ಹೃದಯಾಘಾತದಿಂದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ 

ಇತ್ತೀಚಿಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕರಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನರಾಗಿದ್ದಾರೆ.

Written by - Zee Kannada News Desk | Last Updated : Feb 25, 2024, 03:27 PM IST
  • ಅವರಿಗೆ 67 ವರ್ಷವಾಗಿತ್ತು,
  • ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಿದ್ದಾರೆ.
  • ಕಾಂಗ್ರೆಸ್ ನಿಂದ ತಮ್ಮ ಸಕ್ರೀಯ ರಾಜಕೀಯ ಪ್ರವೇಶ ಮಾಡಿದ್ದ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಹೃದಯಾಘಾತದಿಂದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ  title=

ಬೆಂಗಳೂರು: ಇತ್ತೀಚಿಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕರಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರಿಗೆ 67 ವರ್ಷವಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಿದ್ದಾರೆ. ಅವರಿಗೆ ರಾಜಾ ವೇಣುಗೋಪಾಲ ನಾಯಕ, ರಾಜಾ ಸಂತೋಷ ನಾಯಕ ಇಬ್ಬರು ಪುತ್ರರಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಆಪ್ತರಾಗಿದ್ದ ರಾಜಾ ನಾಯಕ ಅವರು ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಇನಿಂಗ್ಸ್ ಆರಂಭಿಸಿದ್ದರು.1994, 1999, 2013 ಮತ್ತು 2023 ರ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು ಇತ್ತೀಚೆಗಷ್ಟೇ ಅವರನ್ನು ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.No description available.

ಅವರು ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕವಾದ ನಂತರ "ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿರುವುದು ತೀವ್ರ ಸಂತಸ ತಂದಿದೆ.ರಾಜ್ಯದ ಹಿತದೃಷ್ಟಿಯಿಂದ ಒಬ್ಬೊಬ್ಬರಿಗೆ ಒಂದೊಂದು ಹುದ್ದೆ ವಹಿಸುತ್ತಾರೆ. ನಾಲ್ಕು ಬಾರಿ ಶಾಸಕನಾಗಿರುವ ನನಗೆ ಬಯಸದೆ ಬಂದ ಭಾಗ್ಯವಾಗಿದೆ.ನಾನು ಎಂದು ಸಚಿವ ಸ್ಥಾನ ಕೊಡಿ,ಅಧ್ಯಕ್ಷ ಸ್ಥಾನ ಕೊಡಿ ಎಂದು ಹೋಗಿಲ್ಲ,ಹೋಗುವುದಿಲ್ಲ.ನನ್ನ ಪರಿಶ್ರಮ ಪರಿಗಣಿಸಿ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಿದ,ಶ್ರೀ ಮಲ್ಲಿಕಾರ್ಜುನ ಖರ್ಗೆಯವರಿಗೆ,ಶ್ರೀ ಸಿದ್ದರಾಮಯ್ಯನವರಿಗೆ, ಶ್ರೀ ಡಿ ಕೆ ಶಿವಕುಮಾರ ರವರಿಗೆ ಧನ್ಯವಾದಗಳು ತಿಳಿಸುವೆ.ನನಗೆ ನೀಡಿದ ಅಧ್ಯಕ್ಷ ಸ್ಥಾನವನ್ನು ಶ್ರದ್ಧೆಯಿಂದ ನಿರ್ವಹಿಸಿಕೊಂಡ ರಾಜ್ಯದ ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸ ಮಾಡುವೆ.ಉಗ್ರಾಣ ನಿಗಮಕ್ಕೆ ಸಾಧ್ಯವಿರುವ ಎಲ್ಲ ರೂಪುಗಳನ್ನು ಕೊಟ್ಟು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವೆ" ಎಂದು ಹೇಳಿದ್ದರು.

ನಾಳೆ ಸುರಪುರ ಪಟ್ಟಣದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News