ಶಿವಮೊಗ್ಗ: ಪ್ರೀತ್ಸೆ.. ಪ್ರೀತ್ಸೆ... ಎಂದು ಯುವಕನೊಬ್ಬ ರೋಡ್ ರೋಮಿಯೋ ರೀತಿ ಹಿಂದೆ ಬಿದ್ದಿದ್ದರಿಂದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿ ಗ್ರಾಮದಲ್ಲಿಯೇ ಈ ಘಟನೆ ನಡೆದಿರುವುದು.
ವರ್ಷಿಣಿ (14) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ. ಪ್ರೀತಿಸುವಂತೆ ಯುವಕ ತ್ಯಾಗರಾಜ್ ವರ್ಷಿಣಿಗೆ ಪ್ರತಿದಿನ ಬೆನ್ನುಬಿದ್ದು ಕಾಡುತ್ತಿದ್ದನಂತೆ. ಈ ವಿಚಾರ ತಿಳಿದ ವರ್ಷಿಣಿ ಪೋಷಕರು ಎರಡು ತಿಂಗಳ ಹಿಂದೆ ತ್ಯಾಗರಾಜ್ಗೆ ಎಚ್ಚರಿಕೆ ನೀಡಿದ್ದರು. ಆದರೂ ಇದಕ್ಕೆ ಸೊಪ್ಪು ಹಾಕದ ತ್ಯಾಗರಾಜ್ ತನ್ನನ್ನು ಪ್ರೀತಿಸುವಂತೆ ಬಾಲಕಿ ಹಿಂದೆ ರೋಡ್ ರೋಮಿಯೋ ರೀತಿ ಅಲೆಯುತ್ತಿದ್ದನಂತೆ.
ಇದನ್ನೂ ಓದಿ: ಸಿದ್ದರಾಮಯ್ಯನವರೇ, ನಿಮ್ಮನ್ನೂ ರಾಹುಲ್ ಗಾಂಧಿಯಂತೆ ತಿಳಿದುಕೊಳ್ಳಬೇಕಾಗುತ್ತದೆ: ಸಚಿವ ಪ್ರಹ್ಲಾದ್ ಜೋಶಿ
ಪ್ರೀತಿಸು, ಪ್ರೀತಿಸು ಅಂತಾ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದು ಪೀಡಿಸುತ್ತಿದ್ದನಂತೆ. ತ್ಯಾಗರಾಜ್ನ ಕಾಟ ತಾಳಲಾರದೆ ವರ್ಷಿಣಿ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವರ್ಷಿಣಿ ಕುಟುಂಬಸ್ಥರು ತ್ಯಾಗರಾಜ್ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಕೊಂಡಿದ್ದಾರೆಂದು ತಿಳಿದುಬಂದಿದೆ.
ಇದನ್ನೂ ಓದಿ: ರಾಜ್ಯದ ಕಟ್ಟಕಡೇಯ ರೈಲು ನಿಲ್ದಾಣ ಅಭಿವೃದ್ಧಿಗೆ ನರೇಂದ್ರ ಮೋದಿ ಶಂಕುಸ್ಥಾಪನೆ!!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.