All India Weather Report today: ಮುಂಬರುವ ವಾರದಲ್ಲಿ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚು ಸಹಿಯ ಲಘುವಾಗಿ ಮಧ್ಯಮ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ.
ಮಾರ್ಚ್ 9 ಮತ್ತು 10 ರಂದು ರಾಜಸ್ಥಾನ ಹೊರತುಪಡಿಸಿ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧಿಸುವ ಸಾಧ್ಯತೆಯಿದೆ. ಈ ಮಧ್ಯೆ ದೆಹಲಿಯಲ್ಲಿ ಕನಿಷ್ಠ ತಾಪಮಾನ 9.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಋತುವಿನ ಸರಾಸರಿಗಿಂತ ಐದು ಹಂತಗಳು ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ವಿಶ್ವಕಪ್’ನಲ್ಲಿ ಅಬ್ಬರಿಸಿ ಈಗ CSKಯಲ್ಲಿ ಮಿಂಚಲು ಸಿದ್ಧರಾದ ರಚಿನ್ ರವೀಂದ್ರ ಗರ್ಲ್ ಫ್ರೆಂಡ್ ಯಾರು ಗೊತ್ತಾ? ಈಕೆಯೂ ಭಾರತೀಯಳೇ!
ತಾಜಾ ಪಾಶ್ಚಿಮಾತ್ಯ ಅಡಚಣೆಯು ಮುಂದಿನ ವಾರ ಪಶ್ಚಿಮ ಹಿಮಾಲಯನ್ ಪ್ರದೇಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ಹೇಳಿದೆ.
ಮಾರ್ಚ್ 10 ಮತ್ತು 12 ರಂದು ಜಮ್ಮು-ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಮೇಲೆ ಚದುರಿದ ಲಘು ಮಳೆ ಅಥದಾ ಹಿಮಪಾತ ಸಂಭವಿಸಬಹುದು. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಅಪ್ಡೇಟ್ ನೀಡಿದೆ.
ಹಿಮಾಚಲ ಪ್ರದೇಶದಲ್ಲಿ ಮಾರ್ಚ್ 11 ರಿಂದ 13 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದ್ದು ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.
IMD ಪ್ರಕಾರ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ರಾಯಲಸೀಮಾ ಮತ್ತು ಒಡಿಶಾದ ಪ್ರತ್ಯೇಕ ಪ್ರದೇಶಗಳಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ.
ಇದನ್ನೂ ಓದಿ:ಅಂತಿಮ ಟೆಸ್ಟ್’ನಲ್ಲೂ ಭಾರತಕ್ಕೆ ಭರ್ಜರಿ ಜಯ: 112 ವರ್ಷಗಳ ಇತಿಹಾಸವನ್ನೇ ಬದಲಾಯಿಸಿದ ರೋಹಿತ್ ಪಡೆ
ಮಾರ್ಚ್ನಿಂದ ಮೇ ತಿಂಗಳವರೆಗೆ ಈ ಬೇಸಿಗೆಯಲ್ಲಿ ಕರ್ನಾಟಕವು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ವೀಕ್ಷಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್’ನಲ್ಲಿ ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ ದಾಟಬಹುದು ಮತ್ತು ಈ ತಿಂಗಳು ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.