ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿಯಲ್ಲಿ ಭಿನ್ನಮತ ವ್ಯಕ್ತವಾಗಿದೆ.
ಈ ಬಗ್ಗೆ ನಟ ಹಾಗೂ ಮಾಜಿ ಶಾಸಕ ಜಗ್ಗೇಶ್ ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ. ಬೈ ಎಲೆಕ್ಷನ್ ಬಂತು! 2018ರಲ್ಲಿ ಕಡೆಘಳಿಗೆ ಅಭ್ಯರ್ಥಿಯಾದ ನಾನು ಮಾಜಿ ಶಾಸಕ, ವಿಧಾನ ಪರಿಷತ್ ಸದಸ್ಯ. ತನು, ಮನ, ಧನ ಕಳೆದುಕೊಂಡು 9 ದಿನದಲ್ಲಿ 60,400 ಮತಗಳನ್ನು ಪಡೆದ ಅಭ್ಯರ್ಥಿ ನಾನು! ಮೌನವಾಗಿ ಇರಲೋ? ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ..? ಇಲ್ಲಾ ಮೌನವಾಗಿ ತ್ಯಾಗಿಯಾಗಲೋ..? ಕಾಡಿನಲ್ಲಿ ಕಳೆದುಹೋದ ಮಗುವಂತಾಗಿರುವೆ! ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಇದಕ್ಕೆ ಬಿಜೆಪಿ ಕರ್ನಾಟಕ ಮತ್ತು ಬಿ.ಎಸ್.ಸಂತೋಷ್ ಅವರನ್ನು ಟ್ಯಾಗ್ ಮಾಡಿದ್ದಾರೆ.
ಭೈಎಲೆಕ್ಷನ್ ಬಂತು!
2019 ಕಡೆಘಳಿಗೆ ಅಭ್ಯರ್ಥಿಯಾದ ನಾನು ex-Mla/MLC ಆಗಿ! @narendramodi @RSS4India ತನುಮನಧನ ಕಳೆದುಕೊಂಡು! 9ದಿನದಲ್ಲಿ 60,400ಮತ ಪಡೆದ ಅಭ್ಯರ್ಥಿ ನಾನು!
ಮೌನವಾಗಿರಲೋ!ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ?ಇಲ್ಲಾ ಮೌನವಾಗಿ ತ್ಯಾಗಿಯಾಗಲೋ!ಕಾಡಿನಲ್ಲಿ ಕಳೆದುಹೋದ ಮಗುವಂತಾಗಿರುವೆ!@blsanthosh @BJP4Karnataka— ನವರಸನಾಯಕ ಜಗ್ಗೇಶ್ (@Jaggesh2) September 21, 2019
2018ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ, ವಿಧಾನಪರಿಷತ್ ಸದಸ್ಯರಾದ ಜಗ್ಗೇಶ್ ಅವರು ವಲಸೆ ಬಂದಿರುವ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಗಳ ಬಗ್ಗೆ ಈ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.