ಸಚಿವರು ದೇಶದ್ರೋಹಿಗಳ ಪರ ನಿಂತಿರುವುದು ದುರ್ದೈವ: ಬಸವರಾಜ ಬೊಮ್ಮಾಯಿ

ಎಫ್ ಎಸ್ ಎಲ್ ರಿಪೋರ್ಟ್ ಬಂದು ನಾಲ್ಕು ದಿನ ಕಳೆದಿದೆ. ಎರಡು ದಿನಗಳ ಹಿಂದೆ ಎನ್ ಐಎ ಎಫ್ಐಆರ್ ಮಾಡಿಕೊಂಡಿದಕ್ಕೆ ಮೂವರ ಬಂಧನವಾಗಿದೆ. ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತಿವೆ ಎಂದು ಸರ್ಕಾರ ದೂರಿತು. ಪತ್ರಕರ್ತರನ್ನು ಗುರಿ ಮಾಡಿಕೊಂಡು ಮಾತನಾಡಿದರು.

Written by - Prashobh Devanahalli | Edited by - Bhavishya Shetty | Last Updated : Mar 5, 2024, 04:55 PM IST
    • ದೇಶದ್ರೋಹಿಗಳ ಪರ ಹಲವು ಸಚಿವರು ನಿಂತಿರುವುದು ದುರ್ದೈವ
    • ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ
    • ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ
ಸಚಿವರು ದೇಶದ್ರೋಹಿಗಳ ಪರ ನಿಂತಿರುವುದು ದುರ್ದೈವ: ಬಸವರಾಜ ಬೊಮ್ಮಾಯಿ title=
File Photo

ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳ ಪರ ಹಲವು ಸಚಿವರು ನಿಂತಿರುವುದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ಸ್ಪಷ್ಟವಾಗಿತ್ತು. ಆ ಸಂದರ್ಭದಲ್ಲಿ ಸಚಿವರು ದೇಶದ್ರೋಹಿಗಳ ರಕ್ಷಣೆಗೆ ನಿಂತಿದ್ದರು. ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ. ಇವರ ನಡೆ ಆತಂತಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: CM Siddaramaiah : ಬರಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ: ಕುಡಿಯುವ ನೀರಿಗೆ ತೊಂದರೆ ಯಾಗದಂತೆಯೂ ಕ್ರಮ :  ಮುಖ್ಯಮಂತ್ರಿ ಸಿದ್ದರಾಮಯ್ಯ

ಎಫ್ ಎಸ್ ಎಲ್ ರಿಪೋರ್ಟ್ ಬಂದು ನಾಲ್ಕು ದಿನ ಕಳೆದಿದೆ. ಎರಡು ದಿನಗಳ ಹಿಂದೆ ಎನ್ ಐಎ ಎಫ್ಐಆರ್ ಮಾಡಿಕೊಂಡಿದಕ್ಕೆ ಮೂವರ ಬಂಧನವಾಗಿದೆ. ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತಿವೆ ಎಂದು ಸರ್ಕಾರ ದೂರಿತು. ಪತ್ರಕರ್ತರನ್ನು ಗುರಿ ಮಾಡಿಕೊಂಡು ಮಾತನಾಡಿದರು. ಪಾಕ್ ಪರ ಘೋಷಣೆ ಕೂಗಿದವರ ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಅಥಣಿ ತಾಲೂಕಿನ ಅಮ್ಮಾಜೇಶ್ವರಿ ಏತನೀರಾವರಿ ಯೋಜನೆಗೆ ಎರಡನೇ ಬಾರಿಗೆ ಶಂಕುಸ್ಥಾಪನೆ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,  ಸರ್ಕಾರ ಬಂದು 9 ತಿಂಗಳು ಕಳೆದರೂ ಯಾವುದೇ ಹೊಸ ಯೋಜನೆ ರೂಪಿಸಿಲ್ಲ. ಸರ್ಕಾರ ಬಂದು 9 ತಿಂಗಳಾಗಿದ್ದು ನೀರಾವರಿ ಯೋಜನೆಗಳ ನಿರ್ಲಕ್ಷ್ಯ ಮಾಡಿದೆ. ಹಳೆಯ ಯೋಜನೆಗೆ ಮತ್ತೆ ಚಾಲನೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗೆ ಅಧಿಕಾರಿಗಳು ದಾರಿ ತಪ್ಪಿಸುತ್ತಿದ್ದು, ಸಿಎಂ ಇದನ್ನು ಪರಿಶೀಲನೆ ಮಾಡಿ ಕ್ರಮ ವಹಿಸಬೇಕು ಎಂದು ಹೇಳಿದರು.

ಬೆಳಗಾವಿಗೆ ಇಂದು ಬಿಜೆಪಿ ರಾಷ್ಟ್ರೀಯ ‌ಅಧ್ಯಕ್ಷ ಜೆ.ಪಿ ನಡ್ಡಾ ಆಗಮನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲೇ ಬಿಜೆಪಿ- ಜೆಡಿಎಸ್ ಮೈತ್ರಿಯ ಸೀಟು ಹಂಚಿಕೆ ಬಗ್ಗೆ ‌ಚರ್ಚೆ ಆಗುತ್ತಾ ಎಂಬ ಪ್ರಶ್ನೆಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಈ ಬಗ್ಗೆ ಯಾವುದೇ  ಚರ್ಚೆ ಆಗುವುದಿಲ್ಲ. ಎಲ್ಲವೂ ದೆಹಲಿಯಲ್ಲಿ  ಆಗಲಿದೆ ಎಂದರು.

ಇದನ್ನೂ ಓದಿ: ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಒಡವೆ ಹಸ್ತಾಂತರ ವಿಚಾರ: ಪ್ರಕ್ರಿಯೆಗೆ ತಡೆ ನೀಡಿದ ಹೈಕೋರ್ಟ್

ತಾವು ಹಾವೇರಿಯಿಂದ ಸ್ಪರ್ಧಿಸುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಈಗಾಗಲೇ ಈ ಬಗ್ಗೆ ನನ್ನ ಅಭಿಪ್ರಾಯ ಹೇಳಿದ್ದೇನೆ” ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News