Dharmastala: ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;
“ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ”
ಇದನ್ನೂ ಓದಿ-Chamarajanagar: ಇಲ್ಲೊಂದು ಪುರುಷರ ಬಳಿಕ ಮಹಿಳೆಯರು ತೇರು ಎಳೆಯುವ ವಿಶೇಷ ಜಾತ್ರೆ..!
ಲೋಕಸಭೆ ಚುನಾವಣೆ ತಯಾರಿ ಹೇಗಿದೆ ಎಂದು ಕೇಳಿದಾಗ, “ನಾನೀಗ ಮಂಜುನಾಥನ ಸನ್ನಿಧಿಯಲ್ಲಿ ಇದ್ದೇನೆ. ಧರ್ಮಸ್ಥಳ ಹಾಗೂ ಮಂಜುನಾಥನ ಶಕ್ತಿಯನ್ನು “ಮಾತು ಬಿಡದ ಮಂಜುನಾಥ” ಎಂದೇ ಬಣ್ಣಿಸುತ್ತಾರೆ. ಅದೇ ರೀತಿ ನಾವು ಕೂಡ ಚುನಾವಣೆಗೂ ಮುನ್ನ ಕೊಟ್ಟ ಮಾತನ್ನು ಬಿಡದೆ ಪಾಲಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದಿದ್ದೇವೆ, ಜನರ ಮಧ್ಯೆ ಹೋಗಿ ನಮಗೆ ಮತ್ತಷ್ಟು ಹೆಚ್ಚಿನ ಶಕ್ತಿ ಕೊಡಿ ಎಂದು ಮತ ಕೇಳುತ್ತೇವೆ. ಈ ದೇವರು ನಮಗೆ ನುಡಿದಂತೆ ನಡೆಯಲು ಶಕ್ತಿ ನೀಡಿರುವುದೇ ನಮ್ಮ ಭಾಗ್ಯ.
ನಾವು ನಮ್ಮ ಕೆಲಸ ಮಾಡಿದ್ದೇವೆ. ಇದರ ಮೇಲೆ ಜನ ತೀರ್ಮಾನ ಮಾಡುತ್ತಾರೆ. ಮಹಿಳೆಯರು ಇಲ್ಲಿಗೆ ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡಿ ಬರುತ್ತಿದ್ದಾರೆ. ಆ ಮೂಲಕ ತೀರ್ಥಯಾತ್ರೆ ಧರ್ಮ ಯಾತ್ರೆ ನಡೆಯುತ್ತಿದೆ. ಇದಕ್ಕೆ ಜನ ಕೊಟ್ಟ ಶಕ್ತಿ ಕಾರಣ. ನಾವು ಜನರ ಋಣ ತೀರಿಸಿದ್ದೇವೆ. ಜನರೂ ಕೂಡ ಉಪಕಾರ ಸ್ಮರಣೆ ಇಟ್ಟುಕೊಳ್ಳುವ ವಿಶ್ವಾಸವಿದೆ” ಎಂದು ತಿಳಿಸಿದರು.
ಇದನ್ನೂ ಓದಿ-Lok Sabha Election 2024: "ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರೇಕೆ ನಂಬುತ್ತಾರೆ?"
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.