ಪೋಲಿಸ್ ಇಲಾಖೆ:ಮಾರ್ಚ್ 04 ರಂದು ದೇಹದಾರ್ಢ್ಯತೆ ಪರೀಕ್ಷೆ

  ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿಪಿಸಿ/ಮಪಿಸಿ (ಕೆಕೆ) ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ 1:5 ಅನುಪಾತದ ಅನುಸಾರ ಮುಂದಿನ ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯನ್ನು ಮಾರ್ಚ್ 04 ರಂದು ಕೊಪ್ಪಳ ನಗರದ ಗದಗ ರಸ್ತೆಯಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು.

Written by - Zee Kannada News Desk | Last Updated : Feb 29, 2024, 12:44 PM IST
  • ಕರೆಪತ್ರವನ್ನು ಪಡೆಯದೇ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ.
  • ದೈಹಿಕ ಪರೀಕ್ಷೆಗೆ ಬರುವಾಗ ಕರೆ ಪತ್ರದ ಜೊತೆಗೆ ಕರೆ ಪತ್ರದಲ್ಲಿ ನಮೂದಿಸಿದ ಎಲ್ಲಾ ದಾಖಲಾತಿಗಳನ್ನು ಹಾಜರುಪಡಿಸಬೇಕು.
  • ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಝರಾಕ್ಸ್ ಪ್ರತಿ, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು
ಪೋಲಿಸ್ ಇಲಾಖೆ:ಮಾರ್ಚ್ 04 ರಂದು ದೇಹದಾರ್ಢ್ಯತೆ ಪರೀಕ್ಷೆ title=
ಸಾಂಧರ್ಭಿಕ ಚಿತ್ರ

ಕೊಪ್ಪಳ:  ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿಪಿಸಿ/ಮಪಿಸಿ (ಕೆಕೆ) ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ 1:5 ಅನುಪಾತದ ಅನುಸಾರ ಮುಂದಿನ ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯನ್ನು ಮಾರ್ಚ್ 04 ರಂದು ಕೊಪ್ಪಳ ನಗರದ ಗದಗ ರಸ್ತೆಯಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು.

ಇದನ್ನೂ ಓದಿ: ಈ ಸ್ಟಾರ್ ನಟನ ಜೊತೆ ತನಿಷಾ ಕುಪ್ಪಂಡ ಲವ್, 6 ವರ್ಷದ ಪ್ರೀತಿ ಮುರಿದು ಬೀಳಲು ಇದೇ ಕಾರಣ!! 

2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) (ತೃತೀಯಲಿಂಗ ಪುರುಷ ಮತ್ತು ಮಹಿಳಾ) ಹಾಗೂ (ಸೇವಾನಿರತ ಮತ್ತು ಬ್ಯಾಕ್‌ಲಾಗ್)-454 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಡಿಸೆಂಬರ್ 10 ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿದ್ದು, ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಮಾರ್ಚ್ 04 ರಂದು ಬೆಳಿಗ್ಗೆ 06 ಗಂಟೆಯಿಂದ ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: ಬ್ಯಾಡ್ಮಿಂಟನ್ ಆಟಗಾರನ ಜೊತೆ ಸಪ್ತಪದಿ ತುಳಿಯಲಿರುವ ತಾಪ್ಸಿ ಪನ್ನು..! 

ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಕರೆಪತ್ರಗಳನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ಅಥವಾ www.recruitment.ksp.gov.in ಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಕರೆಪತ್ರವನ್ನು ಪಡೆಯದೇ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ. ದೈಹಿಕ ಪರೀಕ್ಷೆಗೆ ಬರುವಾಗ ಕರೆ ಪತ್ರದ ಜೊತೆಗೆ ಕರೆ ಪತ್ರದಲ್ಲಿ ನಮೂದಿಸಿದ ಎಲ್ಲಾ ದಾಖಲಾತಿಗಳನ್ನು ಹಾಜರುಪಡಿಸಬೇಕು. ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಝರಾಕ್ಸ್ ಪ್ರತಿ, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ತಪ್ಪಿದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News