ರದಿಂದ ಜಿಎಸ್ ಟಿ ಪರಿಹಾರ 1.06 ಲಕ್ಷ ಕೋಟಿ ರೂ. ಬಂದಿದೆ. 15 ನೇ ಹಣಕಾಸು ಆಯೋಗದ ಅವಧಿ ಇನ್ನೂ 2026 ರ ವರೆಗೆ ಇದೆ. ಇನ್ನೂ 1 ಲಕ್ಷ ಕೋಟಿಗೂ ಹೆಚ್ಚು ಹಣ ಬರುತ್ತದೆ. ಕೇಂದ್ರ ಸರ್ಕಾರ ಜಿಎಸ್ ಟಿ ಪರಿಹಾರ ಶೇ 14% ರಷ್ಟು 2022 ರವರೆಗೆ ನೀಡಿದೆ. ಜಿಎಸ್ ಟಿ ಪರಿಹಾರ ಅವಧಿ ಮುಗಿದರೂ, ರಾಜ್ಹ ಸರ್ಕಾರ ಅದನ್ನು 2023-24 ರ ವರೆಗೆ ಸೇರಿಸಿ ಜನರ ದಾರಿ ತಪ್ಪಿಸುತ್ತಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕೇಂದ್ರ ರಾಜ್ಯದ ನಡುವೆ ಸಂಘರ್ಷ ಉಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ನಾವು ರಾಜ್ಯ ಸರ್ಕಾರದ ವಿರುದ್ದ ನಿರ್ಣಯ ಮಂಡಿಸಿದ್ದೇವೆ. ನಾವು ಮಂಡಿಸಿರುವ ನಿರ್ಣಯವನ್ನು ಯಾರೂ ವಿರೋಧ ಮಾಡಿಲ್ಲ. ಹೀಗಾಗಿ ನಮ್ಮ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಗಿದೆ ಎಂದು ತಿಳಿದಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ-ರಾಷ್ಟ್ರಮಟ್ಟದ ಇಬ್ಬರು ನಾಯಕರಿಗೆ ಸಾವಿನ ಕಂಟಕ, ಓರ್ವ ಧಾರ್ಮಿಕ ಪ್ರಮುಖನ ಸಾವು: ಕೋಡಿಶ್ರೀ ಭವಿಷ್ಯ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.