ಬೆಂಗಳೂರಿನಲ್ಲಿ ಉದ್ಯೋಗಾವಕಾಶ!; ತಿಂಗಳಿಗೆ 25 ಲಕ್ಷ ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿ

IIM Bangalore Recruitment 2024: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Mar 23, 2024, 11:04 PM IST
  • ಬೆಂಗಳೂರಿನ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್‌ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ
  • ಅನೇಕ ಟೆಕ್ನೋ-ಫಂಕ್ಷನಲ್ ಸ್ಪೆಷಲಿಸ್ಟ್​-ಪೀಪಲ್ ಸಾಫ್ಟ್​ ಕ್ಯಾಂಪಸ್ ಸೊಲ್ಯೂಶನ್ಸ್​​ ಹುದ್ದೆಗಳು ಖಾಲಿ
  • ಮಾರ್ಚ್​ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಬೆಂಗಳೂರಿನಲ್ಲಿ ಉದ್ಯೋಗಾವಕಾಶ!; ತಿಂಗಳಿಗೆ 25 ಲಕ್ಷ ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿ title=
Job Openings

Indian Institute of Management Bangalore Recruitment 2024: ಬೆಂಗಳೂರಿನ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್‌ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅನೇಕ ಟೆಕ್ನೋ-ಫಂಕ್ಷನಲ್ ಸ್ಪೆಷಲಿಸ್ಟ್​-ಪೀಪಲ್ ಸಾಫ್ಟ್​ ಕ್ಯಾಂಪಸ್ ಸೊಲ್ಯೂಶನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್​ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ : ಮಾರ್ಚ್‌ 28ರವರೆಗೆ ED ಕಸ್ಟಡಿಗೆ ದೆಹಲಿ ಸಿಎಂ

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅನುಭವ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಪೀಪಲ್​ಸಾಫ್ಟ್​ ಕ್ಯಾಂಪಸ್ ಸೊಲ್ಯೂಶನ್ಸ್​ನಲ್ಲಿ ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ವೇತನ: ವಾರ್ಷಿಕ ಸ್ಯಾಲರಿ ಪ್ಯಾಕೇಜ್ 25 ಲಕ್ಷ ರೂ. ಇರುತ್ತದೆ

ಉದ್ಯೋಗದ ಸ್ಥಳ: ಬೆಂಗಳೂರು

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.  

ಇದನ್ನೂ ಓದಿ: ಮೆಟ್ರೋ ರೈಲು ಸಂಚಾರದ ಅವಧಿಯಲ್ಲಿ ಬದಲಾವಣೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News