ಮಹಾರಾಷ್ಟ್ರದಲ್ಲಿ ಎನ್‌ಸಿಪಿ-ಕಾಂಗ್ರೆಸ್ 125-125 ಸ್ಥಾನಗಳಿಗೆ ಸ್ಥರ್ಧೆ: ಶರದ್ ಪವಾರ್

ನಾಸಿಕ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪವಾರ್ ಮೈತ್ರಿ ಬಗ್ಗೆ ಘೋಷಣೆ ಮಾಡಿದ್ದು, ಉಳಿದ ಸ್ಥಾನಗಳನ್ನು ಇತರ ಪಕ್ಷಗಳಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.  

Last Updated : Sep 16, 2019, 06:56 PM IST
ಮಹಾರಾಷ್ಟ್ರದಲ್ಲಿ ಎನ್‌ಸಿಪಿ-ಕಾಂಗ್ರೆಸ್ 125-125 ಸ್ಥಾನಗಳಿಗೆ ಸ್ಥರ್ಧೆ: ಶರದ್ ಪವಾರ್ title=

ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್-ಎನ್‌ಸಿಪಿ ಮೈತ್ರಿ ಬಗ್ಗೆ ಘೋಷಣೆ ಮಾಡಿರುವ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಮುಖ್ಯಸ್ಥ ಶರದ್ ಪವಾರ್, ಎರಡೂ 125-125 ಸ್ಥಾನಗಳಿಗೆ ಸ್ಪರ್ಧಿಸಲಿವೆ ಎಂದು ಹೇಳಿದ್ದಾರೆ.

ನಾಸಿಕ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪವಾರ್ ಮೈತ್ರಿ ಬಗ್ಗೆ ಘೋಷಣೆ ಮಾಡಿದ್ದು, ಉಳಿದ ಸ್ಥಾನಗಳನ್ನು ಇತರ ಪಕ್ಷಗಳಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಥಾನ ಹಂಚಿಕೆ ಕುರಿತು ಕಳೆದ ವಾರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಿ ಘೋಷಣೆ ಮಾಡುವುದಾಗಿ ಪವಾರ್ ಹೇಳಿದ್ದರು. ಅಲ್ಲದೆ, ರಾಜ್ಯದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಯನ್ನು ಹಿಮ್ಮೆಟ್ಟಿಸಲು ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ಮೈತ್ರಿ ಕುರಿತು ಉಭಯ ನಾಯಕರು ಚರ್ಚಿಸಿದ್ದರು. ಈ ಬೆನ್ನಲ್ಲೇ ಪವಾರ್ ಮೈತ್ರಿ ಘೋಷಣೆ ಮಾಡಿದ್ದಾರೆ. 

2014ರ ಚುನಾವಣೆಯಲ್ಲಿ 288 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 122 ಸ್ಥಾನಗಳನ್ನು ಗೆದ್ದರೆ, ಶಿವಸೇನೆ 62 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಮತ್ತು ಎನ್‌ಸಿಪಿ ಕ್ರಮವಾಗಿ 42 ಮತ್ತು 41 ಸ್ಥಾನಗಳನ್ನು ಪಡೆದಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ.
 

Trending News