ಶಾಸಕ ವೆಂಕಟಪ್ಪ ನಾಯಕ ಅವರ ಅಂತಿಮ ದರ್ಶನ ಪಡೆದ ಸಿಎಂ

ರಾಜ ವೆಂಕಟಪ್ಪನವರು, ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆಯೇ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು ಎಂದು ಸಿಎಂ ಸಿದ್ದರಾಮಯ್ಯ ಶಾಸಕ ರಾಜ ವೆಂಕಟಪ್ಪನವರನ್ನು ನೆನೆದರು. 

Written by - Krishna N K | Last Updated : Feb 25, 2024, 04:43 PM IST
  • ಸುರಪುರ ಶಾಸಕ ರಾಜವೆಂಕಟಪ್ಪ ನಾಯಕ ನಿಧನ
  • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ
  • ರಾಜವೆಂಕಟಪ್ಪ ಅಂತಿಮ ದರ್ಶನ ಪಡೆದ ಸಿಎಂ
ಶಾಸಕ ವೆಂಕಟಪ್ಪ ನಾಯಕ ಅವರ ಅಂತಿಮ ದರ್ಶನ ಪಡೆದ ಸಿಎಂ title=

ಸುರಪುರ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೃದಯಾಘಾತದಿಂದ ನಿಧನರಾದ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜವೆಂಕಟಪ್ಪ ನಾಯಕ ಅವರ ಅಂತಿಮ ದರ್ಶನವನ್ನು ಪಡೆದರು.

ಈ ವೇಳೆ ಮಾತನಾಡಿದ ಅವರು, ರಾಜ ವೆಂಕಟಪ್ಪನವರು, ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆಯೇ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ವೇರ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷರಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ಬೇಸರ ನನಗಿದೆ. ಮೊನ್ನೆ ಸ್ವಲ್ಪ ಗುಣಮುಖರಾಗುತ್ತಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದರು.

ಇದನ್ನೂ ಓದಿ: ಗಲ್ಲಾ ಪೆಟ್ಟಿಗೆಯಲ್ಲಿ ಭಾರಿ ದೂಳೆಬ್ಬಿಸಿದ 'ಆರ್ಟಿಕಲ್ 370, ಗಳಿಕೆಯಲ್ಲಿ ಭಾರಿ ಹೆಚ್ಚಳ!

ಅಲ್ಲದೆ, ಶಾಸಕರ ನಿಧನದ ಹಿನ್ನೆಲೆಯಲ್ಲಿ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ ಎಂದು ಸಿಎಂ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News