IPL 2024, RCB vs DC: ಇಂಡಿಯನ್ ಪ್ರೀಮಿಯರ್ ಲೀಗ್ 2024 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪಂಜಾಬ್ ಕಿಂಗ್ಸ್ (PBKS) ನಡುವೆ ಇಂದು ಸಂಜೆ 7.30 ಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ 2024ರಲ್ಲಿ ಇದುವರೆಗೆ ಕೇವಲ ಒಂದು ಪಂದ್ಯವನ್ನು ಆಡಿದೆ. ಆದರೆ ಈ ಪಂದ್ಯವು ಕಳಪೆ ಬೌಲಿಂಗ್ ಕಾರಣದಿಂದ ಸೋಲು ಕಾಣುವಂತೆ ಮಾಡಿತ್ತು. ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧ ಉತ್ತಮ ಪ್ರದರ್ಶನ ನೀಡಬೇಕಾಗಿದೆ.
ಇದನ್ನೂ ಓದಿ: ಇದೇ ತಂಡ ಈ ಬಾರಿ IPL 2024ರ ಟ್ರೋಫಿ ಗೆಲ್ಲುತ್ತದೆ: ಭವಿಷ್ಯ ನುಡಿದ ರಾಬಿನ್ ಉತ್ತಪ್ಪ
ಚಿನ್ನಸ್ವಾಮಿ ಸ್ಟೇಡಿಯಂನ ಶಾರ್ಟ್ ಬೌಂಡರಿ ಹಾಗೂ ವೇಗದ ಔಟ್ ಫೀಲ್ಡ್’ನಲ್ಲಿ ಕಠಿಣ ಪರಿಸ್ಥಿತಿ ಎದುರಿಸಲು ಆರ್’ಸಿಬಿಯ ಸ್ಪಿನ್ನರ್’ಗಳು ಸಿದ್ಧರಾಗಬೇಕಿದೆ. ಈ ಕ್ರೀಡಾಂಗಣದಲ್ಲಿ, ಹೆಚ್ಚಿನ ಸಂದರ್ಭಗಳಲ್ಲಿ ತಂಡವು ಇನ್ನಿಂಗ್ಸ್‌ನಲ್ಲಿ 200 ಕ್ಕೂ ಹೆಚ್ಚು ರನ್ ಗಳಿಸಿದೆ.
ಇನ್ನೊಂದೆಡೆ ಈ ಪಂದ್ಯದಲ್ಲಿ ಆರ್ ಸಿ ಬಿ ವೇಗದ ಬೌಲರ್’ಗಳು ಪಂಜಾಬ್ ಕಿಂಗ್ಸ್ ವಿರುದ್ಧ ಜವಾಬ್ದಾರಿಯುತವಾಗಿ ಆಡಬೇಕಾಗಿದೆ. ಸಿ ಎಸ್ ಕೆ ವಿರುದ್ಧದ ಪಂದ್ಯದಲ್ಲಿ ಸೋಲುಂಡ ಬೆಂಗಳೂರು ಸದ್ಯ ಪಾಯಿಂಟ್ ಟೇಬಲ್’ನಲ್ಲಿ ಕುಸಿತ ಕಂಡಿದೆ. ಪ್ಲೇ ಆಫ್ ಹಂತ ಪ್ರವೇಶಿಸಬೇಕಾದರೆ ಪ್ರತಿ ಪಂದ್ಯವೂ ಮುಖ್ಯವಾಗುತ್ತದೆ.
ಚಿನ್ನಸ್ವಾಮಿ ಪಿಚ್ ವರದಿ:
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಮೂರು ಪದರಗಳಿಂದ ಮಾಡಲಾಗಿದ್ದು, ಮೊದಲ ಪದರ ಕೆಂಪು ಮಣ್ಣು ಮತ್ತು ಮರಳಿನಿಂದ ಮಾಡಲ್ಪಟ್ಟಿದೆ, ಎರಡನೇ ಪದರ ಕಪ್ಪು ಮಣ್ಣಿನಿಂದ ಮತ್ತು ಮೂರನೇ ಪದರವನ್ನು ಸಾಮಾನ್ಯ ಮಣ್ಣಿನಿಂದ ಮಾಡಲಾಗಿದೆ. ಈ ರೀತಿಯ ಪಿಚ್ ಉತ್ತಮ ಬೌನ್ಸ್ ಮತ್ತು ವೇಗವನ್ನು ಒದಗಿಸುತ್ತದೆ. ಜೊತೆಗೆ ಇದು ಬ್ಯಾಟ್ಸ್‌ಮನ್‌ಗಳು ಮತ್ತು ವೇಗದ ಬೌಲರ್‌ಗಳಿಗೆ ಸಹಾಯಕ. ಈ ಪಿಚ್‌ನಲ್ಲಿ ವೇಗದ ಬೌಲರ್‌ಗಳು ಉತ್ತಮ ವಿಕೆಟ್‌ಗಳನ್ನು ಪಡೆಯುತ್ತಾರೆ.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಉತ್ತಮ ರನ್ ಗಳಿಸುವ ಬ್ಯಾಟಿಂಗ್ ಪಿಚ್ ಆಗಿದೆ. ಈ ಪಿಚ್‌ನಲ್ಲಿ ದೊಡ್ಡ ಸ್ಕೋರ್‌ಗಳನ್ನು ಸಹ ಮಾಡಬಹುದು. ಆದರೆ ಕೆಲವೊಮ್ಮೆ ಅಲ್ಪ ಮೊತ್ತ ಕಲೆ ಹಾಕಿರುವುದು ಕೂಡ ಇದೆ. ಈ ಪಿಚ್‌ನಲ್ಲಿ, ಮೊದಲ ಇನ್ನಿಂಗ್ಸ್’ನ ಸರಾಸರಿ ಸ್ಕೋರ್ 155 ರನ್ ಮತ್ತು ಎರಡನೇ ಇನ್ನಿಂಗ್ಸ್’ನ ಸರಾಸರಿ ಸ್ಕೋರ್ 146 ರನ್ ಆಗಿದೆ.
ಇದನ್ನೂ ಓದಿ:Video: ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮುನ್ನ ಹೊಡೆದಾಡಿಕೊಂಡ ವಿರಾಟ್-ಡುಪ್ಲೆಸಿಸ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು
ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯ್ಯಾಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮೊರೊರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವಿಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಲ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ