ಬೆಂಗಳೂರು ಉದ್ಯೋಗ ಮೇಳದಲ್ಲಿ 9,651 ಮಂದಿಗೆ ನೇರ ಉದ್ಯೋಗ: ಸಚಿವ ಶರಣಪ್ರಕಾಶ್ ಪಾಟೀಲ್

Udyoga Mela: ಬುಧವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಯುವ ಸಮೃದ್ಧಿ ಸಮ್ಮೇಳನದ ಕುರಿತಂತೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, 53,913 ಪುರುಷರು, 32,494 ಮಹಿಳೆಯರು, ಇತರೆ 42 ಸೇರಿದಂತೆ ಒಟ್ಟು ಆನ್‍ಲೈನ್ ಮೂಲಕ 86,451 ಅಭ್ಯರ್ಥಿಗಳು ಹೆಸರನ್ನು ನೋಂದಣಿ ಮಾಡಿಕೊಂಡಿದ್ದರು. 

Written by - Prashobh Devanahalli | Edited by - Bhavishya Shetty | Last Updated : Feb 28, 2024, 06:35 PM IST
    • ಕೇರಳ ಮಾದರಿಯಲ್ಲಿ ಸಾಗರೋತ್ತರ ಕಂಪನಿ ಪ್ರಾರಂಭ
    • ಕಲಬುರಗಿ, ಮೈಸೂರು ಮತ್ತು ಬೆಳಗಾವಿಯಲ್ಲಿ ವಿಭಾಗವಾರು ಉದ್ಯೋಗ ಮೇಳ
    • ಕೊಪ್ಪಳ ಹಾಗೂ ಮೈಸೂರಿನಲ್ಲಿ ಉದ್ಯೋಗ ತರಬೇತಿ ಕೇಂದ್ರ ಪ್ರಾರಂಭ
ಬೆಂಗಳೂರು ಉದ್ಯೋಗ ಮೇಳದಲ್ಲಿ  9,651 ಮಂದಿಗೆ ನೇರ ಉದ್ಯೋಗ: ಸಚಿವ ಶರಣಪ್ರಕಾಶ್ ಪಾಟೀಲ್  title=
Udyoga Mela 2024

Udyoga Mela: ಬೆಂಗಳೂರು: ರಾಜಧಾನಿ ಬೆಂಗಳೂರು ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27ರಂದು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನಡೆದ ಯುವ ಸಮೃದ್ಧಿ ಸಮ್ಮೇಳನದಲ್ಲಿ ಸುಮಾರು 9,651 ಉದ್ಯೋಗ ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ನೀಡುವ ಮೂಲಕ ಹೊಸ ದಾಖಲೆ ಬರೆದಿದ್ದೇವೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.

ಇದನ್ನೂ ಓದಿ: Delhi metro : ಹಳದಿ ಮಾರ್ಗದಲ್ಲಿ ಚಲಿಸುತ್ತಿದ್ದ ಮೆಟ್ರೋ ಗೆ ಸಿಲುಕಿ ಓರ್ವ ವ್ಯಕ್ತಿಯ ಸಾವು 

ಬುಧವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಯುವ ಸಮೃದ್ಧಿ ಸಮ್ಮೇಳನದ ಕುರಿತಂತೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, 53,913 ಪುರುಷರು, 32,494 ಮಹಿಳೆಯರು, ಇತರೆ 42 ಸೇರಿದಂತೆ ಒಟ್ಟು ಆನ್‍ಲೈನ್ ಮೂಲಕ 86,451 ಅಭ್ಯರ್ಥಿಗಳು ಹೆಸರನ್ನು ನೋಂದಣಿ ಮಾಡಿಕೊಂಡಿದ್ದರು.  ಸಮ್ಮೇಳನಕ್ಕೆ 44527 ಅಭ್ಯರ್ಥಿಗಳು ಹಾಜರಾಗಿದ್ದರು. ಇದರಲ್ಲಿ ಶೈಕ್ಷಣಿಕ ಅರ್ಹತೆಗನುಗುಣವಾಗಿ ಒಟ್ಟು 9,651  ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ನೀಡಿದ್ದೇವೆ  ಎಂದು ಮಾಹಿತಿ ನೀಡಿದರು.

16,865 ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ. 2,457 ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಂದ ತಿರಸ್ಕರಿಸಲಾಗಿದೆ. 15,461 ಅಭ್ಯರ್ಥಿಗಳು ಸಂದರ್ಶನಕ್ಕೊಳಗಾಗಿದ್ದರು. ಅಭ್ಯರ್ಥಿಗಳ ಪೂರ್ಣ ವಿವರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇವರಿಗೂ ಕೂಡ ಉದ್ಯೋಗ ನೀಡಲಾಗುತ್ತದೆ. ಒಟ್ಟಾರೆ ಎರಡು ದಿನ ನಡೆದ ಸಮ್ಮೇಳನ ನಮ್ಮ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ ಎಂದರು.

ಸಮ್ಮೇಳನದಲ್ಲಿ ವೈಮಾನಿಕ  ಮತ್ತು ನಾಗರಿಕ ವಲಯದಿಂದ 26,  ಕೃಷಿ 6, ಉಡುಪು ವಲಯ 6, ಆಟೋಮೆಟಿವ್ 74, ಸೌಂದರ್ಯ ವಲಯ 3, ಆರೋಗ್ಯ ಕ್ಷೇತ್ರ 27, ಎಲೆಕ್ಟ್ರಾನಿಕ್ ವಲಯ 29, ಜವಳಿ 1, ಟೆಲಿಕಾಂ 19, ಸೇವಾ ವಲಯ 36, ಮೂಲಭೂತ ಉಪಕರಣಗಳ ವಲಯ 1 ಸೇರಿದಂತೆ ವಿವಿಧ ವಲಯಗಳಲ್ಲಿ ಉದ್ಯೋಗ ನೀಡಲಾಗಿದೆ.

ವಿಭಾಗವಾರು ಮೇಳ

ಮೊದಲ ಹಂತದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಯಶಸ್ವಿ ಯುವ ಸಮೃದ್ಧಿ ಸಮ್ಮೇಳನ ನಡೆದಿರುವ ಹಿನ್ನಲೆಯಲ್ಲಿ ಇನ್ನು ಮುಂದೆ ರಾಜ್ಯದ ಮೂರು ಪ್ರಮು ವಿಭಾಗಗಳಲ್ಲಿ ಯುವ ಸಮೃದ್ಧಿ ಸಮ್ಮೇಳನ ನಡೆಸಲಾಗುವುದು ಎಂದು ಶರಣಪ್ರಕಾಶ್ ಪಾಟೀಲ್ ಹೇಳಿದರು. ಕಲಬುರಗಿ, ಬೆಳಗಾವಿ ಮತ್ತು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ನಡೆಸಲಾಗುವುದು. ಇದಕ್ಕಾಗಿ ಈಗಾಗಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಹೇಳಿದರು.

ವಿಭಾಗವಾರು ಉದ್ಯೋಗ ಮೇಳ ನಡೆಸುವ ಮಾದರಿಯಂತೆ ರಾಜ್ಯದ ಎರಡು ಕಡೆ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ  ಕೇಂದ್ರ ಪ್ರಾರಂಭಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಹಾಗೂ ಮೈಸೂರಿನಲ್ಲಿ ಈ ಎರಡು ತರಬೇತಿ ಕೇಂದ್ರಗಳು ಪ್ರಾರಂಭವಾಗಲಿವೆ. ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಸುಮಾರು 25 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ. ಈಗಾಗಲೇ ಇದಕ್ಕೆ ಇಲಾಖೆ ವತಿಯಿಂದ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಾಟೀಲ್ ಹೇಳಿದರು.

ಸಾಗರೋತ್ತರ ಕಂಪನಿ ಪ್ರಾರಂಭ:

ವಿದೇಶಿ ಕಂಪನಿಗಳಿಗೆ ಬೇಕಾದ ಮಾನವ ಸಂಪನ್ಮೂಲ ಒದಗಿಸಿಕೊಡಲು ಅನುಕೂಲವಾಗುವಂತೆ ರಾಜ್ಯ  ಸರ್ಕಾರವು ಕೇರಳ ಮಾದರಿಯಲ್ಲಿ ಸಾಗರೋತ್ತರ ಕಂಪನಿ ಪ್ರಾರಂಭಿಸಲಿದೆ ಎಂದು ಶರಣಪ್ರಕಾಶ್ ಪಾಟೀಲ್ ಪ್ರಕಟಿಸಿದರು.

ಕೇರಳದಲ್ಲಿ ಈಗಾಗಲೇ ಸಾಗರೋತ್ತರ ಕಂಪನಿ ರಚನೆ ಮಾಡಲಾಗಿದೆ. ಇದೇ ಮಾದರಿಯನ್ನು ಇಟ್ಟುಕೊಂಡು ಕರ್ನಾಟಕದಲ್ಲೂ ಪ್ರಾರಂಭ ಮಾಡುತ್ತೇವೆ. ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಸಾಗರೋತ್ತರ ಕಂಪನಿಗಳ ಮೂಲಕ ಮಾಹಿತಿ ಕೊಡಲಾಗುವುದು. ಈಗಾಗಲೇ 49 ಕಂಪನಿಗಳು ಮುಂದೆ ಬಂದಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಸಂಕಷ್ಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್…! 500ಕ್ಕೂ ಅಧಿಕ ರನ್ ಗಳಿಸಿದ ಆರಂಭಿಕ ಆಟಗಾರನಿಗೆ ಗಾಯ

ಐಬಿಎಂ ಕಂಪನಿಯವರೇ 5 ಲಕ್ಷ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ನೀಡಲು ಮುಂದೆ ಬಂದಿದ್ದಾರೆ. ಸಾಗರೋತ್ತರ ಕಂಪನಿಯು ಸಂವಹನ ಮಾಧ್ಯಮವಾಗಿ ರಾಜ್ಯದಲ್ಲಿ ಲಭ್ಯವಿರುವ ಮಾನವ ಸಂಪನ್ಮೂಲಗಳ ಬಗ್ಗೆ ಮಾಹಿತಿ ನೀಡಲಿದೆ. ಇದರಿಂದ ಉದ್ಯೋಗ ಆಕಾಂಕ್ಷಿಗಳು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಅಲೆಯುವುದು ತಪ್ಪುತ್ತದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

Trending News