ಬೆಂಗಳೂರು: ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಬುಧವಾರ ಭರ್ಜರಿ ಸಿಹಿಸುದ್ದಿ ನೀಡಿದೆ. PDOಗಳನ್ನು ರಾಜ್ಯ ವೃಂದಕ್ಕೆ ಸೇರಿಸುವ ತಿದ್ದುಪಡಿ ನಿಯಮಗಳ ಕರಡನ್ನು ಇಲಾಖೆಯು ಪ್ರಕಟಿಸಿದೆ. ಇದಲ್ಲದೆ, 1,500 PDOಗಳಿಗೆ ಹಿರಿಯ PDOಗಳಾಗಿ ಬಡ್ತಿ ನೀಡುವುದಕ್ಕೂ ಹೊಸ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.
PDO ಹುದ್ದೆ ಜಿಲ್ಲಾ ಮಟ್ಟದ ವೃಂದಕ್ಕೆ ಸೀಮಿತವಾಗಿತ್ತು. ಇದನ್ನು ರಾಜ್ಯ ವೃಂದಕ್ಕೆ ಸೇರಿಸಬೇಕೆಂಬ ಬೇಡಿಕೆ ಬಹಳ ದಿನಗಳಿಂದಲೂ ಇತ್ತು. ಇದಕ್ಕೆ ಪೂರಕವಾಗಿ ಕರ್ನಾಟಕ ಸಾಮಾನ್ಯ ಸೇವೆಗಳು (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) (ವೃಂದ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು-2024 ಅನ್ನು ರೂಪಿಸಲಾಗಿದೆ.
ಇದನ್ನೂ ಓದಿ: ಮತದಾರರಿಗೆ ಬ್ರ್ಯಾಂಡ್ ಕಾಂಡೋಮ್ ಉಡುಗೂರೆ..! ವಿಡಿಯೋ ವೈರಲ್
ಗ್ರಾಮ ಪಂಚಾಯ್ತಿ ಅಧಿಕಾರಿಗಳು ಮತ್ತು ಸಿಬ್ಬಂದಿ ಪೈಕಿ ಹಿರಿಯ PDO ಹಾಗೂ PDOಗಳನ್ನು ರಾಜ್ಯ ವೃಂದಕ್ಕೆ ಸೇರಿಸಲಾಗಿದೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಜಿಲ್ಲಾ ವೃಂದವೆಂದು ಪರಿಗಣಿಸಲಾಗಿದೆ. ಹಿರಿಯ PDO ಹಾಗೂ PDOಗಳನ್ನು ರಾಜ್ಯ ವೃಂದದ ಪಟ್ಟಿಯಲ್ಲಿ ʼಪತ್ರಾಂಕಿತ ವ್ಯವಸ್ಥಾಪಕ'ರ (ಗೆಜೆಟೆಡ್ ಮ್ಯಾನೇಜರ್) ಹುದ್ದೆಯ ನಂತರದಲ್ಲಿ ಸೃಜಿಸಲಾಗಿದೆ.
PDOಗಳ ಪೈಕಿ 1,500 ಮಂದಿಗೆ ಬಡ್ತಿ ಮೂಲಕ ಹಿರಿಯ PDO ಹುದ್ದೆ ನೀಡಲು ತಿದ್ದುಪಡಿ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. 4,454 PDO ಹುದ್ದೆಗಳು ಇರಲಿದ್ದು, ಈ ಪೈಕಿ ಶೇ.65ರಷ್ಟನ್ನು ನೇರ ನೇಮಕಾತಿ ಮೂಲಕ ಹಾಗೂ ಉಳಿದ ಶೇ.35ರಷ್ಟನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹಾಗೂ ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-1 ವೃಂದದ ನೌಕರರಿಗೆ ಬಡ್ತಿ ನೀಡುವ ಮೂಲಕ ಭರ್ತಿ ಮಾಡಬೇಕು.
ಇದನ್ನೂ ಓದಿ: ಮಾರ್ಚ್ 11ರಿಂದ ಬೆಂಗಳೂರು - ಕೊಯಮತ್ತೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆ
2,127 ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹುದ್ದೆಗಳು ಇರಲಿದ್ದು, ಈ ಪೈಕಿ ಶೇ.50ರಷ್ಟನ್ನು ನೇರ ನೇಮಕಾತಿ ಮೂಲಕ ಮತ್ತು ಶೇ.50ರಷ್ಟನ್ನು ಬಡ್ತಿ ಮೂಲಕ ಭರ್ತಿ ಮಾಡಲು ನಿಯಮಗಳಲ್ಲಿ ಅವಕಾಶ ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.