Vijay Devarakonda Dating Rashmika Mandanna: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಬಹಳ ದಿನಗಳಿಂದ ಪ್ರೀತಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಬ್ಬರೂ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಎಂದಿಗೂ ಖಚಿತಪಡಿಸಿಲ್ಲ. ಆದರೆ ಈ ಬಾರಿ ಇತ್ತೀಚಿನ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಅಭಿಮಾನಿಗಳಲ್ಲಿ ಅನುಮಾನ ಹೆಚ್ಚಿಸಿದ್ದಾರೆ. ಇತ್ತೀಚೆಗೆ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಪಿಂಕ್ ಟೋಪಿ ಧರಿಸಿದ ಮುದ್ದಾದ ಫೋಟೋವನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ ಅವರು ನೀಲಿ ಸ್ವೆಟರ್ ಮತ್ತು ಕಪ್ಪು ಪೈಜಾಮಾ ಧರಿಸಿದ್ದರು.
ಇದನ್ನೂ ಓದಿ : ಅರ್ಜುನ್ ಕಪೂರ್ ಸಹೋದರಿ ಯಾರು ಗೊತ್ತಾ.. ಜಾನ್ವಿ ಕಪೂರ್ಗಿಂತಲೂ ಸುಂದರಿ ಈ ಬೆಡಗಿ !
ನಟಿ ರಶ್ಮಿಕಾ ಫೋಟೋವನ್ನು ಹಂಚಿಕೊಂಡ ಸ್ವಲ್ಪ ದಿನಗಳ ಬಳಿಕ ವಿಜಯ್ ದೇವರಕೊಂಡ (Vijay Devarakonda) ಅದೇ ಪಿಂಕ್ ಕ್ಯಾಪ್ ಧರಿಸಿರುವುದನ್ನು ಅಭಿಮಾನಿಗಳು ಗಮನಿಸಿದ್ದಾರೆ. ವಿಜಯ್ ಕಳೆದ ವರ್ಷ ಡಿಸೆಂಬರ್ನಲ್ಲಿ ಒಂದು ವಿಡಿಯೋವನ್ನು ಹಂಚಿಕೊಂಡಿದ್ದರು. ಅದರಲ್ಲಿ ವಿಜಯ್ ದೇವರಕೊಂಡ ಇದೇ ಗುಲಾಬಿ ಬಣ್ಣದ ಕ್ಯಾಪ್ ಧರಿಸಿ ನ್ಯೂಯಾರ್ಕ್ ಬೀದಿಗಳಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆದರೆ, ರಶ್ಮಿಕಾ ವಿಜಯ್ ಕ್ಯಾಪ್ ಧರಿಸಿದ್ದಾರೋ ಇಲ್ಲವೋ ಎಂಬುದು ದೃಢಪಟ್ಟಿಲ್ಲ.
ರಶ್ಮಿಕಾ ಮತ್ತು ವಿಜಯ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ (Vijay Devarakonda Dating Rashmika Mandanna) ಎಂಬ ವದಂತಿಗಳಿಗೆ ಈ ಫೋಟೋ ಪುಷ್ಠಿ ನೀಡಿದೆ. ರಶ್ಮಿಕಾ ಮತ್ತು ವಿಜಯ್ ತಮ್ಮ ಸಂಬಂಧವನ್ನು ಎಂದಿಗೂ ಸಾರ್ವಜನಿಕವಾಗಿ ಒಪ್ಪಿಕೊಂಡಿಲ್ಲ ಮತ್ತು ನಿರಾಕರಿಸಿಯೂ ಇಲ್ಲ. ಈ ಜೋಡಿ ‘ಗೀತಾ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ.
ಇದನ್ನೂ ಓದಿ : Toxic: ಶೂಟಿಂಗ್ ಪ್ರಾರಂಭವಾಗುವ ಮುನ್ನವೇ ಟಾಕ್ಸಿಕ್ ರಿಲೀಸ್ ಡೇಟ್ ಫಿಕ್ಸ್!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.