/kannada/photo-gallery/englands-legendary-test-batsman-joe-root-will-break-sachin-tendulkar-4-world-records-249475 ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌!  ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌! 249475

ಶೀಘ್ರವೇ ಹೈಕಮಾಂಡ್ʼನಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್

Congress candidates First list: ಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

Written by - Prashobh Devanahalli | Last Updated : Mar 8, 2024, 04:05 PM IST
  • ಲೋಕಸಭೆ ಚುನಾವಣೆ 2024
  • ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ
  • ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ
ಶೀಘ್ರವೇ ಹೈಕಮಾಂಡ್ʼನಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್  title=

ನವದೆಹಲಿ: ಲೋಕಸಭೆ ಚುನಾವಣೆ ಸಂಬಂಧ ನಿನ್ನೆ ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಇತರ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಲಾಗಿದೆ. ಎಷ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ, ಯಾರ ಹೆಸರು ಅಂತಿಮವಾಗಿದೆ ಎಂದು ನಾನು ಬಹಿರಂಗಪಡಿಸಲು ತಯಾರಿಲ್ಲ. ಎಐಸಿಸಿ ನಾಯಕರು ಮೊದಲ ಪಟ್ಟಿ ಅಂತಿಮಗೊಳಿಸಿ ಶೀಘ್ರವೇ ಬಿಡುಗಡೆ ಮಾಡುತ್ತಾರೆ. ನಾವು ಸಭೆಯಲ್ಲಿ ಶೇ.50ರಷ್ಟು ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸ್ಥಾನದ ಬಗ್ಗೆ ಸಚಿವ ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಒಳ್ಳೆಯದಾಗಲಿ, ಆಸೆ ಪಡುವುದರಲ್ಲಿ ತಪ್ಪಿಲ್ಲ. ಯಾರ್ಯಾರೋ ಏನೇನೋ ಆಸೆ ಪಡುತ್ತಾರೆ. ಮಹದೇವಪ್ಪ ಅವರು ಆಸೆಪಡುವುದರಲ್ಲಿ ತಪ್ಪಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: Sudha Murthy: ರಾಜ್ಯಸಭಾ ಸದಸ್ಯೆಯಾಗಿ ಸುಧಾ ಮೂರ್ತಿ ನೇಮಕ 

ಅವರು ಎಐಸಿಸಿ ಅಧ್ಯಕ್ಷರು. ಅನೇಕರು ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಅವರ ಕ್ಷೇತ್ರದಲ್ಲಿ ಬೇರೆ ಹೆಸರು ಪ್ರಸ್ತಾಪಿಸಿಲ್ಲ. ಅವರು ದೇಶದಾದ್ಯಂತ ಪ್ರವಾಸವನ್ನು ಮಾಡಬೇಕಿದೆ. ಹೀಗಾಗಿ ಅಂತಿಮವಾಗಿ ಅಧ್ಯಕ್ಷರೇ ಸ್ಪರ್ಧೆ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು. 

ಸಚಿವರ ಸ್ಪರ್ಧೆ ಬಗ್ಗೆ ಚರ್ಚೆ ಆಗಿದೆಯೇ ಎಂಬ ಚರ್ಚೆ ಆಗಿದೆಯೇ, ಸಿಎಂ ಪುತ್ರ ಸ್ಪರ್ಧೆ ಮಾಡುತ್ತಾರಾ ಎಂದು ಕೇಳಿದಾಗ "ಆ ಬಗ್ಗೆ ಚರ್ಚೆ ಆಗಿಲ್ಲ ಎಂದು ತಿಳಿಸಿದರು. ರಾಜ್ಯದ ಜನತೆಗೆ ಶಿವರಾತ್ರಿ ಹಬ್ಬದ ಶುಭಾಶಯಗಳು. ಶಿವನ  ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಲಿ. ಬರಗಾಲದಿಂದ ರಾಜ್ಯ ಮುಕ್ತವಾಗಲಿ ಎಂದು ರಾಜ್ಯದ ಜನರ ಪರವಾಗಿ ಶಿವನಲ್ಲಿ ಪ್ರಾರ್ಥಿಸುತ್ತೇನೆ. 

ಇದನ್ನೂ ಓದಿ: ಯಲಹಂಕ ವಿದ್ಯುತ್ ಸ್ಥಾವರ ಘಟಕ ಸ್ಥಗಿತಕ್ಕೆ ಸ್ಥಳೀಯ ನಿವಾಸಿಗಳಿಂದ ಆಗ್ರಹ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.