Job Updates: ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

 Job Updates: ಅರ್ಜಿ ನಮೂನೆಗಳನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ, ಜಿಲ್ಲಾ ಪಂಚಾಯತ್, ಕೊಪ್ಪಳ ಹಾಗೂ ಎಲ್ಲಾ ತಾಲೂಕ ಪಂಚಾಯತಿ ಮತ್ತು ಸಂಬಂಧಿಸಿದ 21 ಗ್ರಾಮ ಪಂಚಾಯತಿಗಳಲ್ಲಿ ಮತ್ತು ಜಿಲ್ಲಾ ವೆಬ್‌ಸೈಟ್ www.koppal.nic.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

Written by - Manjunath N | Last Updated : Mar 5, 2024, 05:04 PM IST
  • ಕೊಪ್ಪಳ ಜಿಲ್ಲಾ ವ್ಯಾಪ್ತಿಯ 21 ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು,
  • ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
 Job Updates: ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ title=
ಸಾಂಧರ್ಭಿಕ ಚಿತ್ರ

Job Updates: ಜಿಲ್ಲಾ ಪಂಚಾಯತಿ ವತಿಯಿಂದ ಕೊಪ್ಪಳ ಜಿಲ್ಲಾ ಪಂಚಾಯತಿಯ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೊಪ್ಪಳ ಜಿಲ್ಲಾ ವ್ಯಾಪ್ತಿಯ 21 ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಒಟ್ಟು 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ- UI Song: ಯುಐ ಫಸ್ಟ್‌ ಸಾಂಗ್‌ ಔಟ್:‌ ಚೀಪ್‌ ಸಾಂಗ್‌ ಅಲ್ಲ ಟ್ರೋಲ್‌ ಸಾಂಗ್!

ಕುಷ್ಟಗಿ ತಾಲ್ಲೂಕಿನ ಅಂಟರಠಾಣ, ಕೇಸೂರು, ಗುಮಗೇರಾ, ತುಮರಿಕೊಪ್ಪ, ಬಿಳೇಕಲ್, ಶಿರಗುಂಪಿ, ಹಾಬಲಕಟ್ಟಿ ಹಾಗೂ ಹಿರೇನಂದಿಹಾಳ ಗ್ರಾಮ ಪಂಚಾಯತಿಗಳಲ್ಲಿ, ಕೊಪ್ಪಳ ತಾಲ್ಲೂಕಿನ ಕಲಕೇರಿ, ಮುನಿರಾಬಾದ ಡ್ಯಾಂ, ವಣಬಳ್ಳಾರಿ ಹಾಗೂ ಹಾಲವರ್ತಿ ಗ್ರಾಮ ಪಂಚಾಯತಿಗಳಲ್ಲಿ, ಯಲಬುರ್ಗಾ ತಾಲ್ಲೂಕಿನ ತುಮ್ಮರಗುದ್ದಿ, ಬೋದೂರು ಹಾಗೂ ಸಂಕನೂರು ಗ್ರಾಮ ಪಂಚಾಯತಿಗಳಲ್ಲಿ, ಗಂಗಾವತಿ ತಾಲ್ಲೂಕಿನ ಜಂಗಮರಕಲ್ಗುಡಿ ಹಾಗೂ ಸಣಾಪೂರ ಗ್ರಾಮ ಪಂಚಾಯತಿಗಳಲ್ಲಿ, ಕನಕಗಿರಿ ತಾಲ್ಲೂಕಿನ ಜೀರಾಳ ಹಾಗೂ ಬಸರಿಹಾಳ ಗ್ರಾಮ ಪಂಚಾಯತಿಗಳಲ್ಲಿ, ಕನಕಗಿರಿಯ ನೆಲಜೇರಿ ಗ್ರಾಮ ಪಂಚಾಯತಿಯಲ್ಲಿ, ಕಾರಟಗಿ ತಾಲ್ಲೂಕಿನ ಮೈಲಾಪೂರ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತದೆ.

ಇದನ್ನೂ ಓದಿ-ಹಿರಿಯ ನಿರ್ದೇಶಕರೊಂದಿಗೆ ಮದುವೆ.. ನಂತರ ವಿಚ್ಛೇದನ.. ಈಗ ಮತ್ತೊಂದು ಮದುವೆಯಾದ ಖ್ಯಾತ ನಟಿ ಈಕೆ!

ಅರ್ಜಿ ನಮೂನೆಗಳನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ, ಜಿಲ್ಲಾ ಪಂಚಾಯತ್, ಕೊಪ್ಪಳ ಹಾಗೂ ಎಲ್ಲಾ ತಾಲೂಕ ಪಂಚಾಯತಿ ಮತ್ತು ಸಂಬಂಧಿಸಿದ 21 ಗ್ರಾಮ ಪಂಚಾಯತಿಗಳಲ್ಲಿ ಮತ್ತು ಜಿಲ್ಲಾ ವೆಬ್‌ಸೈಟ್ www.koppal.nic.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಏಪ್ರಿಲ್ 03 ಕೊನೆಯ ದಿನವಾಗಿದ್ದು, ಅಂದು ಸಂಜೆ 05.30 ಗಂಟೆಯೊಳಗೆ ನಿಗದಿತ ನಮೂನೆಯಲ್ಲಿ ಭರ್ತಿಮಾಡಿದ ಅರ್ಜಿಯೊಂದಿಗೆ ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ “ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್, ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್ ಕೊಪ್ಪಳ” ಈ ವಿಳಾಸಕ್ಕೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಗಾಗಿ ಜಿಲ್ಲಾ ವೆಬ್‌ಸೈಟ್ ಹಾಗೂ ದೂ.ಸಂ: 9480871001 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News