Weather Update: ಇನ್ನೆರಡು ದಿನ ದೇಶದ ಈ ಭಾಗಗಳಲ್ಲಿ ಮಳೆ ಎಚ್ಚರಿಕೆ ನೀಡಿದ ಐಎಂಡಿ

Weather Update: ಮಾರ್ಚ್ 19 ರಿಂದ 20 ರ ಅವಧಿಯಲ್ಲಿ ದೇಶದ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದ್ದು, ಇನ್ನೂ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.   

Written by - Yashaswini V | Last Updated : Mar 19, 2024, 08:15 AM IST
  • ಉತ್ತರ ಕರ್ನಾಟಕದ ಪ್ರತ್ಯೇಕ ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ
  • ಬಿಹಾರದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆ ಸಾಧ್ಯತೆ
  • ಜಾರ್ಖಂಡ್, ಒಡಿಶಾ, ವಿದರ್ಭ, ಛತ್ತೀಸ್‌ಗಢ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ
Weather Update: ಇನ್ನೆರಡು ದಿನ ದೇಶದ ಈ ಭಾಗಗಳಲ್ಲಿ  ಮಳೆ ಎಚ್ಚರಿಕೆ ನೀಡಿದ ಐಎಂಡಿ title=

Today Weather Update Rain Alert: ಇನ್ನೆರಡು ದಿನ ಭಾರತದ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 19 ಮತ್ತು ಮಾರ್ಚ್ 20ರಂದು ಪೂರ್ವ, ಮಧ್ಯ ಮತ್ತು ದಕ್ಷಿಣ ಭಾರತದ ಕೆಲವೆಡೆ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಹವಾಮಾನ ಇಲಾಖೆಯ ಪ್ರಕಾರ,  ಇದೇ ವೇಳೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್‌ನಲ್ಲಿ ಮಾರ್ಚ್ 20 ರಿಂದ 23 ರವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಾರ್ಚ್ 19 ಮತ್ತು ನಂತರ ಮಾರ್ಚ್ 21 ರಿಂದ 23 ರ ಅವಧಿಯಲ್ಲಿ ಭಾರೀ ಹಿಮಪಾತದ ಮುನ್ಸೂಚನೆ ಇದೆ.

ಗಂಗಾನದಿ ಪಶ್ಚಿಮ ಬಂಗಾಳದ  ತೀರಗಳಲ್ಲಿ  ಮಾರ್ಚ್ 19 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಇದೇ ಸಂದರ್ಭದಲ್ಲಿ ಮಾರ್ಚ್ 20 ರಿಂದ 21 ರವರೆಗೆ  ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆ ಸಾಧ್ಯತೆ ಇದೇ ಎನ್ನಲಾಗಿದೆ. 

ಇದನ್ನೂ ಓದಿ- ಮಾರ್ಚ್ 31ರಿಂದ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ಇಂಡಿಗೋ ನೇರ ವಿಮಾನಯಾನ ಆರಂಭ

ಈಶಾನ್ಯ ಭಾರತದಲ್ಲಿ, ಹವಾಮಾನ ಇಲಾಖೆಯು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಾರ್ಚ್ 18-23 ರ ಅವಧಿಯಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಈ ರಾಜ್ಯಗಳಲ್ಲಿ ಆಲಿಕಲ್ಲು ಮಳೆ ಸಾಧ್ಯತೆ: 
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಮಾರ್ಚ್ 19 ರಂದು ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಆಲಿಕಲ್ಲು ಮಳೆಯಾಗುವ ನಿರೀಕ್ಷೆಯಿದೆ. ಇದಲ್ಲದೆ, ಮಾರ್ಚ್ 19 ರಿಂದ 21 ರವರೆಗೆ ಬಿಹಾರದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. 

ಕರ್ನಾಟಕದ ಹವಾಮಾನ ನವೀಕರಣ: 
ಉತ್ತರ ಕರ್ನಾಟಕದ ಪ್ರತ್ಯೇಕ ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ. ಇದಲ್ಲದೆ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಒಣ ಹವಾಮಾನದ ಮುಂದುವರೆಯಲಿದೆ. 

ಕರ್ನಾಟಕದ ಬಾಗಲಕೋಟೆ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಇದನ್ನೂ ಓದಿ- Aadhaar-Mobile Link: ಮೊಬೈಲ್ ಸಂಖ್ಯೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ ಗೊತ್ತೇ? ಈ ಸುಲಭ ವಿಧಾನವನ್ನು ತಿಳಿಯಿರಿ

ಮಾರ್ಚ್  21 ರವರೆಗೆ ತೆಲಂಗಾಣದಲ್ಲಿ ಗುಡುಗು ಮತ್ತು ಮಿಂಚು ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 18 ರಿಂದ 21 ರವರೆಗೆ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಊಹಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News