ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸ, ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ

ಜಿ.ಪರಮೇಶ್ವರ್ ಮತ್ತು ಆಪ್ತರ ಒಡೆತನದ ಮನೆ ಮತ್ತು ಶಿಕ್ಷಣ ಸಂಸ್ಥೆಗಳು, ಕಚೇರಿಗಳ ಮೇಲೆ ರಾಜ್ಯದ ಹಲವೆಡೆ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

Last Updated : Oct 10, 2019, 01:20 PM IST
ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸ, ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ title=

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಮತ್ತು ಆಪ್ತರ ಒಡೆತನದ ಮನೆ ಮತ್ತು ಶಿಕ್ಷಣ ಸಂಸ್ಥೆಗಳು, ಕಚೇರಿಗಳ ಮೇಲೆ ರಾಜ್ಯದ ಹಲವೆಡೆ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಸದಾಶಿವ ನಗರದಲ್ಲಿರುವ ನಿವಾಸ, ತುಮಕೂರಿನಲ್ಲಿರುವ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜು, ನೆಲಮಂಗಲದಲ್ಲಿರುವ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಲಾಗಿದೆ.

ಪರಮೇಶ್ವರ್ ಅವರ ಆಪ್ತ, ಮಾಜಿ ಸಚಿವ ಆರ್.ಎಲ್.ಜಾಲಪ್ಪ ಒಡೆತನದ ನಿವಾಸ, ಕೋಲಾರ ಹೊರವಲಯದಲ್ಲಿರುವ ದೇವರಾಜ ಅರಸು ವೈದ್ಯಕೀಯ ಕಾಲೇಜು, ಆರ್.ಎಲ್.ಜಾಲಪ್ಪ ಆಸ್ಪತ್ರೆ, ದೊಡ್ಡಬಳ್ಳಾಪುರದ ಸೋಮೇಶ್ವರ ನಗರದಲ್ಲಿರುವ ಆರ್.ಜಾಲಪ್ಪ ಪುತ್ರ ರಾಜೇಂದ್ರ ಅವರ ನಿವಾಸದಲ್ಲೂ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದ್ದು, ಹಲವು ದಾಖಲೆಗಳ ಪರಿಶೀಲನೆ ನಡೆಸಿ, ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

 

Trending News