ಬೆಂಗಳೂರು : ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ,ವಿದ್ಯಾವಂತ,ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ಕೇವಲ ಸಚಿವರ ಮಕ್ಕಳಿಗೆ ಮಾತ್ರವಲ್ಲ, ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ ಅವರಿಗೆ ನೀಡಲು ಆಗುವುದಿಲ್ಲ. ಮೊದಲು ಆಸಕ್ತಿ, ಛಲ ಇರಬೇಕು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : Lok Sabha Election 2024 : ಲೋಕಸಭೆ ಚುನಾವಣೆಯ ಬಗೆಗಿನ ಕುತೂಹಲಕಾರಿ ಸಂಗತಿಗಳು ಇಲ್ಲಿವೆ
ಇಂದು ಸಂಜೆ ಅಂತಿಮ ಪಟ್ಟಿ :
“ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು ತಮಿಳುನಾಡು, ಉತ್ತರಪ್ರದೇಶದ ಪಟ್ಟಿ ಅಂತಿಮಗೊಳ್ಳುತ್ತಿದ್ದು ಇಂದು ಸಂಜೆ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಇಂದು ಸಂಜೆಯೇ ಎಲ್ಲಾ ಅಭ್ಯರ್ಥಿಗಳು ಮತ್ತು ಮಂತ್ರಿಗಳ ಜೊತೆ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.
ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಸಚಿವನಾಗಿದ್ದೇನೆ :
ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡುವುದಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಅವರ ರಾಜ್ಯದಲ್ಲಿ ಏನಾದರೂ ಮಾಡಿಕೊಳ್ಳಲಿ. ನಾನು ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
“ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಎರಡೂ ರಾಜ್ಯಗಳಿಗೆ ಉಪಯೋಗವಾಗುತ್ತದೆ.ಇಡೀ ದೇಶದ ಜನರು ಕರ್ನಾಟಕದಲ್ಲಿ ಇದ್ದಾರೆ. ಈ ಯೋಜನೆಯಿಂದ ಇಡೀ ದೇಶದ ಜನರಿಗೆ ಉಪಯೋಗವಾಗುತ್ತದೆ. ಮೇಕೆದಾಟು ಯೋಜನೆಯ ಪರವಾಗಿ ತಮಿಳುನಾಡು ಮಾತನಾಡುವ ಕಾಲ ಬರಲಿದೆ ಎಂದಿದ್ದಾರೆ.
ಇದನ್ನೂ ಓದಿ : Loksabha Election 2024: 472.01 ಲೀ. ಮದ್ಯ, 26.33 ಕೆ.ಜಿ ಬೆಳ್ಳಿ, 3.55 ಲಕ್ಷ ನಗದು ವಶಕ್ಕೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ