ಹುಬ್ಬಳ್ಳಿ ವಿಶ್ವದರ್ಜೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಸ್ತು- ಹೊಸ ಟರ್ಮಿನಲ್’ಗೆ ಇನ್ನೆರಡು ದಿನದಲ್ಲಿ ಪ್ರಧಾನಿ ಶಂಕುಸ್ಥಾಪನೆ

Hubli Airport Construction: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ಅಭಿವೃದ್ಧಿಯನ್ನು ಕೈಗೊಂಡಿದ್ದು, ವಿಶ್ವ ದರ್ಜೆಯ ವಿಮಾನ ನಿಲ್ದಾಣವನ್ನಾಗಿ ರೂಪಿಸಲು ಈ ಮೂಲಕ ಕ್ರಮ ಕೈಗೊಂಡಿದೆ ಎಂದು ವಿಮಾನ ನಿಲ್ದಾಣದ ಕಾರ್ಯ ನಿರ್ವಾಹಕ ನಿರ್ದೇಶಕ ಮನೋಜ್ ಶೇಖರನ್ ತಿಳಿಸಿದ್ದಾರೆ

Written by - Prashobh Devanahalli | Edited by - Bhavishya Shetty | Last Updated : Mar 7, 2024, 09:58 PM IST
    • ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ ಪ್ರಧಾನಿ ಚಾಲನೆ
    • ವಿಶ್ವದರ್ಜೆ ವಿಮಾನ ನಿಲ್ದಾಣ ನಿರ್ಮಾಣ ಪ್ರಯತ್ನದಲ್ಲಿ ಪ್ರಹ್ಲಾದ ಜೋಶಿ ಸಫಲ
    • ವರ್ಚ್ಯುವಲ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್’ಗೆ ಶಂಕುಸ್ಥಾಪನೆ
ಹುಬ್ಬಳ್ಳಿ ವಿಶ್ವದರ್ಜೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಸ್ತು- ಹೊಸ ಟರ್ಮಿನಲ್’ಗೆ ಇನ್ನೆರಡು ದಿನದಲ್ಲಿ ಪ್ರಧಾನಿ ಶಂಕುಸ್ಥಾಪನೆ title=
Hubli Airport Construction

ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಶಯದಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾ.10ರಂದು ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಉತ್ತರ ಪ್ರದೇಶದ ಅಜಂಗಢದಿಂದ ಪ್ರಧಾನಿ ಮೋದಿ ವರ್ಚ್ಯುವಲ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್’ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಇದನ್ನೂ ಓದಿ: ಕ್ಯಾನ್ಸರ್, ತೂಕ ಇಳಿಕೆ, ಹೃದಯದ ಸಮಸ್ಯೆ… ಈ ಮೂರು ಸಮಸ್ಯೆಗೆ ಒಂದೇ ಪರಿಹಾರ ಈ ಕಪ್ಪು ಬೀಜದ ನೀರು!

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ಅಭಿವೃದ್ಧಿಯನ್ನು ಕೈಗೊಂಡಿದ್ದು, ವಿಶ್ವ ದರ್ಜೆಯ ವಿಮಾನ ನಿಲ್ದಾಣವನ್ನಾಗಿ ರೂಪಿಸಲು ಈ ಮೂಲಕ ಕ್ರಮ ಕೈಗೊಂಡಿದೆ ಎಂದು ವಿಮಾನ ನಿಲ್ದಾಣದ ಕಾರ್ಯ ನಿರ್ವಾಹಕ ನಿರ್ದೇಶಕ ಮನೋಜ್ ಶೇಖರನ್ ತಿಳಿಸಿದ್ದಾರೆ.

ವಿಶ್ವದರ್ಜೆ ವಿಮಾನ ನಿಲ್ದಾಣ ನಿರ್ಮಾಣ ಪ್ರಯತ್ನದಲ್ಲಿ ಪ್ರಹ್ಲಾದ ಜೋಶಿ ಸಫಲ:

ಸಚಿವ ಪ್ರಹ್ಲಾದ ಜೋಶಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ವಿಶ್ವದರ್ಜೆ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಮಾತುಕತೆ ನಡೆಸುವ ಮೂಲಕ ಇನ್ನೆರೆಡೇ ದಿನದಲ್ಲಿ ಪ್ರಧಾನಿ ಅವರಿಂದ ಶಂಕುಸ್ಥಾಪನೆ ನೆರವೇರಿಸುವಲ್ಲಿ ಸಫಲರಾಗಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡು ನಿಲ್ದಾಣದ ಅಭಿವೃದ್ಧಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ವಿಮಾನ ನಿಲ್ದಾಣ ಪ್ರಾಧಿಕಾರ ಸಚಿವ ಜೋಶಿ ಅವರನ್ನು ಆಹ್ವಾನಿಸಿದೆ.

ಇದನ್ನೂ ಓದಿ: ಒಂದೇ ಏಟಿಗೆ 5 ದಾಖಲೆಗಳನ್ನು ಮುರಿದ ಯಶಸ್ವಿ ಜೈಸ್ವಾಲ್! ವಿರಾಟ್-ಕಾಂಬ್ಳಿ ರೆಕಾರ್ಡ್’ಗಳೂ ಪುಡಿಪುಡಿ

350 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ:

ಹುಬ್ಬಳ್ಳಿ ಇಂದು ಉತ್ತರ ಕರ್ನಾಟಕದ ಹೆಬ್ಬಾಗಿಲು ಮಾತ್ರವಲ್ಲ. ಪ್ರಮುಖ ವಾಣಿಜ್ಯ ಕೇಂದ್ರ ಬಿಂದುವಾಗಿದೆ. ಹಾಗಾಗಿ ಮಾ.10ರಂದು 350 ಕೋಟಿ ವೆಚ್ಚದಲ್ಲಿ ಮತ್ತೊಂದು ಟರ್ಮಿನಲ್’ಗೆ ಭೂಮಿಪೂಜೆ ನೆರವೇರಿಸಲಾಗುತ್ತದೆ ಎಂದು ಸಚಿವ ಜೋಶಿ  ಧಾರವಾಡ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಪಕ್ಷಿ ನೋಟ ಬುಕ್ ಬಿಡುಗಡೆ ವೇಳೆ ಘೋಷಿಸಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News