Lok Sabha Elections 2024 Dates : ಲೋಕ ಸಮರಕ್ಕೆ ಚುನಾವಣಾ ಆಯೋಗ ಸಂಪೂರ್ಣ ಸನ್ನದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ಪ್ರಸಕ್ತ ಲೋಕಸಭೆಯ ಅಧಿಕಾರಾವಧಿ ಜೂನ್ 16ಕ್ಕೆ ಕೊನೆಗೊಳ್ಳಲಿದೆ. 97 ಕೋಟಿಗೂ ಹೆಚ್ಚು ಮತದಾರರಿದ್ದು, ಸುಮಾರು 10.5 ಲಕ್ಷ ಮತಗಟ್ಟೆಗಳಲ್ಲಿ, 55 ಲಕ್ಷ ಇವಿಎಂಗಳು ಕಾರ್ಯನಿರ್ವಹಿಸಲಿವೆ.
ಪ್ರತಿ ಬೂತ್ನಲ್ಲಿ ವಿಶೇಷ ವ್ಯವಸ್ಥೆ : ಚುನಾವಣಾ ಸಮಯದಲ್ಲಿ ಪ್ರತಿ ಬೂತ್ನಲ್ಲಿ ಕುಡಿಯುವ ನೀರು ಮತ್ತು ರ್ಯಾಂಪ್ ವ್ಯವಸ್ಥೆ ಇರುತ್ತದೆ. ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು. ಅಲ್ಲದೆ, ಮತದಾರರ ಪಟ್ಟಿಯಲ್ಲಿ 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:
ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ : 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನದ ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್ಚೇರ್ ವ್ಯವಸ್ಥೆ ಇರಲಿದ್ದು, ಸ್ವಯಂಸೇವಕರೂ ಕಾರ್ಯನಿರ್ವಹಿಸಲಿದ್ದಾರೆ. ಅಲ್ಲದೆ, 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ರಾಜೀವ್ ಕುಮಾರ್ ಅವರು ತಿಳಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೆ ನಿಗಾ : ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳು, ಅಕ್ರಮ ಹಣ ಬಳಕೆ, ಸುಳ್ಳು ಸುದ್ದಿಗಳನ್ನು ಹರಡುವವರ ಮೇಲೆ ನಿಗಾವಹಿಸಲಾಗುವುದು. ರೈಲ್ವೆ ಸ್ಟೇಷನ್, ಏರ್ಪೋರ್ಟ್ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳನ್ನೂ ಸಹ ತಪಾಸಣೆಗೆ ಒಳಪಡಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು.
ಇದನ್ನೂ ಓದಿ:
ಪ್ರಚಾರದ ವೇಳೆ ಅಭ್ಯರ್ಥಿಗಳು ದ್ವೇಷ ಭಾಷಣ ಮಾಡುವಂತಿಲ್ಲ : ಚುನಾವಣಾ ಪ್ರಚಾರದ ಸಮಯದಲ್ಲಿ ಅಭ್ಯರ್ಥಿಗಳು ದ್ವೇಷ ಭಾಷಣ ಮಾಡಬಾರದು, ಶತ್ರುಗಳ ರೀತಿ ವರ್ತಿಸಬಾರದು. ಎಲ್ಲರೂ ಸ್ನೇಹದಿಂದ ನಡೆದುಕೊಳ್ಳಬೇಕು ಎಂದು ರಾಜೀವ್ ಕುಮಾರ್ ಕಡಕ್ ಸೂಚನೆ ನೀಡಿದರು.
ಏಪ್ರಿಲ್ 19 ರಂದು ಮತದಾನ..! 7 ಹಂತಗಳ : ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದೆ. ಜೂನ್ 4 ರಂದು ಫಲಿತಾಂಶ. ಮಾರ್ಚ್ 20 ರಂದು ಮೊದಲ ಹಂತದ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಏಪ್ರಿಲ್ 19 ರಂದು ಮತದಾನ..! 7 ಹಂತಗಳಲ್ಲಿ ಚುನಾವಣೆ
ಮೊದಲ ಹಂತದ ಮತದಾನ - ಏಪ್ರಿಲ್ 19
ಎರಡನೇ ಹಂತದ ಮತದಾನ - ಏಪ್ರಿಲ್ 26
ಮೂರನೇ ಹಂತದ ಮತದಾನ - ಮೇ 7
ನಾಲ್ಕನೇ ಹಂತದ ಮತದಾನ - ಮೇ 13
ನಾಲ್ಕನೇ ಹಂತದ ಮತದಾನ - ಮೇ 20
ಐದನೇ ಹಂತದ ಮತದಾನ - ಮೇ 25
ಐದನೇ ಹಂತದ ಮತದಾನ - ಜೂನ್ 1
ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.